ETV Bharat / state

ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ: ಕೇಂದ್ರದ ವಿರುದ್ಧ ಕಾಂಗ್ರೆಸ್ ವಿನೂತನ ಪ್ರತಿಭಟನೆ

ವಾಣಿಜ್ಯ ಬಳಕೆಯ ಹಾಗೂ ಅಡುಗೆ ಅನಿಲದ ಬೆಲೆ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರ - ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ನಾಯಕರಿಂದ ವಿನೂತನ ಪ್ರತಿಭಟನೆ

Congress protest against the Centre
ಗ್ಯಾಸ್ ಸಿಲಿಂಡರ್ ಬೆಲೆ ಹೆಚ್ಚಳ: ಕೇಂದ್ರದ ವಿರುದ್ಧ ಕಾಂಗ್ರೆಸ್ ವಿನೂತನ ಪ್ರತಿಭಟನೆ
author img

By

Published : Mar 1, 2023, 7:36 PM IST

ಬೆಂಗಳೂರು: ವಾಣಿಜ್ಯ ಬಳಕೆಯ ಹಾಗೂ ಅಡುಗೆ ಅನಿಲದ ಬೆಲೆ ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಯುವ ಕಾಂಗ್ರೆಸ್ ನಾಯಕರು ಇಂದು ನಗರದಲ್ಲಿ ವಿನೂತನ ಪ್ರತಿಭಟನೆ ನಡೆಸಿದರು. ಬೆಂಗಳೂರಿನ ರೇಸ್​ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ಪ್ರತಿಭಟನೆ ನಡೆಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್​. ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಏರಿಸಿರುವ ಬೆಲೆ ಏರಿಕೆಯನ್ನು ಇಳಿಸಬೇಕು ದೇಶದ ಜನರಿಗೆ ಅಚ್ಚೆ ದಿನ್ ಹೆಸರಿನಲ್ಲಿ ಮೋಸ ಮಾಡುತ್ತಿರುವ ನರೇಂದ್ರ ಮೋದಿ ಸರ್ಕಾರ ತೊಲಗಬೇಕು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮ್, ಸ್ಮೃತಿ ಇರಾನಿ ರವರ ಮುಖವಾಡ ಧರಿಸಿ ವಿನೂತನ ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ನಿರಂತರವಾಗಿ ಅಡುಗೆ ಅನಿಲ ದರವನ್ನು ಏರುಸುತ್ತಲೇ ಇದೆ. ದೇಶದ ಜನರಿಗೆ ಅಚ್ಛೇದೀನ್ ಎಂಬ ಆಸೆಯನ್ನು ಹುಟ್ಟಿಸಿ ಜನರನ್ನ ಮೋಸಗೊಳಿಸುತ್ತಿರುವ ದೇಶದ ಪ್ರಥಮ ಪ್ರಧಾನಿ ಎಂದರೆ ಅದು ನರೇಂದ್ರ ಮೋದಿ ಎಂದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಏರಿಸುತ್ತಿರುವ ನರೇಂದ್ರ ಮೋದಿ ಸರ್ಕಾರ ಬೆಲೆಯನ್ನು ಇಳಿಸುವ ಒಂದು ಅಂಶದ ಕಾರ್ಯಕ್ರಮವನ್ನು ಇಲ್ಲಿವರೆಗೂ ಸಹ ರೂಪಿಸಿಲ್ಲ ಎಂದು ಕಾರ್ಯಕರ್ತರು ದೂರಿದರು.

