ETV Bharat / state

ಸಿ ಟಿ ರವಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ - ಸಿ ಟಿ ರವಿ ಕಾಂಗ್ರೆಸ್​ ಬಗ್ಗೆ ಹೇಳಿಕೆ

ಸಿ ಟಿ ರವಿ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಅವರ ವಿರುದ್ಧ ಕಪ್ಪುಪಟ್ಟಿ ಪ್ರದರ್ಶಿಸಿ ಎಲ್ಲೆಡೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕಾಂಗ್ರೆಸ್‌ ಕಾರ್ಯಕರ್ತರು ಎಚ್ಚರಿಕೆ ನೀಡಿದರು.

Congress protest
ಕಾಂಗ್ರೆಸ್ ಪ್ರತಿಭಟನೆ
author img

By

Published : Dec 23, 2022, 8:24 PM IST

ಸಿ ಟಿ ರವಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಸಿ ಟಿ ರವಿ ಅವರು ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ಅಸಂಸದೀಯ ಪದ ಬಳಸಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ನಾಯಕರು ಇಂದು ಪೊರಕೆ ಚಳುವಳಿ ನಡೆಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್​ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಸಿ ಟಿ ರವಿಯವರನ್ನು ಕೂಡಲೇ ಗಡಿಪಾರು ಮಾಡಬೇಕು. ಇಲ್ಲವೇ ಅವರು ಕಾಂಗ್ರೆಸ್​ ನಾಯಕರಲ್ಲಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಇದನ್ನೂ ಓದಿ:ಅಶೋಕ್ 50 ಸೀಟು ಗೆಲ್ಲಿಸಿಕೊಂಡು ಬರಲಿ,‌ ಆಮೇಲೆ ಮೀಸಲಾತಿ ಕೊಡೋಣ: ಯತ್ನಾಳ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.