ETV Bharat / state

ಇಂಧನ ಇಲಾಖೆ ನಷ್ಟಕ್ಕೆ ತಳ್ಳಿದವರಿಂದ ಉಚಿತ ವಿದ್ಯುತ್ ಭರವಸೆ: ಇಂಧನ ಸಚಿವ ಸುನೀಲ್ ಕುಮಾರ್ ವ್ಯಂಗ್ಯ - ಉಚಿತ ವಿದ್ಯುತ್

ಇಂಧನ ಇಲಾಖೆಯನ್ನು ನಷ್ಟಕ್ಕೆ‌ ದೂಡಿದ್ದೇ ಹಿಂದಿನ ಕಾಂಗ್ರೆಸ್ ಸರ್ಕಾರ - ಜನರಿಗೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ಭರವಸೆ - ಇದು ದೊಡ್ಡ ಸುಳ್ಳು - ಇಂಧನ ಹಾಗೂ‌ ಕನ್ನಡ ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಆರೋಪ.

Energy Minister Sunil Kumar
ಇಂಧನ ಸಚಿವ ಸುನೀಲ್ ಕುಮಾರ್
author img

By

Published : Jan 13, 2023, 8:14 PM IST

ಬೆಂಗಳೂರು: ದುರಾಡಳಿತ ಹಗರಣದ ಮೂಲಕ ಇಂಧನ ಇಲಾಖೆಯನ್ನು ನಷ್ಟಕ್ಕೆ‌ ದೂಡಿದ್ದೇ ಹಿಂದಿನ ಕಾಂಗ್ರೆಸ್ ಸರ್ಕಾರದ ಮಹತ್ವ ಸಾಧನೆಯಾಗಿದೆ. ಇಲಾಖೆಯನ್ನು‌ ದೊಡ್ಡ ಪ್ರಮಾಣದಲ್ಲಿ ಹಳ್ಳ ಹಿಡಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಜೋಡಿ, ಮುಂದಿನ ಚುನಾವಣೆಗಾಗಿ ಮಾತ್ರ ಈಗ ಉಚಿತ ವಿದ್ಯುತ್ ಎಂಬ ಸುಳ್ಳು ಭರವಸೆ ನೀಡುತ್ತಿದೆ ಎಂದು ಇಂಧನ ಹಾಗೂ‌ ಕನ್ನಡ ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ವ್ಯಂಗ್ಯವಾಡಿದ್ದಾರೆ.

  • ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ ೨೦೦ ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತ ಹೇಳಿಕೆಯಲ್ಲ. ಇದರ ಹಿಂದಿರುವ ಉದ್ದೇಶ ಏನು ಗೊತ್ತೆ ? (1/4) pic.twitter.com/CdpmVFAeMj

    — Sunil Kumar Karkala (@karkalasunil) January 13, 2023 " class="align-text-top noRightClick twitterSection" data=" ">

ತಮ್ಮ ಟ್ವೀಟ್ ಖಾತೆಯಲ್ಲಿ ಆರೋಪಿಸಿರುವ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದ ವೇಳೆ ರೈತರ ಕೃಷಿ ಪಂಪ್ ಸೆಟ್​ಗಳಿಗೆ ವಿದ್ಯುತ್ ಸಂಪರ್ಕ ನೀಡದೇ ಸತಾಯಿಸಿದವರು. ಈಗ 200 ಯುನಿಟ್ ವರೆಗೆ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಡಂಗುರ ಸಾರುತ್ತಿದ್ದು, ಈ ಶತಮಾನದ ಅತಿದೊಡ್ಡ ಸುಳ್ಳಾಗಬಹುದು. ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ 200 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತದ ಹೇಳಿಕೆಯಲ್ಲ. ಎಸ್ಕಾಂಗಳನ್ನು ಖಾಸಗಿಕರಣಗೊಳಿಸುವುದೇ ಈ ಸುಳ್ಳು ಭರವಸೆಯ ಹಿಂದಿರುವ ಉದ್ದೇಶ ಎಂದು ಆರೋಪಿಸಿದ್ದಾರೆ.

  • ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ೯೦೦೦ ಕೋಟಿ ರೂ.ನ್ನು ಎಸ್ಕಾಂಗಳಿಗೆ ನೀಡಿ ನೀವು ಮಾಡಿದ್ದ ಆಡಳಿತ ವೈಫಲ್ಯ ಸರಿಪಡಿಸಿದ್ದೇವೆ. ಮತಕ್ಕಾಗಿ ಇಂಧನ ಇಲಾಖೆ ಮಾರಾಟ ಮಾಡಬೇಡಿ. (4/4)

