ETV Bharat / state

ಪ್ರಣಾಳಿಕೆಯಲ್ಲಿ ಘೋಷಿಸಿದ ಯೋಜನೆಗಳನ್ನು ಕಾಂಗ್ರೆಸ್​ ಜಾರಿಗೆ ತರಲಿದೆ : ಭೂಪೇಶ್ ಬಘೇಲ್ - ಪ್ರಣಾಳಿಕೆಯಲ್ಲಿ ಘೋಷಿಸಿದ ಯೋಜನೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಘೋಷಿಸಿರುವ ಎಲ್ಲಾ ಯೋಜನೆಗಳನ್ನು​ ಪಕ್ಷ ಜಾರಿ ಮಾಡಲಿದೆ. ಈ ಬಾರಿ ಕಾಂಗ್ರೆಸ್​ಅನ್ನು ಗೆಲ್ಲಿಸಿ ಎಂದು ಛತ್ತೀಸ್​ಗಢ ಮುಖ್ಯಮಂತ್ರಿ ಭೂಪೇಶ್​ ಬಘೇಲ್ ಹೇಳಿದ್ದಾರೆ.

ಛತ್ತೀಸ್​ಗಢ ಮುಖ್ಯಮಂತ್ರಿ ಭೂಪೇಶ್​ ಬಘೇಲ್
ಛತ್ತೀಸ್​ಗಢ ಮುಖ್ಯಮಂತ್ರಿ ಭೂಪೇಶ್​ ಬಘೇಲ್
author img

By

Published : May 7, 2023, 3:24 PM IST

ಛತ್ತೀಸ್​ಗಢ ಮುಖ್ಯಮಂತ್ರಿ ಭೂಪೇಶ್​ ಬಘೇಲ್

ಬೆಂಗಳೂರು : ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿದ ಯೋಜನೆಯನ್ನು ಜಾರಿಗೆ ತರುವ ಕಾರ್ಯವನ್ನು ಮಾಡುತ್ತದೆ ಎಂದು ಛತ್ತೀಸ್​ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ತಿಳಿಸಿದ್ದಾರೆ. ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿ, ಕರ್ನಾಟಕ ರಾಜ್ಯ ಚುನಾವಣೆ ಹೊಸ್ತಿಲಲ್ಲಿದ್ದು, ಪಕ್ಷದ ಎಲ್ಲಾ ನಾಯಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪ್ರಚಾರದಲ್ಲಿ ನಿರತರಾಗಿದ್ದಾರೆ. ಕಾಂಗ್ರೆಸ್ ಪಕ್ಷ ಈ ಬಾರಿ ತನ್ನ ಪ್ರಣಾಳಿಕೆಯಲ್ಲಿ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಹಾಗೂ ಉಚಿತ ಪಯಣ ಯೋಜನೆ ಘೋಷಣೆ ಮಾಡಿದ್ದು, ಕಾಂಗ್ರೆಸ್ ಸರ್ಕಾರ ಈ ಯೋಜನೆಗಳನ್ನು ಜಾರಿ ಮಾಡಿಯೇ ಮಾಡಲಿದೆ. ಇದೇ ಕಾರಣಕ್ಕೆ ಜನ ಕಾಂಗ್ರೆಸ್ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದರು.

ಛತ್ತೀಸ್​ಗಢದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆ ಸಮಯದಲ್ಲಿ ನೀಡಿದ್ದ ಭರವಸೆಯನ್ನು ಅಧಿಕಾರಕ್ಕೆ ಬಂದ ನಂತರ ಜಾರಿ ಮಾಡಿದೆ. ರೈತರ ಸಾಲಮನ್ನಾ ಸೇರಿದಂತೆ ಅನೇಕ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಜಾರಿ ಮಾಡಿದ್ದೇವೆ. ಕರ್ನಾಟಕದಲ್ಲಿ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ತಿಂಗಳು 200 ಯೂನಿಟ್ ಉಚಿತ ನೀಡಲಾಗುವುದು. ಈ ಯೋಜನೆಗಳನ್ನು ಬೇರೆ ರಾಜ್ಯಗಳಲ್ಲಿ ಜಾರಿ ಮಾಡಲಾಗಿದ್ದು, ಈಗ ಇಲ್ಲಿಯೂ ಘೋಷಣೆ ಮಾಡಿದ್ದೇವೆ ಎಂದು ಹೇಳಿದರು.

