ETV Bharat / state

ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ, ಶೀಘ್ರದಲ್ಲೇ ಹೊಸ ಸಿಎಂ ಘೋಷಣೆ: ಸುರ್ಜೇವಾಲಾ - ನೂತನ ಸಿಎಂ

ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ನಿರ್ಧಾರವನ್ನು ಪಕ್ಷದ ನಾಯಕರು ಕೈಗೊಳ್ಳುತ್ತಾರೆ ಎಂದು ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.

Surjewala
ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ
author img

By

Published : May 15, 2023, 9:02 AM IST

ಕರ್ನಾಟಕಕ್ಕೆ ನೂತನ ಸಿಎಂ ವಿಚಾರ: ಸುರ್ಜೇವಾಲಾ ಪ್ರತಿಕ್ರಿಯೆ

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ. ಶೀಘ್ರದಲ್ಲೇ ಕರ್ನಾಟಕದ ನೂತನ ಮುಖ್ಯಮಂತ್ರಿಯ ಹೆಸರು ಪ್ರಕಟಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಮತ್ತು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬಳಿಕ ತಡರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ನಿರ್ಧಾರವನ್ನು ಪಕ್ಷದ ನಾಯಕರು ಕೈಗೊಳ್ಳುತ್ತಾರೆ. ಮಲ್ಲಿಕಾರ್ಜುನ ಖರ್ಗೆ ಅವರ ತೀರ್ಪನ್ನು ನನ್ನ ತೀರ್ಪು ಆಗಿ ಮಾಡಲು ಸಾಧ್ಯವಿಲ್ಲ. ಅವರು ಈ ಮಣ್ಣಿನ ಮಗ. ನಮ್ಮ ಹಿರಿಯ ನಾಯಕರು. ಈ ವಿಚಾರದಲ್ಲಿ ಅವರು ಹೆಚ್ಚು ಸಮಯ ತೆಗೆದುಕೊಳ್ಳುವುದಿಲ್ಲ ಎಂಬ ಭರವಸೆ ನನಗಿದೆ" ಎಂದರು. ಇದೇ ವೇಳೆ, "ಮೊದಲ ಸಚಿವ ಸಂಪುಟ ಸಭೆಯಲ್ಲೇ ನಮ್ಮ ಐದು ಗ್ಯಾರೆಂಟಿಗಳನ್ನು ಜಾರಿ ಮಾಡಲಿದ್ದೇವೆ" ಎಂದು ತಿಳಿಸಿದರು.

ಭಾನುವಾರ ತಡರಾತ್ರಿ ನಡೆದ ಸಿಎಲ್‌ಪಿ ಸಭೆ: ಮುಖ್ಯಮಂತ್ರಿ ಹೆಸರನ್ನು ಆಯ್ಕೆ ಮಾಡಲು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡುವ ನಿರ್ಣಯವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್‌ಪಿ) ಸರ್ವಾನುಮತದಿಂದ ಅಂಗೀಕರಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕನನ್ನು ನೇಮಿಸಲು ಎಐಸಿಸಿ ಅಧ್ಯಕ್ಷರಿಗೆ ಅಧಿಕಾರವಿದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ.

ತಡರಾತ್ರಿ ಆರಂಭವಾದ ಸಭೆ ಮಧ್ಯರಾತ್ರಿ 1.30ರವರೆಗೂ ನಡೆಯಿತು. ಹೊಸದಾಗಿ ಆಯ್ಕೆಯಾದ ಎಲ್ಲ 135 ಶಾಸಕರು ಭಾಗವಹಿಸಿದ್ದರು. ವೀಕ್ಷಕರಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಮತ್ತು ಪಕ್ಷದ ನಾಯಕರಾದ ಜಿತೇಂದ್ರ ಸಿಂಗ್ ಮತ್ತು ದೀಪಕ್ ಬಬಾರಿಯಾ ಉಪಸ್ಥಿತರಿದ್ದರು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಸಿ.ವೇಣುಗೋಪಾಲ್, ಜೈರಾಮ್ ರಮೇಶ್ ಮತ್ತಿತರರು ಸಭೆಯಲ್ಲಿ ಇದ್ದರು.

ಸಿಎಲ್‌ಪಿ ಸಭೆಗೂ ಮುನ್ನ ಮಾತನಾಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, "ಭಾನುವಾರ ರಾತ್ರಿಯೇ ಶಾಸಕರ ಅಭಿಪ್ರಾಯ ಸಂಗ್ರಹಿಸುವ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಬಳಿಕ ಎಐಸಿಸಿ ಅಧ್ಯಕ್ಷರಿಗೆ ಅಭಿಪ್ರಾಯ ತಿಳಿಸಲು ವೀಕ್ಷಕರು ದೆಹಲಿಗೆ ತೆರಳಿದ್ದಾರೆ" ಎಂದು ಹೇಳಿದ್ದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಡಿ.ಕೆ.ಶಿವಕುಮಾರ್ ನಿವಾಸದ ಬಳಿಗೆ ಬಂದಿದ್ದ ಅಪಾರ ಸಂಖ್ಯೆಯ ಅಭಿಮಾನಿಗಳು, "ನಮಗೆ ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು" ಎಂದು ಘೋಷಣೆಗಳನ್ನು ಕೂಗಿದರು. ಮತ್ತೊಂದೆಡೆ, ಸಿದ್ದರಾಮಯ್ಯ ಅವರನ್ನ ಮುಖ್ಯಮಂತ್ರಿ ಮಾಡಬೇಕೆಂದು ಅವರ ಅಭಿಮಾನಿಗಳು ಆಗ್ರಹಿಸಿದ್ದಾರೆ.

"ಕಾಂಗ್ರೆಸ್ ಪಕ್ಷದ ಶಾಸಕರನ್ನು ಭೇಟಿ ಮಾಡುವ ಸಂಪೂರ್ಣ ಪ್ರಕ್ರಿಯೆ ಭರದಿಂದ ಸಾಗಿದೆ. ವೀಕ್ಷಕರು ಎಲ್ಲಾ ಶಾಸಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಅವರ ಅಭಿಪ್ರಾಯಗಳನ್ನು ದಾಖಲಿಸಿ, ವರದಿ ಸಲ್ಲಿಸಲಿದ್ದಾರೆ. ನಾವು ಶೀಘ್ರ ಮುಂದಿನ ನಾಯಕನನ್ನು ಘೋಷಿಸುತ್ತೇವೆ"- ಕರ್ನಾಟಕದ ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ.

ಇದನ್ನೂ ಓದಿ: ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ವಿಚಾರದ ಒಂದು ಸಾಲಿನ ನಿರ್ಣಯವನ್ನು ಸಿದ್ದರಾಮಯ್ಯ ಮಂಡಿಸಿದ್ದಾರೆ: ಸುರ್ಜೇವಾಲ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.