ETV Bharat / state

ರಾಹುಲ್ ಗಾಂಧಿ ಸಂಸತ್ ಸ್ಥಾನದ ಅನರ್ಹತೆಗೆ ಖಂಡನೆ: ಜುಲೈ 12ರಂದು ಕಾಂಗ್ರೆಸ್ ಮೌನ ಪ್ರತಿಭಟನೆ - congress protest for rahul gandhi

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಸ್ಥಾನ ಅನರ್ಹಗೊಳಿಸಿರುವುದನ್ನು ಖಂಡಿಸಿ ಮೌನ ಪ್ರತಿಭಟನೆಗೆ ಕಾಂಗ್ರೆಸ್ ಮುಂದಾಗಿದೆ.

Etv Bharat ರಾಹುಲ್ ಗಾಂಧಿ
Etv Bharat Rahul Gandhi
author img

By

Published : Jul 9, 2023, 9:20 AM IST

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುನ್ನು ಖಂಡಿಸಿ ಜುಲೈ 12ರಂದು ರಾಜ್ಯದ ಎಲ್ಲ ಜಿಲ್ಲ ಕೇಂದ್ರ ಕಚೇರಿಗಳ ಮಹಾತ್ಮ ಗಾಂಧಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗಳ ಮುಂದೆ ಒಂದು ದಿನದ ಮೌನ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಸತ್ಯ, ನ್ಯಾಯದ ಹೋರಾಟದಲ್ಲಿ ನಾವೆಲ್ಲರೂ ಅವರ ಜೊತೆಗಿದ್ದೇವೆ ಎಂದು ಹೇಳಲು ಮೌನ ಪ್ರತಿಭಟನೆ ನಡೆಸುವುದಾಗಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಹುಲ್‌ ಗಾಂಧಿ ವಿವಿಧ ವೇದಿಕೆಗಳಲ್ಲಿ ಮೋದಿ ಮತ್ತು ಅದಾನಿ ನಡುವಿನ ಸಂಬಂಧವನ್ನು ನಿರಂತರವಾಗಿ ಹೇಗೆ ಪ್ರಶ್ನಿಸುತ್ತಿದ್ದಾರೆ ಮತ್ತು ಬಹಿರಂಗಪಡಿಸುತ್ತಿದ್ದಾರೆ ಎಂಬುದನ್ನು ಜಗತ್ತು ನೋಡುತ್ತಿದೆ. ನಿರ್ಭೀತಿಯ ನಡವಳಿಕೆಯನ್ನು ಸಹಿಸಿಕೊಳ್ಳದ ಪ್ರಧಾನಮಂತ್ರಿಗಳು ಮತ್ತು ಬಿಜೆಪಿ, ರಾಹುಲ್‌ ಗಾಂಧಿ ಅವರನ್ನು ದೋಷಿ ಎಂದು ಸಾಬೀತುಪಡಿಸಲು ಹಾಗೂ ಲೋಕಸಭೆಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಕಾರಣವಾಗುವ ಎಲ್ಲ ಸೇಡಿನ ಕ್ರಮಗಳನ್ನು ಅನುಸರಿಸುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ.