ನರೇಂದ್ರ ಮೋದಿ ಬೆಲೆ ಏರಿಕೆ ಮಾಡಿ ಜನರ ಜೀವವನ್ನು ಹಿಂಡುತ್ತಿದ್ದಾರೆ: ಎಸ್. ಮನೋಹರ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಯುಪಿಎ ಅವಧಿಯಲ್ಲಿ 450 ಇದ್ದ ಅಡುಗೆ ಅನಿಲ ಸಿಲಿಂಡರ್ ಇಂದು 1105 ಆಗಿದೆ. ವಾಣಿಜ್ಯ ಅನಿಲ ಸಿಲಿಂಡರ್​ ಬೆಲೆ ಒಂದೇ ದಿನ ಇಂದು 350ರೂ ಏರಿಕೆ ಆಗಿದೆ. ಇದರಿಂದ ಜನಸಾಮಾನ್ಯರ ಬದುಕು ಸಾಗಿಸುವುದು ಅತ್ಯಂತ ಕಷ್ಟಕರವಾಗಿದೆ, ನರೇಂದ್ರ ಮೋದಿ ಸರ್ಕಾರ ದೇಶದಿಂದ ತೊಲಗದೇ ಹೋದರೆ ಜನರ ಬದುಕು ಅತ್ಯಂತ ಸಂಕಷ್ಟದಲ್ಲಿ ಮುಳುಗಿ ಹೋಗುತ್ತದೆ. ಜನರ ಸಮಸ್ಯೆಯನ್ನ ಅರಿಯದ ನರೇಂದ್ರ ಮೋದಿ ಬೆಲೆ ಏರಿಕೆ ಮಾಡಿ ಜನರ ಜೀವವನ್ನು ಹಿಂಡುತ್ತಿದ್ದಾರೆ ಎಂದು ಆರೋಪಿಸಿದರು.

ಕೇಂದ್ರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಸಾರಿ ಅಡುಗೆ ಅನಿಲ ಹಾಗೂ ವಾಣಿಜ್ಯ ಬಳಕೆಯ ಅನಿಲದ ಬೆಲೆ ಹೆಚ್ಚಿಸಿದೆ. ಇಂದು ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 50 ರೂ. ಹೆಚ್ಚಳ ಮಾಡಲಾಗಿದೆ. ಇದರಿಂದ ಬೆಂಗಳೂರಿನ ಗ್ರಾಹಕರು ಇನ್ನು ಮೇಲೆ 14.2 ಕೆ.ಜಿ ತೂಕದ ಸಿಲಿಂಡರ್ ಬೆಲೆ 1002.50 ರೂಪಾಯಿ ನೀಡಬೇಕಾಗಲಿದೆ. ಈ ತಿಂಗಳ ಆರಂಭದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ಮೇ 1 ರಂದು, ವಾಣಿಜ್ಯ ಬಳಕೆಯ 19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ 102.50 ರೂ. ಹೆಚ್ಚಳ ಮಾಡುವ ಮೂಲಕ 2355.50 ರೂ.ಗೆ ಏರಿಸಲಾಗಿತ್ತು. ಅಲ್ಲದೇ, 5 ಕೆ.ಜಿ ಸಿಲಿಂಡರ್‌ನ ಬೆಲೆಯನ್ನು 655 ರೂ.ಗೆ ಹೆಚ್ಚಿಸಲಾಗಿತ್ತು.

ಏಪ್ರಿಲ್ 1 ರಂದು, 19 ಕೆ.ಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಪ್ರತಿ ಸಿಲಿಂಡರ್‌ ಬೆಲೆಯಲ್ಲಿ 250 ರೂ. ಏರಿಕೆ ಮಾಡಲಾಗಿತ್ತು. ಮಾರ್ಚ್ 1 ರಂದು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 105 ರಷ್ಟು ಹೆಚ್ಚಳವಾಗಿದ್ದನ್ನು ಗಮನಿಸಬಹುದಾಗಿದೆ. ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಅಡುಗೆ ಅನಿಲ ಬೆಲೆ ಏರುವುದಿಲ್ಲ ಎಂದು ಭಾವಿಸಿದ್ದ ನಾಗರಿಕರಿಗೆ ಭ್ರಮನಿರಸನ ಉಂಟಾಗಿದೆ.

ಇದನ್ನೂ ಓದಿ:ಬಿಜೆಪಿ ಅಶ್ವಮೇಧ ಕುದುರೆ ಕಟ್ಟಿಹಾಕಲು ಕಾಂಗ್ರೆಸ್​ಗೆ ಅಸಾಧ್ಯ: ಕಂದಾಯ ಸಚಿವ ಆರ್ ಅಶೋಕ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.