ಬೆಂಗಳೂರು: ಅನೈತಿಕ ಮಾರ್ಗದಲ್ಲಿಯಾದರೂ ಬಿಜೆಪಿಗೆ ಅಧಿಕಾರದ ರುಚಿ ತೋರಿಸಿದ್ದು ಯಡಿಯೂರಪ್ಪ. ಆದರೆ ಅದೇ ಯಡಿಯೂರಪ್ಪಗೆ ಬಿಜೆಪಿ ಸಲ್ಲಿಸಿದ ಕೊಡುಗೆ ಜೈಲು, ಕಣ್ಣೀರು, ದ್ರೋಹ. ಒಬ್ಬ ಲಿಂಗಾಯತ ನಾಯಕನನ್ನು ಮುಗಿಸಲು ಮತ್ತೊಬ್ಬ ಲಿಂಗಾಯತ ನಾಯಕನನ್ನೇ ಮುಂದೆ ಬಿಡುವುದು ಸಂಘದ ಕುತ್ಸಿತ ಕಾರ್ಯತಂತ್ರ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಟೀಕಿಸಿದೆ.
ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಯಡಿಯೂರಪ್ಪ ನಡುವಿನ ಮುನಿಸು ವಿಚಾರವಾಗಿ ಯಡಿಯೂರಪ್ಪ ಮುಕ್ತ ಬಿಜೆಪಿ ಎಂದು ವ್ಯಂಗ್ಯವಾಡಿರುವ ಕಾಂಗ್ರೆಸ್, ಯಡಿಯೂರಪ್ಪ ಅವರನ್ನು ಮೂಲೆಗುಂಪು ಮಾಡುವ ಟಾಸ್ಕ್ ಅನ್ನು RSS ಬೊಮ್ಮಾಯಿ ಅವರ ಹೆಗಲಿಗೇರಿಸಿದೆ. ಕುರ್ಚಿ ಉಳಿಸಿಕೊಳ್ಳಲು ಬೊಮ್ಮಾಯಿ ಗುರುವಿಗೆ ತಿರುಮಂತ್ರ ಹಾಕುತ್ತಿದ್ದಾರೆ ಎಂದಿದೆ.
-
ಒಬ್ಬ ಲಿಂಗಾಯತ ನಾಯಕನನ್ನು ಮುಗಿಸಲು ಮತ್ತೊಬ್ಬ ಲಿಂಗಾಯತ ನಾಯಕನನ್ನೇ ಮುಂದೆ ಬಿಡುವುದು ಸಂಘದ ಕುತ್ಸಿತ ಕಾರ್ಯತಂತ್ರ.
— Karnataka Congress (@INCKarnataka) December 15, 2022 " class="align-text-top noRightClick twitterSection" data="
ಅದರಂತೆಯೇ @BSYBJP ಅವರನ್ನು ಮೂಲೆಗುಂಪು ಮಾಡುವ ಟಾಸ್ಕ್‌ನ್ನು RSS @BSBommai ಅವರ ಹೆಗಲಿಗೇರಿಸಿದೆ.
ಕುರ್ಚಿ ಉಳಿಸಿಕೊಳ್ಳಲು ಬೊಮ್ಮಾಯಿಯವರು ಗುರುವಿಗೇ ತಿರುಮಂತ್ರ ಹಾಕುತ್ತಿದ್ದಾರೆ.#BSYmuktaBJP
">ಒಬ್ಬ ಲಿಂಗಾಯತ ನಾಯಕನನ್ನು ಮುಗಿಸಲು ಮತ್ತೊಬ್ಬ ಲಿಂಗಾಯತ ನಾಯಕನನ್ನೇ ಮುಂದೆ ಬಿಡುವುದು ಸಂಘದ ಕುತ್ಸಿತ ಕಾರ್ಯತಂತ್ರ.
