ETV Bharat / state

ಪರಿಷತ್​ನಲ್ಲಿ ಮುಂದುವರೆದ ಕಾಂಗ್ರೆಸ್ ಧರಣಿ: ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ - ಸಚಿವ ಈಶ್ವರಪ್ಪ ಹೇಳಿಕೆ

ಬೆಳಗಿನ ಕಲಾಪ ಆರಂಭವಾಗುತ್ತಿದ್ದಂತೆ ಸಚಿವ ಈಶ್ವರಪ್ಪ ಹೇಳಿಕೆ ಪ್ರಸ್ತಾಪ ಮಾಡಿದ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಈಶ್ವರಪ್ಪ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಈ ವೇಳೆ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ಸದಸ್ಯರು, ಸದನದ ಬಾವಿಗೆ ಇಳಿದು ಬಿತ್ತಿಪತ್ರಗಳನ್ನು ಪ್ರದರ್ಶಿಸಿ ಘೋಷಣೆ ಕೂಗಿದರು.

ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ
ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ
author img

By

Published : Feb 17, 2022, 1:04 PM IST

Updated : Feb 17, 2022, 2:03 PM IST

ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ವಿಧಾನ ಪರಿಷತ್​ನಲ್ಲಿ ಧರಣಿ ನಡೆಸಿದ್ದರಿಂದ ಬೆಳಗಿನ ಕಲಾಪ ಬಲಿಯಾಗಿದ್ದು, ಕಲಾಪವನ್ನು ಮಧ್ಯಾಹ್ನಕ್ಕೆ ಮುಂದೂಡಿಕೆ ಮಾಡಲಾಯಿತು.

ಬೆಳಗಿನ ಕಲಾಪ ಆರಂಭವಾಗುತ್ತಿದ್ದಂತೆ ಸಚಿವ ಈಶ್ವರಪ್ಪ ಹೇಳಿಕೆ ಪ್ರಸ್ತಾಪ ಮಾಡಿದ ಪ್ರತಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್, ಈಶ್ವರಪ್ಪ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಈಶ್ವರಪ್ಪ ಅವರು ಬಳಸಿರುವ ಪದಗಳನ್ನು ನಾವು ಗಮನಿಸಿದ್ದೇವೆ, ಅವರ ಮೇಲೆ ರಾಷ್ಟ್ರದ್ರೋಹದ ಕೇಸ್ ದಾಖಲಿಸಬೇಕು ಎಂದು ಒತ್ತಾಯಿಸಿದರು.

ಸದನದ ಬಾವಿಗೆ ಇಳಿದು ಕಾಂಗ್ರೆಸ್ ಸದಸ್ಯರ ಪ್ರತಿಭಟನೆ

ಇದಕ್ಕೆ ಧ್ವನಿಗೂಡಿಸಿದ ಕಾಂಗ್ರೆಸ್ ಸಚೇತಕ ಪ್ರಕಾಶ್ ರಾಥೋಡ್, ಕೊಲೆ ಮಾಡಿದ ಬಳಿಕ ಒಳ್ಳೆಯ ಉದ್ದೇಶದಿಂದ ಕೊಲೆ ಮಾಡಿದ್ದೇನೆ ಅಂದರೆ ಬಿಟ್ಟು ಬಿಡೋಕೆ ಆಗುತ್ತಾ?. ಒಮ್ಮೆ ಹೇಳಿಕೆ ಕೊಟ್ಟ ಬಳಿಕ ಅದನ್ನು ಬದಲಾಯಿಸಲು ಸಾದ್ಯವಿಲ್ಲ. ಈಶ್ವರಪ್ಪ ಹೇಳಿಕೆ ಕೊಟ್ಟಿರೋದು ನಿಜ. ಒಬ್ಬ ಸಚಿವ ಈ ರೀತಿ ಹೇಳಿಕೆ ಕೊಟ್ಟಾಗ ಸುಮ್ಮನಿರೋದು ಸರಿಯಲ್ಲ, ದೇಶದ್ರೋಹದ ಕೇಸ್ ದಾಖಲಿಸಬೇಕು ಎಂದರು.

ಪ್ರತಿಪಕ್ಷ ಕಾಂಗ್ರೆಸ್ ಬೇಡಿಕೆ ತಳ್ಳಿಹಾಕಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ, ಈಶ್ವರಪ್ಪ ಅವರು ತಮ್ಮ ಹೇಳಿಕೆಯನ್ನು ಎಲ್ಲೂ ಪುನರುಚ್ಚರಿಸಿಲ್ಲ. ಅವರು ರಾಷ್ಟ್ರಧ್ವಜದ ವಿರೋಧ ಹೇಳಿಕೆ ಕೊಟ್ಟಿಲ್ಲ. ಈ ವಿಚಾರವನ್ನು ಕೈಬಿಟ್ಟು ಕಲಾಪ ನಡೆಸಲು ಅನುವು ಮಾಡಿಕೊಡಲು ಮನವಿ ಮಾಡುತ್ತೇನೆ ಎಂದರು.