ಬಡ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ: ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆಯೊಡತಿಗೆ ಪ್ರತಿ ತಿಂಗಳು 2 ಸಾವಿರ ಪ್ರೋತ್ಸಾಹ ಧನ ನೀಡಲಾಗುವುದು. ಅನ್ನಭಾಗ್ಯ ಯೋಜನೆ ಮೂಲಕ ಬಡ ಕುಟುಂಬದ ಪ್ರತಿ ಸದಸ್ಯರಿಗೆ ಪ್ರತಿ ತಿಂಗಳು 10 ಕೆ.ಜಿ ಅಕ್ಕಿ ಉಚಿತವಾಗಿ ನೀಡಲಾಗುವುದು. ಛತ್ತೀಸ್​ಗಢದಲ್ಲೂ ಇದೇ ರೀತಿಯ ಯೋಜನೆ ಜಾರಿ ಮಾಡಿದ್ದೇವೆ. ನಮ್ಮಲ್ಲಿ ಪ್ರತಿ ಕುಟುಂಬಕ್ಕೆ ಆಧಾರದ ಮೇಲೆ ನೀಡಿದ್ದು, ಇಲ್ಲಿ ಪ್ರತಿವ್ಯಕ್ತಿ ಆಧಾರದ ಮೇಲೆ ನೀಡಲಾಗುತ್ತಿದೆ. ಇನ್ನು ಯುವನಿಧಿ ಕಾರ್ಯಕ್ರಮದ ಮೂಲಕ ನಿರುದ್ಯೋಗ ಪದವೀಧರರಿಗೆ ಪ್ರತಿ ತಿಂಗಳು 2 ವರ್ಷದವರೆಗೆ 3 ಸಾವಿರ, ಡಿಪ್ಲೋಮಾ ಪದವೀಧರರಿಗೆ 1500 ರೂ ನಿರುದ್ಯೋಗ ಭತ್ಯೆ ನೀಡಲಾಗುವುದು. ನಮ್ಮ ರಾಜ್ಯದಲ್ಲಿ 12ನೇ ತರಗತಿ ಉತ್ತೀರ್ಣರಾದವರಿಗೆ ಪ್ರತಿ ತಿಂಗಳು 1500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ಇನ್ನು ರಾಜ್ಯದ ಮಹಿಳೆಯರಿಗೆ ಸಾರ್ವಜನಿಕ ಬಸ್​ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಲಾಗುವುದು ಎಂದರು.

ಕಾಂಗ್ರೆಸ್ ಪಕ್ಷ ಜಾರಿ ಮಾಡುವ ಯೋಜನೆಗಳನ್ನು ಮಾತ್ರ ಘೋಷಣೆ ಮಾಡಲಿದೆ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ. ಆದರೆ ಬಿಜೆಪಿ ಸರ್ಕಾರ ಹೇಳಿದ ಯಾವುದೇ ಭರವಸೆ ಈಡೇರಿಸುವುದಿಲ್ಲ. ಅವರು ವಿದೇಶದಿಂದ ಕಪ್ಪುಹಣ ತಂದು ಎಲ್ಲರ ಖಾತೆಗೆ 15 ಲಕ್ಷ ಹಾಕುವುದಾಗಿ ಹೇಳಿದ್ದರು. 2 ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದಿದ್ದರು. ಇವೆಲ್ಲವೂ ಕೇವಲ ಭರವಸೆಯಾಗಿ ಉಳಿದಿದೆ ಎಂದು ಹೇಳಿದರು.

