ETV Bharat / state

ಬೊಮ್ಮಾಯಿ ಅವರೇ, ಆ 'ಲಂಚ'ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು: ಕಾಂಗ್ರೆಸ್ - ಕಾಂಗ್ರೆಸ್ ಪ್ರಶ್ನೆ

ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು. ಆ ಹಣ ಯಾರದ್ದು?, ಸರ್ಕಾರದ್ದೇ?, ಬಿಜೆಪಿ ಪಕ್ಷದ್ದೇ? ಮುಖ್ಯಮಂತ್ರಿಗಳದ್ದೇ?- ಕಾಂಗ್ರೆಸ್ ಪ್ರಶ್ನೆ

congress tweet against BJP Govt
ಸಾಂದರ್ಭಿಕ ಚಿತ್ರ
author img

By

Published : Oct 28, 2022, 6:34 PM IST

ಬೆಂಗಳೂರು: ಮಾಧ್ಯಮ ಪ್ರತಿನಿಧಿಗಳನ್ನು ಖರೀದಿಸುವ ವ್ಯವಹಾರಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಸೇ-ಸಿಎಂ ಎಂಬ ಟ್ಯಾಗ್ ಲೈನ್​​ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. 40 ಪರ್ಸೆಂಟ್​​ ಕಮಿಷನ್‌ನಲ್ಲಿ ನೀಡಿದ ಹಣವೇ?, ಶೇ.40 ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ?, ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವೇ?, ಬಸವರಾಜ ಬೊಮ್ಮಾಯಿ ಅವರೇ, ಆ 'ಲಂಚ'ದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಹೇಳಿದೆ.

  • ಸಿಎಂ ಕಚೇರಿ ನೀಡಿದ ₹2.5 ಲಕ್ಷ ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ.

    ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ದಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ.

    ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಸಿಎಂ ಉತ್ತರಿಸಬೇಕು.#SayCM

    — Karnataka Congress (@INCKarnataka) October 28, 2022 " class="align-text-top noRightClick twitterSection" data=" ">

ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು. ಆ ಹಣ ಯಾರದ್ದು?, ಸರ್ಕಾರದ್ದೇ?, ಬಿಜೆಪಿ ಪಕ್ಷದ್ದೇ? ಮುಖ್ಯಮಂತ್ರಿಗಳದ್ದೇ?, ಶೇ 40 ಕಮಿಷನ್ ಆ ಹಣದ ಮೂಲವೇ?, ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ?, ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ? ಎಂದಿದೆ.

ಸಿಎಂ ಕಚೇರಿ ನೀಡಿದ ₹2.5 ಲಕ್ಷ ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾ ಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದು ಬಂದಿದೆ. ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ಧಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಸಿಎಂ ಉತ್ತರಿಸಬೇಕು ಎಂದು ಕಾಂಗ್ರೆಸ್​ ಹೇಳಿದೆ.

ಇದನ್ನೂ ಓದಿ: 40% ಲಂಚ, ಮಂಚ ಬಿಜೆಪಿಗೆ ಸಿಕ್ಕಿರುವ ಮೂಲಭೂತ ಬಳುವಳಿ: ಡಿ ಕೆ ಶಿವಕುಮಾರ್ ವ್ಯಂಗ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.