ಖಾಸಗೀಕರಣ ಹುನ್ನಾರ: ಎಸ್ಕಾಂಗಳನ್ನು ಖಾಸಗೀಕರಣ ಮಾಡುವುದೇ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರ ಅಂತಿಮ ಗುರಿ‌. ಉಚಿತ ವಿದ್ಯುತ್ ನಿಂದ ಎಸ್ಕಾಂಗಳ ಮೇಲೆ ಇನ್ನಷ್ಟು ಹೊರೆಯಾಗುತ್ತದೆ. ಆಗ ನಷ್ಟದಲ್ಲಿರುವ ಎಸ್ಕಾಂಗಳನ್ನು ಖಾಸಗೀಕರಣ ಮಾಡುವ ಸಂಚು ಈ ಘೋಷಣೆಯ ಹಿಂದೆ ಇದೆ. ತಾವು ಮುಖ್ಯಮಂತ್ರಿಯಾಗಿದ್ದ ವೇಳೆ ಕತ್ತಲೆಯಲ್ಲಿ ಬಜೆಟ್ ಓದಿದ್ದನ್ನು ಸಿದ್ದರಾಮಯ್ಯ ಮರೆತಿರಬೇಕು. ನೀವು ಅಧಿಕಾರದಲ್ಲಿದ್ದ ವೇಳೆ ಎಸ್ಕಾಂಗಳನ್ನು ನಷ್ಟಕ್ಕೆ ದೂಡಿದ್ದಿರಿ. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 9000 ಕೋಟಿ ರೂ ಎಸ್ಕಾಂಗಳಿಗೆ ನೀಡಿ, ನೀವು ಮಾಡಿದ್ದ ಆಡಳಿತ ವೈಫಲ್ಯ ಸರಿಪಡಿಸಿದ್ದೇವೆ. ಮತಕ್ಕಾಗಿ ಇಂಧನ ಇಲಾಖೆ ಮಾರಾಟ ಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಸಿದ್ದರಾಮಯ್ಯ ಅವರೇ, ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ 200 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತ ಹೇಳಿಕೆಯಲ್ಲ. ಇದರ ಹಿಂದಿರುವ ಉದ್ದೇಶ ಏನು ಗೊತ್ತೆ? - ಶ್ರೀ @karkalasunil #CorruptCongress #ಪ್ರಜಾದ್ರೋಹಯಾತ್ರೆ pic.twitter.com/WK8sqhVTQ6

    — BJP Karnataka (@BJP4Karnataka) January 13, 2023 " class="align-text-top noRightClick twitterSection" data=" ">

ಹಿಂದೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ಕೃಷಿ ಪಂಪ್​ಸೆಟ್ ಗಳಿಗೆ ಹೊಸ ಸಂಪರ್ಕ ಕಲ್ಪಿಸಿರಲಿಲ್ಲ. ಇದರಿಂದ ರೈತರು ಹಾಗೂ ಕೃಷಿ ವಿಸ್ತರಣೆ ಚಟುವಟಿಕೆಗೆ ತೀವ್ರ ಸಮಸ್ಯೆ ಎದುರಿಸಬೇಕಾಗಿತ್ತು. 2016-17 ರಿಂದ ಕೃಷಿ ಪಂಪ್ ಸೆಟ್ ಗಳಿಗೆ ನೀಡುತ್ತಿದ್ದ ಸಬ್ಸಿಡಿ ಹಣವನ್ನು ವಿದ್ಯುತ್ ಸರಬರಾಜು ಕಂಪನಿಗಳಿಗೆ ನೀಡದೇ ಸತಾಯಿಸಿದರು. ಇದರಿಂದ ರೈತರು ಮಾತ್ರವಲ್ಲ ಇತರ ಉದ್ಯಮಗಳಿಗೂ ತೊಂದರೆಯಾಯ್ತು. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2016 ರಿಂದ ಇಲ್ಲಿಯ ವರೆಗಿನ ಹಿಂಬಾಕಿಯೂ ಸೇರಿ 18 ಸಾವಿರ ಕೋಟಿ ರೂ. ಸಬ್ಸಿಡಿ ಹಣವನ್ನು ಎಸ್ಕಾಂಗಳಿಗೆ ನೀಡಿದ್ದೇವೆ. ಈಗ ಎಲ್ಲ ಹಳ್ಳಿಗಳಿಗೂ ನಿರಂತರ ವಿದ್ಯುತ್ ಒದಗಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ:ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ 200 ಯೂನಿಟ್ ಉಚಿತ ವಿದ್ಯುತ್ ಭಿತ್ತಿಚಿತ್ರಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರದರ್ಶನ ಮಾಡಿದ್ದರು.

ಈ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪ್ರತಿ ಮನೆಗೆ ಉಚಿತವಾಗಿ 200 ಯೂನಿಟ್ ವಿದ್ಯುತ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಘೋಷಣೆ ಮಾಡಿದ್ದರು.ಕರ್ನಾಟಕದ ಜನತೆಯ ಸಂಕಷ್ಟಗಳನ್ನು ಪರಿಹಾರ ಮಾಡುವುದೇ ಪ್ರಜಾಧ್ವನಿ ಕಾರ್ಯಕ್ರಮದ ಉದ್ದೇಶ. ಬೆಳಗಾವಿ ಚಿಕ್ಕೋಡಿ ಭಾಗದಿಂದ ನಾಂದಿ ಹಾಡಿದ್ದೇವೆ. ಭಾರತದ ಜನತೆ ಬೆಲೆ ಏರಿಕೆಯಿಂದಾಗಿ ನಲುಗಿ ಹೋಗಿದೆ ಎಂದು ಹೇಳಿದ್ದರು.

ಇದನ್ನೂಓದಿ:ಉಡುಪಿ: ಸ್ಯಾಂಟ್ರೋ ರವಿ ಬಂಧನ ಖಚಿತಪಡಿಸಿದ ಗೃಹ ಸಚಿವ ಆರಗ ಜ್ಞಾನೇಂದ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.