ETV Bharat / state

ಜೆಡಿಎಸ್​​ ತೊರೆದು ಕೈ ಹಿಡಿದ ಹೆಚ್​.ಪಿ.ಸುಬ್ಬಾರೆಡ್ಡಿ... ಬೆಂಗಳೂರಲ್ಲಿ ಪಕ್ಷಕ್ಕೆ ಸೇರ್ಪಡೆ - ಆಪರೇಷನ್ ಜೆಡಿಎಸ್

ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸಮ್ಮುಖದಲ್ಲಿ ಕಾಂಗ್ರೆಸ್ 2018ರ ವಿಧಾನಸಭೆ ಚುನಾವಣೆಯಲ್ಲಿ ಬಸವಕಲ್ಯಾಣದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಹೆಚ್.ಪಿ.ಸುಬ್ಬಾರೆಡ್ಡಿ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ.

Operation JDS
ಹೆಚ್.ಪಿ. ಸುಬ್ಬಾರೆಡ್ಡಿ ಕಾಂಗ್ರೆಸ್ ಸೇರ್ಪಡೆ
author img

By

Published : Nov 18, 2020, 3:56 PM IST

ಬೆಂಗಳೂರು: ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆ ಸಂದರ್ಭವೂ ದೊಡ್ಡಮಟ್ಟದ ಆಪರೇಷನ್ ಜೆಡಿಎಸ್ ನಡೆಸುವ ಕಾರ್ಯಕ್ಕೆ ಕಾಂಗ್ರೆಸ್ ಪಕ್ಷ ಚಾಲನೆ ನೀಡಿದೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಬಸವಕಲ್ಯಾಣದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಹೆಚ್.ಪಿ.ಸುಬ್ಬಾರೆಡ್ಡಿ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಮೂಲಕ ದೊಡ್ಡಮಟ್ಟದಲ್ಲಿ ನಡೆಯುವ ಆಪರೇಷನ್​ಗೆ ಬುನಾದಿ ಹಾಕಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಸಮಿತಿ ಅಧ್ಯಕ್ಷರೂ ಆಗಿರುವ ಈಶ್ವರ್ ಖಂಡ್ರೆ ಅಧಿಕೃತವಾಗಿ ಪಕ್ಷದ ಶಾಲು ಹೊದಿಸಿ ಬಾವುಟ ನೀಡಿ ಬರಮಾಡಿಕೊಂಡರು.

ಹೆಚ್.ಪಿ.ಸುಬ್ಬಾರೆಡ್ಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಈ ಸಂದರ್ಭದಲ್ಲಿ ಮಾತನಾಡಿದ ಈಶ್ವರ್ ಖಂಡ್ರೆ, ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಏಕಾಂಗಿಯಾಗಿ ಕಾಂಗ್ರೆಸ್ ಸೇರ್ಪಡೆಯಾಗಿರುವ ಸುಬ್ಬಾರೆಡ್ಡಿ ನವೆಂಬರ್ 28ರಂದು ಬಸವಕಲ್ಯಾಣದಲ್ಲಿ ಹಮ್ಮಿಕೊಂಡಿರುವ ಸಮಾರಂಭದಲ್ಲಿ ತಮ್ಮ ಬೆಂಬಲಿಗರನ್ನು ಕಾಂಗ್ರೆಸ್​ಗೆ ಕರೆತರಲಿದ್ದಾರೆ. ಸುಬ್ಬಾರೆಡ್ಡಿ ಅವರೇ ಹೇಳುವ ಪ್ರಕಾರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಿಂದ ಸುಮಾರು 3 ಸಾವಿರ ಮಂದಿ ಅಂದು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಬಿಜೆಪಿಯಿಂದ ಭಾರಿ ಸಂಖ್ಯೆಯಲ್ಲಿ ಬೆಂಬಲಿಗರು ಕಾಂಗ್ರೆಸ್​ನತ್ತ ಮುಖ ಮಾಡಲಿದ್ದಾರೆ ಎಂದರು. ಪ್ರಮುಖ ನಾಯಕರು ಹಾಗೂ ದೊಡ್ಡ ಸಂಖ್ಯೆಯಲ್ಲಿ ಕಾರ್ಯಕರ್ತರು ಅಂದು ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದು, ಯಾರ್ಯಾರು ಸೇರ್ಪಡೆಯಾಗಲಿದ್ದಾರೆ ಎಂಬುದನ್ನು ಈಗಲೇ ತಿಳಿಸಲು ಸಾಧ್ಯವಿಲ್ಲ ಎಂದಿದ್ದಾರೆ.