ಸಚಿವರ ಹೇಳಿಕೆ ಒಪ್ಪದ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಧರಣಿ ನಡೆಸಿದರು. ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ಇಳಿದು ಬಿತ್ತಿಪತ್ರಗಳನ್ನು ಪ್ರದರ್ಶಿಸಿ ಘೋಷಣೆ ಕೂಗಿದರು. ಆದರೂ ಗದ್ದಲದ ನಡುವೆಯೇ ಕಲಾಪ ಮುಂದುವರೆಸಿದ ಸಭಾಪತಿ ಬಸವರಾಜ ಹೊರಟ್ಟಿ, ಪ್ರಶ್ನೋತ್ತರ ಕಲಾಪ ಕೈಗೆತ್ತಿಕೊಂಡರು.

ಪರಿಷತ್​ನಲ್ಲಿ ಪ್ರತಿಧ್ವನಿಸಿದ ಐಎಂಎ ಹಗರಣ: ಐಎಂಎ ಹಗರಣದಲ್ಲಿ ಕೆಳಹಂತದ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಂಡಿದ್ದೀರಿ. ಆದರೆ ನೇರವಾಗಿ ಹಗರಣದಲ್ಲಿ ಭಾಗಿಯಾಗಿರುವ ಮೇಲ್ಮಟ್ಟದ ಅಧಿಕಾರಿಗಳನ್ನು ಯಾಕೆ ಬಿಟ್ಟಿದ್ದೀರಾ? ಎಂದು ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದರಲ್ಲಿ ಯಾವ ಮುಲಾಜು ಇಲ್ಲ. ಯಾರನ್ನೂ ಬಿಡುವ ಪ್ರಶ್ನೆ ಇಲ್ಲ. ಜಾರ್ಜ್ ಶೀಟ್ ಹಾಕಿರುವ ಪ್ರಕಾರ ಎಲ್ಲರ ಮೇಲೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು‌.

ಕಾಂಗ್ರೆಸ್ ಪ್ರತಿಭಟನೆ ನಡುವೆಯೇ ಕಲಾಪ ನಡೆಸುತ್ತಿರುವುದಕ್ಕೆ ಜೆಡಿಎಸ್​ನ ಮರಿತಿಬ್ಬೇಗೌಡ ಆಕ್ಷೇಪ ವ್ಯಕ್ತಪಡಿಸಿದರು. ಈ ರೀತಿ ಸದನ ನಡೆಸುವುದು ಎಲ್ಲಾದರೂ ಉಂಟಾ?. ಸರ್ಕಾರ ಇದೆಯೇ. ಇಲ್ಲವೋ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕ್ಯಾಮರಾಗಳ ಕಡೆ ಬಿತ್ತಿ ಪತ್ರ ತೋರಿಸುತ್ತಿದ್ದ ಕಾಂಗ್ರೆಸ್ ಸದಸ್ಯರ ಮೇಲೆ ಸಭಾಪತಿ ಹೊರಟ್ಟಿ ಗರಂ ಆದರು. ನಿಮಗೇನು ಫೋಸ್ ಕೊಡೋದು ಮುಖ್ಯನಾ?, ಟಿವಿಯಲ್ಲಿ ಕಾಣಿಸಿಕೊಳ್ಳೋಕೆ ಫೋಸ್ ಕೊಡಬೇಡಿ ಎಂದು ಗದರಿದರು. ನಂತರ ಗದ್ದಲದಲ್ಲಿ ಕಲಾಪ ನಡೆಸುವುದಕ್ಕೆ ಜೆಡಿಎಸ್ ವ್ಯಕ್ತಪಡಿಸಿದ ಆಕ್ಷೇಪ ಪರಿಗಣಿಸಿ ಸದನ ಸಹಜ ಸ್ಥಿತಿಗೆ ಬಾರದ ಹಿನ್ನೆಲೆಯಲ್ಲಿ ಪರಿಷತ್ ಕಲಾಪವನ್ನು ಮಧ್ಯಾಹ್ನ ಮೂರು ಗಂಟೆಗೆ ಮುಂದೂಡಿದರು.

Last Updated : Feb 17, 2022, 2:03 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.