ETV Bharat / state

ಬೊಮ್ಮಾಯಿ ಕಟ್ಟಿ ಹಾಕಲು ಕಾಂಗ್ರೆಸ್​ ಕಾರ್ಯತಂತ್ರ; ಶಿಗ್ಗಾಂವಿಯಿಂದ ವಿನಯ್ ಕುಲಕರ್ಣಿ ಕಣಕ್ಕೆ? - ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ ಅವರ ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಕಾರ್ಯತಂತ್ರ ರೂಪಿಸುತ್ತಿದೆ.

CM Bommai against vinay Kulakarni
ಸಿಎಂ ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿ
author img

By

Published : Mar 17, 2023, 11:03 AM IST

Updated : Mar 17, 2023, 11:31 AM IST

ಬೆಂಗಳೂರು: ಬಿಜೆಪಿ ವಿಧಾನಸಭೆ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಆಡಳಿತ ಪಕ್ಷದ ಬಿಜೆಪಿ ಸಾರಥಿಯನ್ನೇ ವಿಧಾನಸಭೆ ಚುನಾವಣೆ ಸಮರದಲ್ಲಿ ಪರಾಭವಗೊಳಿಸಲು ಕಾಂಗ್ರೆಸ್ ಬಲವಾದ ರಾಜಕೀಯ ಕಾರ್ಯತಂತ್ರ ರೂಪಿಸತೊಡಗಿದೆ. ಲಿಂಗಾಯತ (ಸಾದರ) ಸಮುದಾಯಕ್ಕೆ ಸೇರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಅದೇ ಸಮುದಾಯದ ಅಭ್ಯರ್ಥಿಯನ್ನು ಚುನಾವಣೆಗೆ ನಿಲ್ಲಿಸಿ ಲಿಂಗಾಯತ ಮತಗಳನ್ನು ವಿಭಜಿಸಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ರಹಸ್ಯವಾಗಿ ಲೆಕ್ಕಾಚಾರ ಹಾಕತೊಡಗಿದೆ.

ಸಿಎಂ ಬೊಮ್ಮಾಯಿ ಪ್ರತಿನಿಧಿಸುವ ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯದ ಪಂಚಮಸಾಲಿ ಮತಗಳೇ ಅತ್ಯಧಿಕ ಸಂಖ್ಯೆಯಲ್ಲಿದ್ದು, ಗೆಲುವಿಗೆ ನಿರ್ಣಾಯಕವಾಗಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು ಪಂಚಮಸಾಲಿ ಸಮುದಾಯಕ್ಕೆ ಸೇರಿದ ಮತ್ತು ಪಂಚಮಸಾಲಿ ಮೀಸಲು ಹೋರಾಟದಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದ ಮಾಜಿ ಸಚಿವ ವಿನಯ ಕುಲಕರ್ಣಿಯನ್ನು ಬೊಮ್ಮಾಯಿ ವಿರುದ್ಧ ಕಣಕ್ಕಿಳಿಸಲು ಚಿಂತನೆ ನಡೆಸಿರುವ ಮಾಹಿತಿ 'ಈಟಿವಿ ಭಾರತಕ್ಕೆ' ಲಭ್ಯವಾಗಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ನಿಲ್ಲಿಸಲು ಆಡಳಿತ ಪಕ್ಷ ಬಿಜೆಪಿ ಒಂದೆಡೆ ಸಿದ್ಧತೆ ನಡೆಸುತ್ತಿದೆ. ಇದಕ್ಕೆ ಪ್ರತಿಯಾಗಿ ಮತ್ತೊಂದೆಡೆ ಬಿಜೆಪಿಯ ಚುನಾವಣೆ ಸಾರಥ್ಯ ವಹಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕಠಿಣ ಸ್ಪರ್ಧೆವೊಡ್ಡುವಂತಹ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಪ್ರತಿಸ್ಪರ್ಧಿಯಾಗಿ ಚುನಾವಣೆ ಅಖಾಡಕ್ಕಿಳಿಸಲು ಭೂಮಿಕೆ ತಯಾರು ಮಾಡುತ್ತಿದೆ.

ವಿನಯ್ ಕುಲಕರ್ಣಿಯೇ ಯಾಕೆ?: ಮುಖ್ಯಮಂತ್ರಿ ಬೊಮ್ಮಾಯಿ ಎದುರಾಳಿಯಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸ್ಪರ್ಧೆಗಿಳಿಸಲು ಕಾಂಗ್ರೆಸ್ ಹಲವಾರು ಆಯಾಮಗಳಿಂದ ಯೋಚಿಸುತ್ತಿದೆ. ಮುಖ್ಯಮಂತ್ರಿಗಳ ಕ್ಷೇತ್ರ ಶಿಗ್ಗಾಂವಿಯಲ್ಲಿ ಪಂಚಮಸಾಲಿ ಸಮುದಾಯದವರೇ ಅತ್ಯಧಿಕ ಸಂಖ್ಯೆಯಲ್ಲಿದ್ದಾರೆ. ಲಿಂಗಾಯತ ಸಮುದಾಯದ ಪ್ರಮುಖ ಒಳಪಂಗಡದವರಾದ ಪಂಚಮಸಾಲಿ ಮತಗಳು ಅಭ್ಯರ್ಥಿ ಗೆಲುವಿನಲ್ಲಿ ನಿರ್ಣಾಯಕವಾಗಿವೆ.