ನಂತರ ಮಾತನಾಡಿದ ಹೆಚ್.ಪಿ.ಸುಬ್ಬಾರೆಡ್ಡಿ, ನಾರಾಯಣರಾವ್ ಗೆಲ್ಲಿಸಿದ್ದು ನಾನೇ. 2018ರ ವಿಧಾನಸಭೆ ಚುನಾವಣೆಯಲ್ಲಿ ನಾನು ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದೆ. 2005ರಿಂದ ಪಕ್ಷಕ್ಕೆ ನಿಷ್ಠನಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದೇನೆ. ಪ್ರತಿ ಹಳ್ಳಿಗೂ ತೆರಳಿ ಪಕ್ಷವನ್ನು ಕಟ್ಟುವ ಕೆಲಸ ಮಾಡಿದ್ದೇನೆ. ಆದರೆ ಕಳೆದ ಚುನಾವಣೆಯಲ್ಲಿ ಮರಾಠ ಮತಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಜೆಡಿಎಸ್ ನನ್ನ ಬದಲು ಪಿಜಿಆರ್ ಸಿಂಧ್ಯಾರಿಗೆ ಟಿಕೆಟ್ ನೀಡಿತ್ತು. ಇದು ನನಗೆ ತುಂಬಾ ಬೇಸರ ತರಿಸಿದ ಹಿನ್ನೆಲೆ ಜೆಡಿಎಸ್ ಪಕ್ಷದ ಪರವಾಗಿ ನಾನು ಪ್ರಚಾರದಲ್ಲಿ ಭಾಗವಹಿಸಿರಲಿಲ್ಲ. ಪರೋಕ್ಷವಾಗಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಬಿ.ನಾರಾಯಣರಾವ್ ಪರ ಕಾರ್ಯನಿರ್ವಹಿಸಿ ಅವರ ಗೆಲುವಿಗೆ ಕಾರಣನಾಗಿದ್ದೇನೆ. ನಾರಾಯಣರಾವ್ ಗೆಲ್ಲುವಲ್ಲಿ ನನ್ನ ಪಾತ್ರ ಪ್ರಮುಖವಾಗಿದೆ. ಜೆಡಿಎಸ್​ನ ವ್ಯವಸ್ಥೆಯನ್ನು ಧಿಕ್ಕರಿಸಿ ಇದೀಗ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದಿದ್ದಾರೆ.

ಟಿಕೆಟ್ ಕೊಟ್ಟರೆ ಗೆದ್ದು ಬರುತ್ತೇನೆ. ನಾರಾಯಣರಾವ್ ನಿಧನದ ಅನುಕಂಪ ಕ್ಷೇತ್ರದಲ್ಲಿ ಇದೆ. ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಿದರೆ ಅಭ್ಯಂತರವಿಲ್ಲ. ಬದಲಿ ಅಭ್ಯರ್ಥಿ ಹುಡುಕಾಟವೇನಾದರೂ ನಡೆದಿದ್ದಲ್ಲಿ ನಾನು ಕೂಡ ಪ್ರಬಲ ಆಕಾಂಕ್ಷಿ. ಟಿಕೆಟ್ ಸಿಕ್ಕರೆ ಗೆದ್ದು ಬರುವ ಸಾಮರ್ಥ್ಯ ನನಗಿದೆ. ನನಗೇ ಟಿಕೆಟ್ ನೀಡಿದರೆ ಇಲ್ಲವೇ ಬೇರೆ ಒಮ್ಮತದ ಅಭ್ಯರ್ಥಿಗೆ ಟಿಕೆಟ್ ನೀಡಿದರೆ ಕನಿಷ್ಠ 40 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿಕೊಂಡು ಬರುವ ಶಕ್ತಿ ನನಗಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.