ನವದೆಹಲಿ/ಬೆಂಗಳೂರು: ಐದು ಗ್ಯಾರಂಟಿಗಳ ಜಾರಿ ಮೂಲಕ ಕರ್ನಾಟಕ ಮಾದರಿ ಅಭಿವೃದ್ಧಿ ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಲಿದ್ದು, ಕಾಂಗ್ರೆಸ್ 20-24 ಸ್ಥಾನಗಳಲ್ಲಿ ಜಯಗಳಿಸುವ ಭರವಸೆ ವ್ಯಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಕುರಿತು ಎಐಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಹೈಕಮಾಂಡ್ ಬುಧವಾರ ಮಹತ್ವದ ಸಭೆ ನಡೆಯಿತು. ಈ ಸಭೆ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಮ್ಮ ವರಿಷ್ಠರಾದ ರಾಹುಲ್ ಗಾಂಧಿ ಹಾಗೂ ಇನ್ನಿತರ ಎಐಸಿಸಿ ನಾಯಕರ ಜೊತೆ ಕರ್ನಾಟಕದ 30ಕ್ಕೂ ಹೆಚ್ಚು ಪಕ್ಷದ ನಾಯಕರು ಮತ್ತು ಸಚಿವರ ಸಭೆ ನಡೆದಿದೆ ಎಂದರು.
-
VIDEO | "In today's meeting with Congress president Mallikarjun Kharge and party leader Rahul Gandhi, we discussed our strategy for the (2024 Lok Sabha) elections in Karnataka," says Congress leader @rssurjewala after party meeting in Delhi. pic.twitter.com/3H0LTIY41T
— Press Trust of India (@PTI_News) August 2, 2023 " class="align-text-top noRightClick twitterSection" data="
">VIDEO | "In today's meeting with Congress president Mallikarjun Kharge and party leader Rahul Gandhi, we discussed our strategy for the (2024 Lok Sabha) elections in Karnataka," says Congress leader @rssurjewala after party meeting in Delhi. pic.twitter.com/3H0LTIY41T
— Press Trust of India (@PTI_News) August 2, 2023VIDEO | "In today's meeting with Congress president Mallikarjun Kharge and party leader Rahul Gandhi, we discussed our strategy for the (2024 Lok Sabha) elections in Karnataka," says Congress leader @rssurjewala after party meeting in Delhi. pic.twitter.com/3H0LTIY41T
— Press Trust of India (@PTI_News) August 2, 2023
ಎರಡು ಪ್ರತ್ಯೇಕ ಸಭೆಗಳಲ್ಲಿ ಲೋಕಸಭಾ ಚುನಾವಣೆ ಹಾಗೂ ಐದು ಗ್ಯಾರಂಟಿಗಳ ಯಶಸ್ವಿ ಜಾರಿಯ ಫಲಿತಾಂಶಗಳ ಬಗ್ಗೆ ಸುದೀರ್ಘ ಚರ್ಚೆ ನಡೆದಿದೆ. ಐದು ಗ್ಯಾರಂಟಿಗಳು ಪ್ರತಿಯೊಬ್ಬ ಫಲಾನುಭವಿಗೆ ತಲುಪಬೇಕು. ಇದರ ಯಶಸ್ಸು ಲೋಕಸಭಾ ಚುನಾವಣೆಯಲ್ಲಿ ಪ್ರತಿಫಲಿಸಬೇಕು ಎನ್ನುವ ಸದಾಭಿಪ್ರಾಯ ಸಭೆಯಲ್ಲಿ ವ್ಯಕ್ತವಾಗಿದೆ. ಹೀಗಾಗಿ, ಲೋಕಸಭೆ ಚುನಾವಣೆಯಲ್ಲಿ 20-24 ಸ್ಥಾನ ಗೆಲ್ಲುವ ಭರವಸೆಯನ್ನು ಹಲವರು ವ್ಯಕ್ತಪಡಿಸಿದ್ದಾರೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಗ್ಯಾರಂಟಿಗಳ ಸಮರ್ಪಕ ಜಾರಿ ಮತ್ತು ಲೋಕಸಭಾ ಚುನಾವಣೆಯ ಹೊಣೆ ವಹಿಸಲಾಗಿದೆ. ಇದಲ್ಲದೇ, ಹೆಚ್ಚುವರಿಯಾಗಿ ಕೆಲವು ಜಿಲ್ಲೆಗಳ ಜವಾಬ್ದಾರಿಯನ್ನೂ ಸಚಿವರಿಗೆ ನೀಡುವ ಕುರಿತು ಚರ್ಚೆ ನಡೆದಿದೆ. ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಪ್ರಧಾನಿ ಮೋದಿ ಅವರ ಆರೋಪ ಪೂರ್ತಿ ಸುಳ್ಳಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
