ಬೆಂಗಳೂರು: ಕೇಂದ್ರ ಪೌರತ್ವ ಕಾಯ್ದೆ ತಿದ್ದುಪಡಿಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿ ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ಧರಣಿ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು,ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ಆಕ್ರೋಶ ವ್ಯಕ್ತಪಡಿಸಿದರು.
ಎನ್ಒಸಿ ಜಾರಿಗೆ ತರುವುದು ಬೇಡ. ಕಾಯ್ದೆಯ ಅಂಗೀಕಾರವನ್ನ ರದ್ದುಪಡಿಸಿ, ನಮ್ಮದು ಜಾತ್ಯತೀತ ರಾಷ್ಟ್ರ, ಇಲ್ಲಿ ಎಲ್ಲರಿಗೂ ಬದುಕುವ ಹಕ್ಕಿದೆ, ಕೇಂದ್ರ ಸರ್ಕಾರ ಮುಸ್ಲೀಂರನ್ನ ಟಾರ್ಗೆಟ್ ಮಾಡುತ್ತಿರುವುದು ಸಂವಿಧಾನ ವಿರೋಧಿ ನಡೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.