ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಿರೋಧ ಪಕ್ಷ ಕಾಂಗ್ರೆಸ್ ಟ್ವಿಟರ್ನಲ್ಲಿ ತೀವ್ರ ವಾಗ್ದಾಳಿ ನಡೆಸಿದೆ.
ಬಿಜೆಪಿ ಸರ್ಕಾರದ ಆಡಳಿತ ವೈಖರಿ ಕುರಿತು ಟ್ವೀಟ್ ಮೂಲಕ ತನ್ನ ಬೇಸರ ವ್ಯಕ್ತಪಡಿಸಿರುವ ರಾಜ್ಯ ಕಾಂಗ್ರೆಸ್, 6 ತಿಂಗಳಿಂದ ಆಂತರಿಕ ಬೇಗುದಿಯಲ್ಲೇ ಬೇಯುತ್ತಿರುವ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ, ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆರಂಭಿಸುವುದು ಯಾವಾಗಾ? ಅಧಿಕಾರ ಉಳಿಸಿಕೊಳ್ಳಲು ಸ್ವಪಕ್ಷಿಯರು, ಅನರ್ಹರ ಸಂತೈಸುವಿಕೆ, ಹೈಕಮಾಂಡ್ ಒಲೈಕೆಯಲ್ಲೇ 6 ತಿಂಗಳು ಕಳೆದಿವೆ ಎಂದು ಲೇವಡಿ ಮಾಡಿದೆ.
ಆಪರೇಷನ್ ಕಮಲದಂತಹ ಅನೈತಿಕ ರಾಜಕಾರಣದಿಂದ ಅಧಿಕಾರಕ್ಕೆ ಬಂದವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಹೇಳುವ ಮೂಲಕ ತಮ್ಮ ಪಕ್ಷದ ಶಾಸಕರನ್ನು ಸೆಳೆದುಕೊಂಡು ಸರ್ಕಾರ ರಚಿಸಿರುವ ಬಿಜೆಪಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.