ಜುಲೈ 12 ರಂದು ರಾಜ್ಯಾದ್ಯಂತ ಕಾಂಗ್ರೆಸ್ ಮೌನ ಪ್ರತಿಭಟನೆ

ಅಡಚಣೆಗಳ ನಡುವೆಯೂ ನಮ್ಮ ನಾಯಕರು ಜನರ ಒಳಿತಿಗಾಗಿ, ನ್ಯಾಯ-ಸತ್ಯಕ್ಕಾಗಿ, ಜನರ ಸಮಸ್ಯೆಗಳನ್ನು ಎತ್ತಿ ಹಿಡಿಯಲು ನಿರಂತರವಾಗಿ ಹೋರಾಟ ಮಾಡುತ್ತಿದ್ದಾರೆ. ಅವರು ನಿರ್ಭಯದಿಂದ "ನನ್ನ ದೇಶದ ಜನರ ಧ್ವನಿಯಾಗಿ ಹೋರಾಡುತ್ತಿದ್ದೇನೆ ಅದಕ್ಕಾಗಿ ಯಾವುದೇ ತ್ಯಾಗಕ್ಕಾಗಿ ಸಿದ್ಧ" ಎಂದು ಹೇಳಿದ್ದಾರೆ. ರಾಹುಲ್‌ ಗಾಂಧಿ ಅವರ ಸಂಸತ್ ಅನರ್ಹತೆಯನ್ನು ಕಾಂಗ್ರೆಸ್ ಪಕ್ಷ ಮಾತ್ರವಲ್ಲ, ಇಡೀ ರಾಷ್ಟ್ರವೇ ಖಂಡಿಸುತ್ತಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನೇತೃತ್ವದಲ್ಲಿ, ನಮ್ಮ ನಾಯಕರ ಒಗಟ್ಟಿನ, ನಿರ್ಭೀತ ಮತ್ತು ರಾಜಿರಹಿತ ಹೋರಾಟವನ್ನು ಬೆಂಬಲಿಸಿ, ಜುಲೈ 12ರ ಬುಧವಾರ ಬೆಳಗ್ಗೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಎಲ್ಲಾ ಡಿಸಿಸಿ/ ಬಿಸಿಸಿಗಳು ಗಾಂಧೀಜಿ ಅಥವಾ ಸ್ವಾತಂತ್ರ್ಯ ಹೋರಾಟಗಾರರ ಪ್ರತಿಮೆಗಳ ಮುಂಭಾಗದಲ್ಲಿ ಒಂದು ದಿನದ ಮೌನ ಸತ್ಯಾಗ್ರಹವನ್ನು (ಮೌನ ಪ್ರತಿಭಟನೆ) ಆಯೋಜಿಸಲು ತಿಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೌನ ಪ್ರತಿಭಟನೆಯಲ್ಲಿ ಡಿಸಿಸಿ ಅಧ್ಯಕ್ಷರು, ಸಚಿವರು, ಉಸ್ತುವಾರಿ ಕೆಪಿಸಿಸಿ ಪದಾಧಿಕಾರಿಗಳು, ಸಂಸದರು/ ಮಾಜಿ ಸಂಸದರು, ಬಿಸಿಸಿ ಅಧ್ಯಕ್ಷರು, ಶಾಸಕರು/ ಮಾಜಿ ಶಾಸಕರು, ಸ್ಥಳೀಯ ಮುಖಂಡರು, ಸ್ಥಳೀಯ ಸಂಸ್ಥೆಗಳ ಸದಸ್ಯರು ಹಾಗೂ ಮಾಜಿ ಸದಸ್ಯರು, ಪಕ್ಷದ ಎಲ್ಲ ಹಂತಗಳ ಅಧ್ಯಕ್ಷರು/ ಪದಾಧಿಕಾರಿಗಳು ಭಾಗವಹಿಸಬೇಕು ಎಂದು ಡಿಕೆಶಿ ಮನವಿ ಮಾಡಿದ್ದಾರೆ.

ಗುಜರಾತ್ ಹೈಕೋರ್ಟ್​​ನಿಂದ ರಾಹುಲ್ ಅರ್ಜಿ ವಜಾ: ಮೋದಿ ಉಪನಾಮೆ ಕುರಿತ ವಿವಾದಾತ್ಮಕ ಹೇಳಿಕೆಯ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಸೆಷನ್ಸ್ ನ್ಯಾಯಾಲಯ ನೀಡಿರುವ ಶಿಕ್ಷೆಗೆ ತಡೆ ಕೋರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಜುಲೈ 7 ರಂದು ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ಇದೆ.

ಇದನ್ನೂ ಓದಿ: ಮೋದಿ ಉಪನಾಮೆ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಹಿನ್ನಡೆ: ಶಿಕ್ಷೆಗೆ ತಡೆ ಕೋರಿದ ಅರ್ಜಿ ವಜಾಗೊಳಿಸಿದ ಗುಜರಾತ್‌ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.