2ಎ ಮೀಸಲಾತಿಗಾಗಿ ರಾಜ್ಯಾದ್ಯಂತ ನಡೆದ ಹೋರಾಟಕ್ಕೆ ನಿರೀಕ್ಷಿತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಪಂಚಮಸಾಲಿ ಲಿಂಗಾಯತ ಸಮುದಾಯದವರಿಗೆ ಬೇಸರವಿದೆ. ಇದನ್ನೇ ಬಂಡವಾಳವನ್ನಾಗಿಟ್ಟುಕೊಂಡು ಪಂಚಮಸಾಲಿ ಮೀಸಲಾತಿ ಹೋರಾಟಗಾರರೂ ಆದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಶಿಗ್ಗಾಂವಿಯಿಂದ ಕಣಕ್ಕೆ ಇಳಿಸಲು ಕಾಂಗ್ರೆಸ್ ಮುಂದಾಗಿದೆ.

cm Bommai
ಸಿಎಂ ಬೊಮ್ಮಾಯಿ

ಇದನ್ನೂ ಓದಿ: ದಾವಣಗೆರೆ ದಕ್ಷಿಣ ಮತಕ್ಷೇತ್ರದಲ್ಲಿ ಕಾಂಗ್ರೆಸ್​ ಟಿಕೆಟ್​ ಮೇಲೆ ಮುಸ್ಲಿಂ ನಾಯಕರ ಕಣ್ಣು: ಬಿಜೆಪಿ ರಣತಂತ್ರವೇನು?

ವಿನಯ್ ಕುಲಕರ್ಣಿ ಸ್ಪರ್ಧೆಯಿಂದ ಬೊಮ್ಮಾಯಿಗೆ ಚುನಾವಣೆಯಲ್ಲಿ ಹೆಚ್ಚಿನ ಪೈಪೋಟಿ ಎದುರಾಗಲಿದೆ. ಬಿಜೆಪಿ ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರೂ ಆಗಿರುವ ಬಸವರಾಜ ಬೊಮ್ಮಾಯಿ ರಾಜ್ಯಾದ್ಯಂತ ಚುನಾವಣೆ ಪ್ರಚಾರ ನಡೆಸುವುದಕ್ಕೆ ಕಡಿವಾಣ ಹಾಕಬಹುದು. ಪ್ರಬಲ ಅಭ್ಯರ್ಥಿ ಸ್ಪರ್ಧೆಯಿಂದ ಗೆಲುವಿಗಾಗಿ ಬೊಮ್ಮಾಯಿ ತಮ್ಮ ಕ್ಷೇತ್ರದ ಕಡೆಯೇ ಹೆಚ್ಚು ಗಮನಹರಿಸುವಂತಹ ಸನ್ನಿವೇಶ ಸೃಷ್ಟಿಸಿ ಒಂದು ರೀತಿ ಶಿಗ್ಗಾಂವಿಯಲ್ಲಿಯೇ ಮುಖ್ಯಮಂತ್ರಿಗಳನ್ನು ಕಟ್ಟಿಹಾಕುವ ತಂತ್ರಗಾರಿಕೆಯನ್ನೂ ಕಾಂಗ್ರೆಸ್ ಹೊಂದಿದೆ ಎಂದು ಹೇಳಲಾಗುತ್ತದೆ.

