ETV Bharat / state

ಸಿದ್ದರಾಮಯ್ಯಗೆ ಕಾಂಗ್ರೆಸ್ ಹೈಕಮಾಂಡ್​ ಶರಣಾಗಿದೆ, ಡಿಕೆಶಿ ರಬ್ಬರ್​ ಸ್ಟಾಂಪ್​: ನಾರಾಯಣಸ್ವಾಮಿ - ಬಿಜೆಪಿ ವಕ್ತಾರ ಛಲವಾದಿ ನಾರಾಯಣಸ್ವಾಮಿ

ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಕಾಂಗ್ರೆಸ್​ ಕೈಕಮಾಂಡ್​ ಹೆದರುತ್ತಿದೆ- ಡಿಕೆಶಿ ರಬ್ಬರ್​ ಸ್ಟಾಂಪ್ ​- ಛಲವಾದಿ ನಾರಾಯಣಸ್ವಾಮಿ ಆರೋಪ

congress-surrender-to-siddaramaiah-says-chalavadi-narayana-swamy
ಸಿದ್ದರಾಮಯ್ಯರನ್ನು ಕಂಡು ಕಾಂಗ್ರೆಸ್ ಬೆಚ್ಚಿಬೀಳುತ್ತಿದೆ, ತನ್ನೆಲ್ಲ ಶಕ್ತಿ ಕಳೆದುಕೊಂಡ ಹೈಕಮಾಂಡ್: ನಾರಾಯಣಸ್ವಾಮಿ
author img

By

Published : Jul 14, 2022, 6:13 PM IST

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶರಣಾಗಿದೆ. ಹೈಕಮಾಂಡ್ ತನ್ನೆಲ್ಲ ಶಕ್ತಿಯನ್ನು ಕಳೆದುಕೊಂಡಿದೆ. ಕಾಂಗ್ರೆಸ್ ಸಂಪೂರ್ಣ ಕುಸಿದಿರುವುದಕ್ಕೆ ಇದು ಸ್ಪಷ್ಟ ನಿದರ್ಶನ. ಜನರ ಆಶೋತ್ತರಗಳನ್ನು ಈಡೇರಿಸಲು ಅದಕ್ಕೆ ಶಕ್ತಿ ಇಲ್ಲ ಎಂದು ಬಿಜೆಪಿ ವಕ್ತಾರ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.

ರಾಜ್ಯ ಬಿಜೆಪಿ ಕಚೇರಿಯಲ್ಲಿಂದು ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಸಿದ್ದರಾಮೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರೆ ಆ ಪಕ್ಷ ಎಷ್ಟು ದುರ್ಬಲವಾಗಿದೆ ಎಂದು ತಿಳಿಯಲಿದೆ. ಕಾಂಗ್ರೆಸ್ ಪಕ್ಷ ವಿನಾಶದತ್ತ ಸಾಗಿದೆ. ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈಗ ಕೇವಲ ರಬ್ಬರ್ ಸ್ಟಾಂಪ್ ಆಗಿ ಉಳಿದಿದ್ದಾರೆ ಎಂದು ಗೇಲಿ ಮಾಡಿದರು.