ಯಾವುದೇ ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿಲ್ಲ: ಭ್ರಷ್ಟಾಚಾರದ ವಿಚಾರವಾಗಿ ಮಾತನಾಡುವುದಾದರೆ, ಬಿಜೆಪಿ ಸರ್ಕಾರ 40% ಕಮಿಷನ್ ಸರ್ಕಾರವಾಗಿದೆ. ಬಿಜೆಪಿಯ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಬಿಜೆಪಿಯಲ್ಲಿ ಭ್ರಷ್ಟಾಚಾರ ನಡೆದರೂ ಯಾವುದೇ ವ್ಯತ್ಯಾಸವಾಗಿಲ್ಲದಂತೆ ಇರುತ್ತಾರೆ. ಅದಾನಿ ಅವರ ಬೇನಾಮಿ ಕಂಪನಿಗಳ ಖಾತೆಗೆ 20 ಸಾವಿರ ಕೋಟಿ ಹೇಗೆ ತಲುಪಿತು ಎಂದು ಯಾವುದೇ ತನಿಖಾ ಸಂಸ್ಥೆಗಳು ವಿಚಾರಣೆ ಮಾಡುತ್ತಿಲ್ಲ. ರಾಜ್ಯದಲ್ಲಿ ಬಿಜೆಪಿ ಶಾಸಕರು 8 ಕೋಟಿ ಅಕ್ರಮ ಹಣದ ಜತೆ ಸಿಕ್ಕಿ ಬಿದ್ದರೂ ಯಾವುದೇ ಐಟಿ, ಇಡಿ ಸಂಸ್ಥೆಗಳು ತನಿಖೆ ಮಾಡುವುದಿಲ್ಲ. ಕಾರಣ ಇಲ್ಲಿ ಡಬಲ್ ಇಂಜಿನ್ ಸರ್ಕಾರವಿದೆ. ಭ್ರಷ್ಟಾಚಾರದ ವಿಚಾರದ ಮೇಲೆ ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷ ಈಗ ತಾನೇ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇಂತಹ ಪರಿಸ್ಥಿತಿಗಳಲ್ಲಿ ಪ್ರಧಾನಮಂತ್ರಿಗಳ ನಾ ಕಾವೂಂಗಾ, ನಾ ಖಾನೇದೂಂಗಾ, ದೇಶವನ್ನು ಮಾರಲು ಬಿಡುವುದಿಲ್ಲ ಎಂಬೆಲ್ಲಾ ಘೋಷವಾಕ್ಯಗಳು ಅರ್ಥಹೀನವಾಗಿವೆ ಎಂದು ವಿವರಿಸಿದರು.

ಮೋದಿ ಸರ್ಕಾರ ಭಾರತದ ನವರತ್ನಗಳು ಎಂದೇ ಪರಿಗಣಿತವಾಗಿರುವ ಸಾರ್ವಜನಿಕ ಉದ್ದಿಮೆಗಳಲ್ಲಿ ಕೆಲವನ್ನು ಮಾರಿದೆ. ಉಳಿದಿರುವುದನ್ನು ಮಾರಲು ತಯಾರಿ ಮಾಡಿಕೊಂಡಿದೆ. ಇಡೀ ದೇಶದಲ್ಲಿ ಇಂತಹ ದಯನೀಯ ಸ್ಥಿತಿ ಇದೆ. ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ನಡ್ಡಾ ಅವರು ರಾಜ್ಯದ ಜನರನ್ನು ಬೆದರಿಸುತ್ತಿದ್ದಾರೆ. ನಮ್ಮ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧಮಕಿ ಹಾಕುತ್ತಿದ್ದಾರೆ. ಇದೆಲ್ಲವನ್ನು ರಾಜ್ಯದ ಜನ ನೋಡುತ್ತಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ : 'ಯಾರು ಹೊಣೆ ಮೋದಿಯವರೇ?': ಪ್ರಧಾನಿಗೆ ಕೆಲವು ಪ್ರಶ್ನೆ ಕೇಳಿದ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.