-
VIDEO | "Today, we have worked out a new strategy for the (2024) parliamentary elections," says Karnataka Deputy CM @DKShivakumar after meeting Congress president Mallikarjun Kharge and party leader Rahul Gandhi in Delhi. pic.twitter.com/c7HUktrYcI
— Press Trust of India (@PTI_News) August 2, 2023 " class="align-text-top noRightClick twitterSection" data="
">VIDEO | "Today, we have worked out a new strategy for the (2024) parliamentary elections," says Karnataka Deputy CM @DKShivakumar after meeting Congress president Mallikarjun Kharge and party leader Rahul Gandhi in Delhi. pic.twitter.com/c7HUktrYcI
— Press Trust of India (@PTI_News) August 2, 2023VIDEO | "Today, we have worked out a new strategy for the (2024) parliamentary elections," says Karnataka Deputy CM @DKShivakumar after meeting Congress president Mallikarjun Kharge and party leader Rahul Gandhi in Delhi. pic.twitter.com/c7HUktrYcI
— Press Trust of India (@PTI_News) August 2, 2023
ನಾವು ಬಜೆಟ್ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲ ಜಾತಿ, ಎಲ್ಲ ಧರ್ಮ, ಎಲ್ಲ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ. ಪ್ರತಿ ದಿನ ಒಂದೂವರೆ ಕೋಟಿಗೂ ಅಧಿಕ ಮಂದಿ ನಮ್ಮ ಸರ್ಕಾರದ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಎಂದರು.
ಕೆಪಿಸಿಸಿ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾತನಾಡಿ, ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪಕ್ಷದ ವರಿಷ್ಠರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಗ್ಯಾರೆಂಟಿ ಯೋಜನೆಗಳ ಬಗ್ಗೆ ಘೋಷಣೆ ಮಾಡಿದ್ದರು. ಈಗಾಗಲೇ ನಾಲ್ಕು ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಇಂದು ನಾವು 2024ರ ಲೋಕಸಭೆ ಚುನಾವಣೆಗೆ ಹೊಸ ಕಾರ್ಯತಂತ್ರವನ್ನು ರೂಪಿಸಿದ್ದೇವೆ ಎಂದು ಹೇಳಿದರು.
ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಾತನಾಡಿ, ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಪಕ್ಷದ ಓರ್ವ ಹಿರಿಯ ನಾಯಕ ಹಾಗೂ ಒಬ್ಬ ಸಚಿವರಿಗೆ ಲೋಕಸಭೆ ಕ್ಷೇತ್ರದ ಹೊಣೆ ವಹಿಸಲಾಗುತ್ತದೆ. ಚುನಾವಣೆ ಮುಗಿಯುವವರಿಗೆ ಆರೇಳು ತಿಂಗಳ ಕಾಲ ಕ್ಷೇತ್ರದ ಸಂಪೂರ್ಣವನ್ನು ಹೊಣೆಯನ್ನು ಈ ನಾಯಕರಿಗೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.