ಸಿದ್ದರಾಮಯ್ಯರನ್ನು ಕಂಡರೆ ಕಾಂಗ್ರೆಸ್ ಬೆಚ್ಚಿಬೀಳುತ್ತಿದೆ. ಅವರನ್ನು ವಿರೋಧಿಸಿದರೆ ತಮ್ಮ ಭವಿಷ್ಯ ಏನಾದೀತು ಎಂಬ ಭಯ ಕಾಂಗ್ರೆಸ್ ನಾಯಕರಲ್ಲಿದೆ. ಸಿದ್ದರಾಮಯ್ಯರದು ದೇವರಾಜ ಅರಸರನ್ನು ಮೀರಿಸಿದ ನಾಯಕತ್ವ ಎಂದು ಕಾಂಗ್ರೆಸ್‍ನ ಡಾ.ಪರಮೇಶ್ವರ್ ಹೇಳಿದ್ದಾರೆ. ಇದು ಬಿಸಿ ಹಾಲು ಕುಡಿದು ಮೂತಿ ಸುಟ್ಟುಕೊಂಡ ಬೀರಬಲ್ಲನ ಬೆಕ್ಕಿನ ಕಥೆಯಂತಿದೆ. ಪರಮೇಶ್ವರ್ ಸೇರಿ ಕಾಂಗ್ರೆಸ್ ನಾಯಕರು ಮೂತಿ ಸುಟ್ಟ ಬೆಕ್ಕಿನಂತೆ ಸಿದ್ದರಾಮಯ್ಯರ ಓಲೈಕೆ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಒಂದೆಡೆ ಸಿದ್ದರಾಮೋತ್ಸವ, ಇನ್ನೊಂದೆಡೆ ಶಿವಕುಮಾರೋತ್ಸವ ಹೀಗೆ ಅನೇಕ ಉತ್ಸವಗಳನ್ನು ನಡೆಸಲು ಕಾಂಗ್ರೆಸ್ ಮುಂದಾಗಿದೆ. ಅವರೇನು ಮಾಡಿದರೂ ಅದು ಪಕ್ಷದ ಆಂತರಿಕ ವಿಚಾರ. ಆದರೂ ಒಂದು ರಾಜಕೀಯ ಪಕ್ಷವಾಗಿ ಜನರಿಗೆ ಯಾವ ರೀತಿಯ ಸಂದೇಶ ಕೊಡುತ್ತಿದ್ದಾರೆ ಎಂಬುದು ಮುಖ್ಯವಾಗುತ್ತದೆ ಎಂದರು.

ಶಕ್ತಿಹೀನ ಕಾಂಗ್ರೆಸ್ ಹೈಕಮಾಂಡ್: ಹಿಂದಿನ ದಿನಗಳಲ್ಲಿ ಉತ್ಸವಗಳು ಗಾಂಧಿ ಕುಟುಂಬಕ್ಕೆ ಸೀಮಿತವಾಗಿದ್ದವು. ವಿ.ಪಿ. ಸಿಂಗ್ ರಾಜೀವ್ ಗಾಂಧಿಯವರನ್ನು ಮೀರಿಸುವ ಸಾಧ್ಯತೆ ಗಮನಿಸಿ ಅವರಿಗೂ ಚಿತ್ರಹಿಂಸೆ ಕೊಟ್ಟಿದ್ದರು. ಸಿದ್ದರಾಮೋತ್ಸವದ ಮೂಲಕ ಉಳಿಯಲು ಬಯಸುತ್ತಿದೆ ಎಂದರೆ ಕಾಂಗ್ರೆಸ್ ಸ್ಥಿತಿ ಎಷ್ಟು ಚಿಂತಾಜಕವಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಛಲವಾಡಿ ನಾರಾಯಣಸ್ವಾಮಿ ಕುಟುಕಿದರು.

ದಿವಂಗತ ಎಸ್.ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದ 1990ರ ಅವಧಿಯಲ್ಲಿ ಕಾಂಗ್ರೆಸ್ ಹೈಕಮಾಂಡ್​ನ್ನು ಮುಟ್ಟಲಾಗದ ಸ್ಥಿತಿ ಇತ್ತು. ಮುಖ್ಯಮಂತ್ರಿಯಾಗಿ 2 ವರ್ಷ ಪೂರೈಸಿದ ಸಂದರ್ಭದಲ್ಲಿ ಒಂದು ದೊಡ್ಡ ಆಂದೋಲನವನ್ನು ಬಂಗಾರಪ್ಪ ಮಾಡಿದ್ದರು. ಲಕ್ಷಗಟ್ಟಲೆ ಜನ ಅದರಲ್ಲಿ ಸೇರಿದ್ದರು. ಅದು ಕಾಂಗ್ರೆಸ್ ಉತ್ಸವ ಆಗಿರಲಿಲ್ಲ, ಬಂಗಾರಪ್ಪ ಅವರ ಉತ್ಸವವಾಗಿತ್ತು. ಇದನ್ನು ಗಮನಿಸಿದ ಹೈಕಮಾಂಡ್ ಬಂಗಾರಪ್ಪ ಅವರನ್ನು ಒಂದೇ ತಿಂಗಳಲ್ಲಿ ಅವರಿಗೆ ಹಿಂಸೆ ಕೊಟ್ಟು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿತ್ತು. ಹೈಕಮಾಂಡ್ ಮೀರಿದ ವ್ಯಕ್ತಿತ್ವ ಎಲ್ಲೂ ವೈಯಕ್ತಿಕವಾಗಿ ಬೆಳೆಯಬಾರದೆಂಬ ಸಿದ್ಧಾಂತ ಕಾಂಗ್ರೆಸ್‍ನದಾಗಿತ್ತು ಎಂದರು.