ವಿನಯ್ ಕುಲಕರ್ಣಿ ಹೇಳುವುದೇನು?: ಶಿಗ್ಗಾಂವಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ತಾವು ಸ್ಪರ್ಧೆ ಮಾಡಬೇಕೆನ್ನುವುದು ಕಾಂಗ್ರೆಸ್ ಪಕ್ಷದ ಅಪೇಕ್ಷೆಯಾಗಿದೆ. ಶಿಗ್ಗಾಂವಿ ಅಭ್ಯರ್ಥಿಯಾಗುವ ಬಗ್ಗೆ ಪಕ್ಷದಿಂದ ಒತ್ತಡವೂ ಇದೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಈ ಟಿವಿ ಭಾರತಕ್ಕೆ ಖಚಿತಪಡಿಸಿದ್ದಾರೆ. ಶಿಗ್ಗಾಂವಿ ಬದಲು ಸ್ವ ಕ್ಷೇತ್ರ ಧಾರವಾಡದಲ್ಲಿಯೇ ಸ್ಪರ್ಧೆ ಮಾಡುವ ಅಭಿಲಾಷೆ ಹೊಂದಿದ್ದೇನೆ. ಕಾಂಗ್ರೆಸ್ ಪಕ್ಷದ ಅಂತಿಮ ತೀರ್ಮಾನದಂತೆ ಸ್ಪರ್ಧೆ ಬಗ್ಗೆ ನಿರ್ಧಾರ ತಗೆದುಕೊಳ್ಳಲಾಗುತ್ತದೆ. ಆದ್ರೆ ಕ್ಷೇತ್ರದಲ್ಲಿ ಸಿಎಂಗೆ ಪ್ರಬಲ ಸ್ಪರ್ಧೆ ನೀಡುವ ಆಕಾಂಕ್ಷಿತರು ಸಹ ನಮ್ಮ ಪಕ್ಷದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆಂದು ವಿನಯ್ ಹೇಳಿದ್ದಾರೆ.

cm Bommai
ಸಿಎಂ ಬೊಮ್ಮಾಯಿ

ಶಿಗ್ಗಾಂವಿಯಲ್ಲಿ ಕಾಂಗ್ರೆಸ್​​ನಿಂದ ಸ್ಪರ್ಧಿಸಲು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ, ಸೋಮಣ್ಣ ಬೇವಿನಮರದ, ಸಂಜೀವ ಕುಮಾರ್ ನೀರಲಗಿ ಸೇರಿದಂತೆ ಹಲವಾರು ಆಕಾಂಕ್ಷಿತರು ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಶಿಗ್ಗಾಂವಿ ಕ್ಷೇತ್ರದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸತತವಾಗಿ 3 ಬಾರಿ ಬಿಜೆಪಿಯಿಂದ ಚುನಾಯಿತರಾಗಿದ್ದಾರೆ. ಅದಕ್ಕಿಂತ ಮುಂಚೆ ಈ ಕ್ಷೇತ್ರದಲ್ಲಿ ರಾಜಶೇಖರ ಸಿಂಧೂರ ಸೇರಿದಂತೆ ಪಂಚಮಸಾಲಿ ಸಮುದಾಯದವರೇ ಹೆಚ್ಚಿನ ಸಂಖ್ಯೆಯಲ್ಲಿ ಚುನಾಯಿತರಾಗಿದ್ದಾರೆ. ಅಲ್ಪ ಸಂಖ್ಯಾತ ಸಮುದಯಕ್ಕೆ ಸೇರಿದ ಅಜ್ಜಂಪೀರ್ ಖಾದ್ರಿ ಸಹ ಗೆಲವು ಸಾಧಿಸಿದ್ದರು.

2018 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅಜ್ಜಂಪೀರ್ ಖಾದ್ರಿ 74 ಸಾವಿರ ಮತ ಪಡೆದು ಸುಮಾರು 9 ಸಾವಿರ ಮತಗಳ ಅಂತರದಿಂದ ಪರಾಭವಗೊಂಡಿದ್ದರು. ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 83 ಸಾವಿರ ಮತಗಳನ್ನು ಗಳಿಸಿ ಗೆಲವು ಸಾಧಿಸಿದ್ದರು.

ಶಿಗ್ಗಾಂವಿ ಕ್ಷೇತ್ರದಲ್ಲಿ ತನ್ನದೇ ಆದ ಮತ ಬ್ಯಾಂಕ್ ಹೊಂದಿರುವ ಕಾಂಗ್ರೆಸ್ ಪಕ್ಷ ಸಿಎಂ ಬೊಮ್ಮಾಯಿ ವಿರುದ್ಧ ಪಂಚಮಸಾಲಿ ಸಮುದಾಯಕ್ಕೆ ಸೇರಿದ ವಿನಯ್ ಕುಲಕರ್ಣಿ ಕಣಕ್ಕಿಳಿಸಿದರೆ ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತಗಳ ಜೊತೆಗೆ ಲಿಂಗಾಯತ ಮತಗಳನ್ನು ಪಡೆದು ಗೆಲವು ಸಾಧಿಸಬಹುದೆನ್ನುವುದು ಹಸ್ತದ ನಿಲುವಾಗಿದೆ.

ಇದನ್ನೂ ಓದಿ: ಯಾವ ಪಕ್ಷಕ್ಕೆ ಗೆಲುವಿನ ಬೆಣ್ಣೆ: ಎಸ್​ ಎಸ್​ ಮಲ್ಲಿಕಾರ್ಜುನ್​ಗೆ ಯಾರಾಗಲಿದ್ದಾರೆ ಎದುರಾಳಿ?

Last Updated : Mar 17, 2023, 11:31 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.