ETV Bharat / state

ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾದ ಕಾಂಗ್ರೆಸ್ - ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ

ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷ ಕಾಂಗ್ರೆಸ್ ತೀರ್ಮಾನಿಸಿದೆ.

ಅವಿಶ್ವಾಸ ನಿರ್ಣಯ ಮಂಡನೆ ಮಾಡಲು ಮುಂದಾದ ಕಾಂಗ್ರೆಸ್

author img

By

Published : Sep 24, 2020, 1:41 PM IST

ಬೆಂಗಳೂರು: ಸರ್ಕಾರದ ವಿರುದ್ಧ ಪ್ರತಿಪಕ್ಷ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾಗಿದೆ. ಎಪಿಎಂಸಿ ಮತ್ತು ಭೂಸುಧಾರಣೆ ಕಾಯ್ದೆ ವಿಚಾರ ಪ್ರಸ್ತಾಪಿಸಿ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ತೆರಳಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಸಲ್ಲಿಸಲಿದೆ.

ಇಂದು ವಿಧಾನಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸರ್ವಾನುಮತದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ. ಸರ್ಕಾರದ ಕಾರ್ಯವೈಫಲ್ಯಗಳು ಜನರಿಗೆ ಬೇಸರ ಮೂಡಿಸಿವೆ. ಸ್ವತಃ ಬಿಜೆಪಿ ಶಾಸಕರಿಗೆ ಈ ಸರ್ಕಾರದ ಮೇಲೆ ನಂಬಿಕೆ ಇಲ್ಲ ಅಂತ ಅವಿಶ್ವಾಸ ನಿರ್ಣಯ ಮಂಡನೆ ಮಾಡಲು ಸಿಎಲ್​ಪಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ

ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆ ಬಳಿಕ ಸಿದ್ದರಾಮಯ್ಯ ಮಾತನಾಡಿ, "ನಾವು ಅವಿಶ್ವಾಸ ಮಂಡಿಸಲು ತೀರ್ಮಾನಿಸಿದ್ದೇವೆ. ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಜನರ ವಿಶ್ವಾಸ ಕಳೆದುಕೊಂಡಿದೆ. ಯಡಿಯೂರಪ್ಪ ಅವರ ಪುತ್ರ, ಮೊಮ್ಮಗ, ಅಳಿಯ ಎಲ್ಲರೂ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಮೆಡಿಕಲ್, ಲ್ಯಾಪ್‌ಟಾಪ್ ಖರೀದಿಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಅಭಿವೃದ್ಧಿ ಕುಂಠಿತ, ಆರ್ಥಿಕ ಅಧೋಗತಿಗೆ ಹೋಗುತ್ತಿದೆ. ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ, ಕಾರ್ಮಿಕ ವಿರೋಧಿ ಕಾನೂನನ್ನು ಜಾರಿಗೆ ತಂದಿದ್ದಾರೆ. ಒಂದು ವರ್ಷ ನಾಲ್ಕು ತಿಂಗಳಲ್ಲಿ ರಾಜ್ಯ ಅಧೋಗತಿಗೆ ಹೋಗಿದೆ" ಎಂದಿದ್ದಾರೆ.

ಯಡಿಯೂರಪ್ಪ ಸರ್ಕಾರ ಸಾವಿರಾರು ಕೋಟಿ ರೂ. ಸಾಲ ಮಾಡಿದೆ. ಅವರ ಸಚಿವ ಸಂಪುಟ ವಿಶ್ವಾಸ ಕಳೆದುಕೊಂಡಿದೆ. ಈಗಾಗಲೇ ನೋಟಿಸ್ ಕೊಟ್ಟಿದ್ದೆ. ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಾಡುತ್ತೇವೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.