ETV Bharat / state

ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಹುಬ್ಬಳ್ಳಿ-ಧಾರವಾಡದಿಂದ ಶೆಟ್ಟರ್​, ಸಿಎಂ ಬೊಮ್ಮಾಯಿ ವಿರುದ್ಧ ಮೊಹಮ್ಮದ್ ಸವಣೂರು ಕಣಕ್ಕೆ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಇಂದು ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ ಮಾಡಿದೆ.

congress candidate list
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
author img

By

Published : Apr 18, 2023, 8:57 PM IST

Updated : Apr 18, 2023, 10:38 PM IST

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್, ಶಿಗ್ಗಾಂವಿ ಸೇರಿ 7 ಅಭ್ಯರ್ಥಿಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಈ ಮೂಲಕ ಈವರೆಗೆ 216 ಕ್ಷೇತ್ರಗಳಿಗೆ ಹುರಿಯಾಳುಗಳನ್ನು ಪ್ರಕಟಿಸಿದ್ದು, ಇನ್ನೂ 8 ಕ್ಷೇತ್ರಗಳನ್ನು ಕಾಂಗ್ರೆಸ್ ಬಾಕಿ ಉಳಿಸಿಕೊಂಡಿದೆ.

ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ಶಿಗ್ಗಾಂವಿ ಕ್ಷೇತ್ರಕ್ಕೆ ಮೊಹಮ್ಮದ್ ಯೂಸೂಫ್ ಸವಣೂರು ಅವರಿಗೆ ಟಿಕೆಟ್ ನೀಡಲಾಗಿದೆ. ಶಿಗ್ಗಾಂವಿಯಿಂದ ವಿನಯ್ ಕುಲಕರ್ಣಿ ಕಣಕ್ಕಿಳಿಯಲಿದ್ದಾರೆ ಎಂದು ಹೇಳಲಾಗಿತ್ತು.

ಈ ಮೊದಲು ಅಭ್ಯರ್ಥಿಗಳ ಮೂರು ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್‌, 216 ಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿತ್ತು. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾದ್ದರಿಂದ ಇಂದು ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿ, ಇನ್ನೂ 8 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಎಸ್.ರಾಮಪ್ಪಗೆ ತಪ್ಪಿದ ಟಿಕೆಟ್, ನಂದಿಗಾವಿ ಶ್ರೀನಿವಾಸ್​​ಗೆ ಮಣೆ: ಸಾಕಷ್ಟು ಹಗ್ಗಜಗ್ಗಾಟದ ಬಳಿಕ ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಹರಿಹರಕ್ಕೆ ಟಿಕೆಟ್ ಘೋಷಣೆ ಮಾಡಿದ್ದು, ಹಾಲಿ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪನವರಿಗೆ ಶಾಕ್ ನೀಡಿದೆ. ನಾಲ್ಕನೇ ಪಟ್ಟಿಯಲ್ಲಿ ನಂದಿಗಾವಿ ಶ್ರೀನಿವಾಸ್​​ಗೆ ಹೈಕಮಾಂಡ್ ಮಣೆ ಹಾಕಿದೆ. ಟಿಕೆಟ್ ಸಿಗುವ ಭರವಸೆಯಲ್ಲಿ ಕ್ಷೇತ್ರದಲ್ಲಿ ಕಾಲಿಗೆ ಚಕ್ರ ಕಟ್ಟಿಕೊಂಡು ಸಂಚರಿಸುತ್ತಿದ್ದ ರಾಮಪ್ಪನವರಿಗೆ ಟಿಕೆಟ್ ನೀಡಿದೆ ಇರುವುದು ಅವರ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನು ವಿದೇಶದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ನಂದಿಗಾವಿ ಶ್ರೀನಿವಾಸ್ ಇತ್ತೀಚೆಗೆ ಅಷ್ಟೇ ಕೆಲಸ ಬಿಟ್ಟು ಹರಿಹರಕ್ಕೆ ಆಗಮಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದರು.

ಹಾವೇರಿ ಜಿಲ್ಲೆ ಶಿಗ್ಗಾಂವಿ ಕ್ಷೇತ್ರಕ್ಕೆ ಕಾಂಗ್ರೆಸ್ ಅಚ್ಚರಿಯ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಮಹಮ್ಮದ್ ಯೂಸೂಫ್ ಸವಣೂರು ಎಂಬ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. 15 ಜನ ಟಿಕೆಟ್ ಆಕಾಂಕ್ಷಿಗಳನ್ನು ಬಿಟ್ಟು ಕ್ಷೇತ್ರಕ್ಕೆ ಹೊಸ ಅಭ್ಯರ್ಥಿಯನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ನಾಲ್ಕನೇ ಪಟ್ಟಿಯಲ್ಲಿ ಯಾರಿಗೆ ಟಿಕೆಟ್?:

  1. ಹುಬ್ಬಳ್ಳಿ-ಧಾರವಾಡ ಕೇಂದ್ರ - ಜಗದೀಶ್ ಶೆಟ್ಟರ್
  2. ಹುಬ್ಬಳ್ಳಿ-ಧಾರವಾಡ ಪಶ್ಚಿಮ - ದೀಪಕ್ ಚಿಂಚೋರೆ
  3. ಶಿಗ್ಗಾಂವಿ - ಮೊಹಮ್ಮದ ಯೂಸೂಫ್ ಸವಣೂರು
  4. ಹರಿಹರ - ನಂದಿಗಾವಿ ಶ್ರೀನಿವಾಸ್
  5. ಶ್ರವಣಬೆಳಗೊಳ - ಎಂ.ಎ.ಗೋಪಾಲಸ್ವಾಮಿ
  6. ಲಿಂಗಸೂಗೂರು - ದುರ್ಗಪ್ಪ ಎಸ್.ಹೂಲಗೇರಿ
  7. ಚಿಕ್ಕಮಗಳೂರು - ಹೆಚ್​.ಡಿ.ತಮ್ಮಯ್ಯ

ಇದನ್ನೂ ಓದಿ: ಬಿಜೆಪಿ 3ನೇ ಪಟ್ಟಿ ರಿಲೀಸ್​: ಜಗದೀಶ್‌ ಶೆಟ್ಟರ್ ವಿರುದ್ಧ ಟೆಂಗಿನಕಾಯಿ​; ಮಹದೇವಪುರಕ್ಕೆ ಮಂಜುಳಾ ಲಿಂಬಾವಳಿ

ಬಿಜೆಪಿ ರಾಜ್ಯಾಧ್ಯಕ್ಷರ ತವರಿನಲ್ಲಿ ಬಿಜೆಪಿಗೆ ಬಂಡಾಯದ ಬಿಸಿ; ಬಿಜೆಪಿ ಅಧಿಕೃತ ಅಭ್ಯರ್ಥಿ ವಿರುದ್ಧ ಹಿಂದೂ ಮುಖಂಡನ ಸ್ಪರ್ಧೆ

Last Updated : Apr 18, 2023, 10:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.