ETV Bharat / state

ಬಿಜೆಪಿ ವಿರುದ್ಧ ಕಾಂಗ್ರೆಸ್​​ ಪ್ರತಿಭಟನೆ... ಕುದುರೆ ವ್ಯಾಪಾರ ತಡೆಯುವಂತೆ ರಾಜ್ಯಪಾಲರಿಗೆ ಮನವಿ - ರಾಜೀನಾಮೆ

ರಾಜ್ಯದಲ್ಲಿ ಬಿಜೆಪಿ ನಡೆಸುತ್ತಿರುವ ಕುದುರೆ ವ್ಯಾಪಾರ ತಡೆಯುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಬಸನಗೌಡ ಬಾದರ್ಲಿ ಹಾಗೂ ಹ್ಯಾರಿಸ್​ ಪುತ್ರ ನಲಪಾಡ್ ನೇತೃತ್ವದಲ್ಲಿ ‌ಮನವಿಮಾಡಿದ್ದಾರೆ.

ಬಿಜೆಪಿ ವಿರುದ್ಧ ಕಾಂಗ್ರೆಸ್​​ ಪ್ರತಿಭಟನೆ
author img

By

Published : Jul 9, 2019, 1:37 PM IST

ಬೆಂಗಳೂರು: ಅತೃಪ್ತ ಶಾಸಕರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶದ ಯುವ ಕಾಂಗ್ರೆಸ್ ಸಮಿತಿ ರಾಜಭವನ ಎದುರುಗಡೆ ಪ್ರತಿಭಟನೆ‌ ನಡೆಸಿ ಇದಕ್ಕೆ ರೂವಾರಿಯಾಗಿರುವ ಬಿಜೆಪಿ ವಿರುದ್ಧ ಸೂಕ್ತಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಮನವಿ ಪತ್ರದಲ್ಲಿ ಕರ್ನಾಟಕದಲ್ಲಿ ಬಿಜೆಪಿಯವರು ದುರುದ್ದೇಶ ಹಾಗೂ ಅಧಿಕಾರದ ಆಕಾಂಕ್ಷೆಯಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಅಲ್ಲದೇ ಯಡಿಯೂರಪ್ಪ ಆಪ್ತಕಾರ್ಯದರ್ಶಿ ಸಂತೋಷ್​ನನ್ನು ಮುಂದೆ ಬಿಟ್ಟು ಸರ್ಕಾರ ಬೀಳಿಸಲು ಪ್ರಯತ್ನ ಮಾಡುತ್ತಿದ್ದಾರೆ. ರಾಜೀನಾಮೆ ನೀಡಿದ ಶಾಸಕರಿಗೆ ಮುಂಬೈಗೆ ತೆರೆಳಲು ಸ್ಪೆಷಲ್ ಫ್ಲೈಟ್ ಬುಕ್ ಆಗಿರುವುದು ಬಿಜೆಪಿ ಕಡೆಯಿಂದ. ಬಿಜೆಪಿಯವರು ಶಾಸಕರನ್ನು ಹೈಜಾಕ್ ಮಾಡಿದ್ದಾರೆ ಎಂದಿದ್ದಾರೆ.

ಬಿಜೆಪಿ ವಿರುದ್ಧ ಕಾಂಗ್ರೆಸ್​​ ಪ್ರತಿಭಟನೆ

ಹೀಗಾಗಿ ಕುದುರೆ ವ್ಯಾಪಾರ ತಡೆಯುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಬಸನಗೌಡ ಬಾದರ್ಲಿ ಹಾಗೂ ಹ್ಯಾರಿಸ್​ ಪುತ್ರ ನಲಪಾಡ್ ನೇತೃತ್ವದಲ್ಲಿ ‌ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ:

ಜೆಡಿಎಸ್ ಹಾಗೂ ಕಾಂಗ್ರೆಸ್​ ಶಾಸಕರಿಗೆ ಹಣದ ಆಮಿಷವೊಡ್ಡಿ ಕುದುರೆ ವ್ಯಾಪಾರ ಮಾಡಿದ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮೈಸೂರು ಬ್ಯಾಂಕ್ ವೃತ್ತದ‌ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಗುಡುಗಿದ್ದಾರೆ.

ಶಾಸಕರುಗಳಿಗೆ ಹಣದ ಆಮಿಷವೊಡ್ಡಿ ಕುದುರೆ ವ್ಯಾಪಾರ ಮಾಡಿರುವ ಬಿಜೆಪಿ‌ ನಡೆ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ರಸ್ತೆ ಚಳವಳಿ ನಡೆಸಲು ಮುಂದಾದರು. ಹಾಕಲಾಗಿದ್ದ ಬ್ಯಾರಿಕೇಡ್ ತಳ್ಳಲು ಮುಂದಾದಾಗ ಪೊಲೀಸರು ಕಾರ್ಯಕರ್ತರನ್ನು ತಡೆದು ಪರಿಸ್ಥಿತಿ ನಿಯಂತ್ರಿಸಿದರು.

Intro:Body:ಕುದುರೆ ವ್ಯಾಪಾರಕ್ಕೆ ಬಿಜೆಪಿ‌‌ ಕುಮ್ಮಕ್ಕು‌ ನೀಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು:
ಜೆಡಿಎಸ್ ಹಾಗೂ ಕೈ ಶಾಸಕರಿಗೆ ಹಣದ ಆಮಿಷ ಒಡ್ಡಿ ಕುದುರೆ ವ್ಯಾಪಾರ ಮಾಡಿದ ಬಿಜೆಪಿ ವಿರುದ್ಧ ಕಾಂಗ್ರೆಸ್ ನ ಕಾರ್ಪೋರೇಟರ್ ಗಳು ಮೈಸೂರು ಬ್ಯಾಂಕ್ ವೃತ್ತದ‌ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ದ ಅಕ್ರೋಶ ವ್ಯಕ್ತಪಡಿಸಿದರು. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಗುಡುಗಿದರು.
ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರುಗಳಿಗೆ ಹಣದ ಆಮಿಷವೊಡ್ಡಿ ಕುದುರೆ ವ್ಯಾಪಾರ ಮಾಡಿರುವ ಬಿಜೆಪಿ‌ ನಡೆ ಸರಿಯಲ್ಲ ಎಂದು ಅಸಮಾನಧಾನ ವ್ಯಕ್ತಪಡಿಸಿ ರಸ್ತೆ ಚಳವಳಿ ನಡೆಸಲು ಮುಂದಾದರು. ಹಾಕಲಾಗಿದ್ದ ಬ್ಯಾರಿಕೇಡ್ ತಳ್ಳಿ ಮುಂದಾದಾಗ ಪೊಲೀಸರು ಕಾರ್ಯಕರ್ತರನ್ನು ತಡೆದು ಪರಿಸ್ಥಿತಿ ನಿಯಂತ್ರಿಸಿದರುConclusion:ಮೊಜೊ ವಿಶ್ಯುಯಲ್ ಬರ್ತಿದೆ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.