ಸಿದ್ದರಾಮಯ್ಯ ಕೇವಲ ದಲಿತ ವಿರೋಧಿಯಲ್ಲ. ಅವರು ಲಿಂಗಾಯತರ ವಿರೋಧಿಯೂ ಆಗಿದ್ದಾರೆ. ಗೌಡರ, ಒಕ್ಕಲಿಗರ ವಿರೋಧಿ. ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಮಾಜಿ ಶಾಸಕ ಕೆ ಎನ್​ ರಾಜಣ್ಣ ಅವರನ್ನು ಸಿದ್ದರಾಮೋತ್ಸವದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಇದರ ಅರ್ಥ ಏನು? ಸಿದ್ದರಾಮಯ್ಯನವರೇ ಈ ಹೇಳಿಕೆ ಕೊಡಿಸಿರಬಹುದೇ?. ಸಿದ್ದರಾಮಯ್ಯ ದೇವೇಗೌಡರ ಸಾವು ಬಯಸುವವರು. ಹಿತ ಬಯಸುವ ವ್ಯಕ್ತಿಯಲ್ಲ ಎಂದು ಆರೋಪಿಸಿದರು.

ಸಿದ್ದರಾಮಯ್ಯನವರು ತಮ್ಮ ಅಧಿಕಾರದ ಅವಧಿಯಲ್ಲಿ ಎಸ್‍ಸಿ, ಎಸ್‍ಟಿಗಳ ಅಭಿವೃದ್ಧಿಗೆ 24 ಸಾವಿರ ಕೋಟಿ ಕೊಡುವುದಾಗಿ ಹೇಳಿದ್ದರು. ಕೊಟ್ಟ ಮೊತ್ತದಲ್ಲಿ ಮೆಟ್ರೊ, ಪಿಡಬ್ಲ್ಯೂಡಿಗೆ ಹಣ ಖರ್ಚು ಮಾಡಿದ್ದರು. ಇವುಗಳು ದಲಿತರವೇ?. ಈ ದುಡ್ಡನ್ನು ಸಿದ್ದರಾಮಯ್ಯ ಬೇರೆ ಉದ್ದೇಶಕ್ಕೆ ಕೊಟ್ಟಾಗ ಮಾತನಾಡದ ಧ್ರುವನಾರಾಯಣ್ ಆಗ ಕಡ್ಲೆಪುರಿ ತಿನ್ನುತ್ತಿದ್ದರೇ?. ಬಿಜೆಪಿ ಸರ್ಕಾರ ಎಸ್‍ಸಿ, ಎಸ್‍ಟಿಗಳಿಗೆ 28 ಸಾವಿರ ಕೋಟಿ ಹಣ ನೀಡಿದೆ. ಆ ಹಣವನ್ನು ಬೇರೆ ಅಭಿವೃದ್ಧಿ ಕಾರ್ಯಕ್ಕೆ ವರ್ಗಾವಣೆ ಮಾಡಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಕೈಕೊಟ್ಟ ಮುಂಗಾರು ಮಳೆ.. ಬಿಜೆಪಿ ಶಾಸಕನ ಮೇಲೆ ಕೆಸರು ಎರಚಿದ ಮಹಿಳೆಯರು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.