ETV Bharat / state

ಇಡಿ ಕಚೇರಿ ಎದುರು ಕಾಂಗ್ರೆಸ್​ ಪ್ರತಿಭಟನೆ.. ಸಿದ್ದರಾಮಯ್ಯ ಸೇರಿ ಹಲವರನ್ನ ವಶಕ್ಕೆ ಪಡೆದ ಪೊಲೀಸರು! - ಇಡಿ ಕಚೇರಿ ತಲುಪಿದ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರಿನ ಇಡಿ ಕಚೇರಿ ಎದುರು ಪ್ರತಿಭಟಿಸುತ್ತಿದ್ದ ಕಾಂಗ್ರೆಸ್​ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Siddaramaiah including Congress leader detained by police, Bengaluru congress protest, Congress protest reach ED office, Bengaluru news, ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು, ಬೆಂಗಳೂರು ಕಾಂಗ್ರೆಸ್ ಪ್ರತಿಭಟನೆ, ಇಡಿ ಕಚೇರಿ ತಲುಪಿದ ಕಾಂಗ್ರೆಸ್ ಪ್ರತಿಭಟನೆ, ಬೆಂಗಳೂರು ಸುದ್ದಿ,
ಇಡಿ ಕಚೇರಿ ಎದುರು ಕಾಂಗ್ರೆಸ್​ ಹೈಡ್ರಾಮಾ
author img

By

Published : Jun 13, 2022, 2:23 PM IST

Updated : Jun 13, 2022, 3:40 PM IST

ಬೆಂಗಳೂರು: ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯವು ನೋಟಿಸ್ ನೀಡಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನ ಇಡಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ನಗರದ ಲಾಲ್ ಬಾಗ್ ಗೇಟ್ ಮುಂಭಾಗದಲ್ಲಿ ಪ್ರತಿಭಟನೆ ಆರಂಭಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇಡಿ ಕಚೇರಿಗೆ ಮುತ್ತಿಗೆ ಹಾಕುವ ಪ್ರಯತ್ನ ನಡೆಸಿದರು.

ಲಾಲ್ ಬಾಗ್ ಗೇಟ್​​ನಿಂದ ಶಾಂತಿನಗರದ ಟಿಡಿಎಂಸಿ ಬಳಿಯ ಇಡಿ ಕಚೇರಿಗೆ ಕಾಲ್ನಡಿಗೆ ಮೂಲಕ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ಹಾಗೂ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್​​ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ರಾಮಲಿಂಗಾರೆಡ್ಡಿ, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ಆರ್.ವಿ. ದೇಶಪಾಂಡೆ, ಶಾಸಕರಾದ ಹ್ಯಾರಿಸ್, ರಂಗನಾಥ್, ಎಂಎಲ್​ಸಿ ಯು.ಬಿ. ವೆಂಕಟೇಶ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.

ಪೊಲೀಸ್​ ವಶಕ್ಕೆ: ಬಳಿಕ ಲಾಲ್ ಬಾಗ್ ಗೇಟ್​​ನಿಂದ ಶಾಂತಿನಗರದ ಟಿಟಿಎಂಸಿಯಲ್ಲಿನ ಇಡಿ ಕಚೇರಿಗೆ ಕೈ ಕಾರ್ಯಕರ್ತರ ಜೊತೆಗೂಡಿ ಕೈ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸಿದರು. ನೂರಾರು ಕಾರ್ಯಕರ್ತರು ಈ ವೇಳೆ ಸಾಥ್​ ನೀಡಿದರು. ಬಿಜೆಪಿ ಶಾಂತಿನಗರ ಬಸ್ ನಿಲ್ದಾಣ ಸಿಗ್ನಲ್ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ತಡೆ ಹಿಡಿದರು. ಈ ವೇಳೆ ಪೊಲೀಸರು ಮತ್ತು ಕೈ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು.

ಇಡಿ ಕಚೇರಿ ಎದುರು ಕಾಂಗ್ರೆಸ್​ ಪ್ರತಿಭಟನೆ

ಈ ವೇಳೆ ಬ್ಯಾರಿಕೇಡ್ ಹತ್ತಿ ಕೈ ನಾಯಕರು ಆಕ್ರೋಶ ವ್ಯಕ್ತಪಡಿಸಿದರು. ಶಾಸಕ ಪ್ರಿಯಾಂಕ್ ಖರ್ಗೆ, ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಹ್ಯಾರಿಸ್​​ ಬ್ಯಾರಿಕೇಡ್ ಹತ್ತಿ ಆಕ್ರೋಶ ಹೊರಹಾಕಿದರು. ಪೊಲೀಸರು ಕೈ ನಾಯಕರು, ಕಾರ್ಯಕರ್ತರಿಗೆ ತಡೆ ಒಡ್ಡಿದರು. ಮುತ್ತಿಗೆ ಹಾಕಲು ಯತ್ನಿಸಿದ ಕೈ ನಾಯಕರು ಹಾಗೂ ಕೆಲ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್, ರಾಮಲಿಂಗೇಗೌಡ, ಪ್ರಿಯಾಂಕ್ ಖರ್ಗೆ ಸೇರಿ ಕೈ ನಾಯಕರನ್ನು ವಶಕ್ಕೆ ಪಡೆಯಲಾಯಿತು.

ಟ್ರಾಫಿಕ್ ಜಾಮ್: ಕಾಂಗ್ರೆಸ್ ಪ್ರತಿಭಟನೆಯಿಂದ ಡಬಲ್ ರೋಡ್, ಹೊಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡುವಂತಾಯಿತು. ಸುಮಾರು ನಾಲ್ಕು ತಾಸಿಗೂ ಹೆಚ್ಚು ಕಾಲ ಸುತ್ತಮುತ್ತ ರಸ್ತೆಗಳಲ್ಲಿ ಭಾರಿ ಸಂಚಾರ ಅಡಚಣೆ ಉಂಟಾಯಿತು. ನಂತರ ವಾಹನ ಸವಾರರಿಗೆ ಪರ್ಯಾಯ ರಸ್ತೆಯಲ್ಲಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲಾಯಿತು.

ಇತ್ತ ಪ್ರತಿಭಟನೆ ಹಿನ್ನೆಲೆ ಇಡಿ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ಕೈಗೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಐದು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಿದ್ದರು.

ಓದಿ: ED ಕಚೇರಿ ತಲುಪಿದ ರಾಹುಲ್​​ ಗಾಂಧಿ: ಎಐಸಿಸಿಯಲ್ಲಿ ಪ್ರತಿಧ್ವನಿಸಿದ ರಾಹುಲ್ ಗಾಂಧಿ ಜಿಂದಾಬಾದ್ ಹಾಡು

Last Updated : Jun 13, 2022, 3:40 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.