ETV Bharat / state

ಮಾತು ಮರೆತ ಮೋದಿ, ಅನಗತ್ಯವಾಗಿ ಜನರ ಮೇಲೆ ಆರ್ಥಿಕ ಹೊರೆ: ಕಾಂಗ್ರೆಸ್ ನಾಯಕರ ಆಕ್ರೋಶ - Bangalore latest news

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಜ್ಯ ಕಾಂಗ್ರೆಸ್ ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು.

congress-protest-against-bjp-govt-in-bangalore
ಕಾಂಗ್ರೆಸ್ ನಾಯಕರ ಆಕ್ರೋಶ
author img

By

Published : Feb 9, 2021, 3:12 PM IST

Updated : Feb 9, 2021, 4:39 PM IST

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಇಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಜ್ಯ ಕಾಂಗ್ರೆಸ್ ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮಾತನಾಡಿ, ಯುಪಿಎ ಸರ್ಕಾರದ ಅವಧಿಯಲ್ಲಿ ಇಂಧನ ಬೆಲೆ ಕಡಿಮೆ ಇತ್ತು. ಕಚ್ಚಾತೈಲದ ಬೆಲೆ ಹೆಚ್ಚಿದ್ದರು. ಇಂಧನ ಬೆಲೆ ಏರಿಕೆಯನ್ನು ನಿಯಂತ್ರಿಸಿ ಇಡಲಾಗಿತ್ತು. ಆದರೆ, ಅಲ್ಪ ಸ್ವಲ್ಪ ಏರಿಕೆಯನ್ನು ಖಂಡಿಸಿದ್ದ ಬಿಜೆಪಿ ನಾಯಕರು ಇಂದು ಅಧಿಕಾರದಲ್ಲಿದ್ದು, ಹಿಂದೆ ತಾವು ನೀಡಿದ್ದ ಹೇಳಿಕೆಯನ್ನೇ ಮರೆತು ಅಪಾರ ಪ್ರಮಾಣದಲ್ಲಿ ಇಂಧನ ಬೆಲೆ ಏರಿಕೆ ಮಾಡುತ್ತಿದ್ದಾರೆ. ಕಚ್ಚಾತೈಲದ ಬೆಲೆ ಗಣನೀಯವಾಗಿ ಇಳಿದಿದ್ದರೂ ಸಹ ಎಂದು ಸರ್ಕಾರ ಬೆಲೆ ಇಳಿಕೆಯ ಬಗ್ಗೆ ಚಿಂತನೆ ನಡೆಸುತ್ತಿಲ್ಲ ಎಂದರು.

ಕಾಂಗ್ರೆಸ್ ನಾಯಕರ ಆಕ್ರೋಶ

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾತನಾಡಿ, ಕಳೆದು ಒಂದು ವರ್ಷದಿಂದ ಕೊರೊನಾ ಮಹಾಮಾರಿ ದೇಶಾದ್ಯಂತ ಸಾಕಷ್ಟು ಹಾನಿಯನ್ನು ಉಂಟು ಮಾಡಿದೆ. ಈ ಮಧ್ಯೆ ಎಲ್ಲ ವಿಧದ ಇಂಧನಗಳ ಬೆಲೆ ಏರಿಕೆ ಮೂಲಕ ಕೇಂದ್ರ ಸರ್ಕಾರ ಗಾಯದ ಮೇಲೆ ಬರೆ ಎಳೆಯುವ ಕಾರ್ಯ ಮಾಡಿದೆ. ಕೇಂದ್ರ ಸರ್ಕಾರ ಈಗ ಹೇರಿರುವ ಹೆಚ್ಚುವರಿ ತೆರಿಗೆ ಹಿಂಪಡೆದು, ಇಂಧನ ಬೆಲೆಯನ್ನು ಇನ್ನಷ್ಟು ಇಳಿಸುವ ಕಾರ್ಯ ಮಾಡಬೇಕು ಎಂದು ಒತ್ತಾಯಿಸಿದರು.

ಮಾಜಿ ಸಚಿವ ಎಂ. ಕೃಷ್ಣಪ್ಪ ಮಾತನಾಡಿ, ಇಂದು ಪ್ರತಿಯೊಬ್ಬ ನಾಗರಿಕರ ನಿತ್ಯದ ಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದೆ. ಬಡವರು ತಮ್ಮ ಕಷ್ಟ ಯಾರಿಗೆ ಹೇಳಿಕೊಳ್ಳಬೇಕು? ಅಡುಗೆ ಅನಿಲ ಬೆಲೆಯನ್ನು ₹800 ಗೆ ಏರಿಕೆ ಮಾಡಿ ಜನರಿಂದ ಸುಲಿಗೆ ಮಾಡುವ ಕಾರ್ಯವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದರು.

ಕೆಪಿಸಿಸಿ ಮಾಜಿ ಅಧ್ಯಕ್ಷ ಹಾಗೂ ತಮಿಳುನಾಡು ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಮಾತನಾಡಿ, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅಚ್ಚೇದಿನ್ ಬರುತ್ತದೆ ಎಂದು ಮೋದಿ ಚುನಾವಣೆಗೂ ಮುನ್ನ ಹೇಳಿದ್ದರು. ಅವರು ಅಧಿಕಾರಕ್ಕೆ ಬಂದು ಆರು ವರ್ಷ ಕಳೆದಿದೆ. ಅಚ್ಚೇದಿನ್ ಯಾರಿಗೆ ಬಂದಿದೆ ಎನ್ನುವುದನ್ನು ಒಮ್ಮೆ ಯೋಚಿಸಿ ನೋಡಿ ಎಂದರು.

ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಹಲವು ಮುಖಂಡರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Last Updated : Feb 9, 2021, 4:39 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.