— Karnataka Congress (@INCKarnataka) December 15, 2022
ಅದರಂತೆಯೇ @BSYBJP ಅವರನ್ನು ಮೂಲೆಗುಂಪು ಮಾಡುವ ಟಾಸ್ಕ್‌ನ್ನು RSS @BSBommai ಅವರ ಹೆಗಲಿಗೇರಿಸಿದೆ.
ಕುರ್ಚಿ ಉಳಿಸಿಕೊಳ್ಳಲು ಬೊಮ್ಮಾಯಿಯವರು ಗುರುವಿಗೇ ತಿರುಮಂತ್ರ ಹಾಕುತ್ತಿದ್ದಾರೆ.#BSYmuktaBJPಒಬ್ಬ ಲಿಂಗಾಯತ ನಾಯಕನನ್ನು ಮುಗಿಸಲು ಮತ್ತೊಬ್ಬ ಲಿಂಗಾಯತ ನಾಯಕನನ್ನೇ ಮುಂದೆ ಬಿಡುವುದು ಸಂಘದ ಕುತ್ಸಿತ ಕಾರ್ಯತಂತ್ರ.
— Karnataka Congress (@INCKarnataka) December 15, 2022
ಅದರಂತೆಯೇ @BSYBJP ಅವರನ್ನು ಮೂಲೆಗುಂಪು ಮಾಡುವ ಟಾಸ್ಕ್‌ನ್ನು RSS @BSBommai ಅವರ ಹೆಗಲಿಗೇರಿಸಿದೆ.
ಕುರ್ಚಿ ಉಳಿಸಿಕೊಳ್ಳಲು ಬೊಮ್ಮಾಯಿಯವರು ಗುರುವಿಗೇ ತಿರುಮಂತ್ರ ಹಾಕುತ್ತಿದ್ದಾರೆ.#BSYmuktaBJP
ಯಡಿಯೂರಪ್ಪ ಕೃಪೆಯಿಂದ ಸಿಎಂ ಹುದ್ದೆಗೇರಿದ ಬೊಮ್ಮಾಯಿ ಅವರು ಈಗ ಗುರುವನ್ನೇ ಮೂಲೆಗೆ ತಳ್ಳಲು 'ಮೀರ್ ಸಾದಿಕ್' ಪಾತ್ರ ನಿರ್ವಹಿಸುತ್ತಿದ್ದಾರೆ. ಸಿಎಂ ಸ್ಥಾನ ಗಟ್ಟಿಯಾಗುವವರೆಗೆ ವಾರಕ್ಕೊಮ್ಮೆ ದವಳಗಿರಿಗೆ ಹೋಗಿಬರುತ್ತಿದ್ದವರು ಈಗ ಕೇಶವ ಕೃಪಾಗೆ ಹೋಗ್ತಿದಾರೆ. ಬಿ.ಎಲ್ ಸಂತೋಷ್ ಅವರ ಯಡಿಯೂರಪ್ಪ ಮುಕ್ತ ಅಭಿಯಾನಕ್ಕೆ ಬೊಮ್ಮಾಯಿಯವರೂ ಕೈಜೋಡಿಸಿದ್ದಾರೆ ಎಂದು ತಿಳಿಸಿದೆ.
ಅಡ್ವಾಣಿಯಂತಹ ನಾಯಕರನ್ನೇ ಮುಗಿಸಿದ ಬಿಜೆಪಿ ಬಿಎಸ್‌ವೈ ಅವರನ್ನು ಬಿಡುವುದೇ?. ಹತ್ತಿದ ಏಣಿಯನ್ನು ಒದೆಯುವುದು, ತಿಂದ ತಟ್ಟೆಗೆ ಮಣ್ಣು ಹಾಕುವುದು ಬಿಜೆಪಿಯ ಹುಟ್ಟುಗುಣ ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಹೇಳಿದೆ.
ಇದನ್ನೂ ಓದಿ: ಬಿಜೆಪಿ ರೌಡಿ ಮೋರ್ಚಾಗೆ ಕ್ರೈಂ ಸ್ಕೋರ್ ಮುಖ್ಯ ಅಲ್ಲವೇ?: ಕಾಂಗ್ರೆಸ್