ETV Bharat / state

ಬಿಜೆಪಿಗರಿಂದ ಕೈ ಕಾರ್ಯಕರ್ತರ ಮೇಲೆ ಹಲ್ಲೆಆರೋಪ: ಪೊಲೀಸ್‌ ಠಾಣೆ ಮುಂದೆ ಕಾಂಗ್ರೆಸ್​ ಪ್ರತಿಭಟನೆ - Bengaluru Congress activists accused of assault

ಪ್ರಚಾರ ಕಾರ್ಯಕ್ರಮದ ವೇಳೆ ಕಾರ್ಯಕರ್ತರು ಮತ್ತು ತಮ್ಮ ಮೇಲೆ ಬಿಜೆಪಿ ಕಾರ್ಪೋರೇಟರ್​ ಮತ್ತು ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಂದಿನಿ ಲೇಔಟ್ ಪೊಲೀಸ್ ಠಾಣೆ ಎದುರು ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Congress Protest against BJP in Bengaluru
ಕಾಂಗ್ರೆಸ್​ ನಾಯಕರಿಂದ ಪ್ರತಿಭಟನೆ ನಡೆಯಿತು
author img

By

Published : Oct 21, 2020, 1:17 PM IST

Updated : Oct 21, 2020, 2:48 PM IST

ಬೆಂಗಳೂರು : ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಬಿಜೆಪಿ ಮುಖಂಡರಿಂದ ಹಲ್ಲೆ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಲಕ್ಷ್ಮೀದೇವಿನಗರ ಬೂತ್ ನಂಬರ್ 156 ಬಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕುಸುಮಾ ಪ್ರಚಾರ ನಡೆಸುತ್ತಿದ್ದ ವೇಳೆ, ಕಾಂಗ್ರೆಸ್ ವಾರ್ಡ್ ಅಧ್ಯಕ್ಷ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು ಇತರ ಮುಖಂಡರ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನಂ ನಾಯ್ಡು ಬೆಂಬಲಿಗ ವೇಲು ನಾಯ್ಕರ್ ಮತ್ತು 30 ಕ್ಕೂ ಹೆಚ್ಚು ಜನರು ಹಲ್ಲೆ ನಡೆಸಿದ್ದಾರೆ. ಬೂತ್ ಮಟ್ಟದಲ್ಲಿ ಮತದಾರರಿಗೆ ಗುರುತಿನ ಚೀಟಿ ವಿತರಣೆ ನಡೆಸಲು ಸಂಗ್ರಹಿಸಿದ್ದ ಮಾಹಿತಿ ಪುಸ್ತಕ ಹರಿದು ಹಾಕಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ನಗರದ ನಂದಿನಿ ಲೇಔಟ್ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್​ ನಾಯಕರಿಂದ ಪ್ರತಿಭಟನೆ ನಡೆಯಿತು

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಮುನಿರತ್ನಂ ಬೆಂಬಲಿಗ ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್​ರಿಂದ ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ಆಗಿದೆ. ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಂಸದ ಡಿ.ಕೆ ಸುರೇಶ್, ಮಾಜಿ ಸಚಿವ ರಾಮಲಿಂಗ ರೆಡ್ಡಿ, ಎಚ್.ಎಂ.ರೇವಣ್ಣ ನಂದಿನಿ ಲೇಔಟ್ ಠಾಣೆಗೆ ದೂರು ನೀಡಿದರು ಹಾಗೂ ಕಾರ್ಯಕರ್ತರ ಜೊತೆ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದರು.

ಹಲ್ಲೆ ನಡೆಸಿದ ಸಂದರ್ಭದ್ದೂ ಎನ್ನಲಾದ ಸಿಸಿಟಿವಿ ದೃಶ್ಯ

ಹಿರಿಯ ಕಾಂಗ್ರೆಸ್​ ನಾಯಕರಾದ ಹೆಚ್.ಎಂ.ರೇವಣ್ಣ, ಮಾಜಿ ಸಂಸದ ಧೃವ ನಾರಾಯಣ್, ಮಾಜಿ ಶಾಸಕ ಬಾಲರಾಜ್, ಮಾಜಿ ಬಿಬಿಎಂಪಿ ಸದಸ್ಯ ಶಿವರಾಜ್, ಕಾಂಗ್ರೆಸ್ ಮುಖಂಡ ಆರಾಧ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಕಾನೂನು ವಿಭಾಗದ ಸೂರ್ಯ ಮುಕುಂದರಾಜ್, ಚೇತನ್ ಶಂಕರಪ್ಪ ಮತ್ತು ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Last Updated : Oct 21, 2020, 2:48 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.