ETV Bharat / state

ಬೆಂಗಳೂರಿನಲ್ಲಿ ಕಾಂಗ್ರೆಸ್​ ಕಾರ್ಯಕರ್ತನ ಬರ್ಬರ ಹತ್ಯೆ - murder in bangalore

ಬೆಂಗಳೂರಿನಲ್ಲಿ ಕಾಂಗ್ರೆಸ್​ ಕಾರ್ಯಕರ್ತನ ಕೊಲೆಯಾಗಿದೆ. ಐದು ಜನರು ರವಿ ಎಂಬಾತನನ್ನು ಅಟ್ಟಾಡಿಸಿ ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ಕಾಂಗ್ರೆಸ್​ ಕಾರ್ಯಕರ್ತನ ಹತ್ಯೆ

author img

By

Published : May 25, 2023, 11:02 AM IST

Updated : May 25, 2023, 12:10 PM IST

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆಯಾಗಿದೆ. ರವಿ ಅಲಿಯಾಸ್ ಮತ್ತಿರವಿ (42) ಕೊಲೆಯಾದವರು. ಲಗ್ಗೆರೆ ಬಳಿಯ ಚೌಡೇಶ್ವರಿ ನಗರದಲ್ಲಿ ಬುಧವಾರ ರಾತ್ರಿ 11 ಗಂಟೆಗೆ ಘಟನೆ ನಡೆದಿದೆ. ಬೈಕ್​ಗಳಲ್ಲಿ ಬಂದ ಐವರು ರವಿಯನ್ನು ಕೊಂದಿದ್ದಾರೆ ಎಂದು ತಿಳಿದು ಬಂದಿದೆ.

ವೃತ್ತಿಯಲ್ಲಿ ಟೆಂಪೋ ಟ್ರಾವೆಲ್ಲರ್ ಚಾಲಕ ಹಾಗೂ ಮೇಕೆ ಸಾಕಾಣಿಕೆ ಮಾಡುತ್ತಿದ್ದ ರವಿ, ಕಾಂಗ್ರೆಸ್​ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ಬಂದಿದ್ದರು. ಆ ಬಳಿಕ ಸಿಎಂಎಚ್ ಬಾರ್​ಗೆ ಬಂದು ಮದ್ಯ ಸೇವನೆ ಮಾಡಿ, ಅಲ್ಲಿಂದ ತಾವು ವಾಸವಾಗಿದ್ದ ಏರಿಯಾದ ಕೃಷ್ಣಮೂರ್ತಿ ಎಂಬ ಮತ್ತೋರ್ವ ಕಾಂಗ್ರೆಸ್ ಮುಖಂಡನ ಜನ್ಮದಿನದ ಪಾರ್ಟಿಯಲ್ಲಿ ಭಾಗಿಯಾಗಿದ್ದ.

ಪಾರ್ಟಿ ಮುಗಿಸಿದ ಬಳಿಕ ರವಿ ಮನೆಗೆ ತೆರಳುತ್ತಿದ್ದಾಗ ಕಾದು ಕುಳಿತಿದ್ದ ಹಂತಕರು ಬೈಕ್​ಗಳಲ್ಲಿ ಆತನನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ರಸ್ತೆ ಮಧ್ಯೆಯೆ ಜಗಳ ತೆಗೆದು ಕಾದಾಟಕ್ಕಿಳಿದಿದ್ದಾರೆ. ಓಡಲು ಮುಂದಾದ ರವಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ಮಾಡಿದ್ದಾರೆ. ಕೊನೆಗೆ ಹಳ್ಳಿರುಚಿ ಹೋಟೆಲ್​ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆಗೆ ಹೊಡೆದು ಹತ್ಯೆಗೈದಿದ್ದಾರೆ.

ಹತ್ಯೆಗೂ ಮುನ್ನ ಏರಿಯಾದಲ್ಲಿ ಹಾಕಿದ್ದ ಪ್ಲೆಕ್ಸ್​ಗಳಲ್ಲಿ ರವಿಕುಮಾರ್ ಫೋಟೋವನ್ನು ದುಷ್ಕರ್ಮಿಗಳು ಹರಿದು ಹಾಕಿದ್ದರು ಎಂದು ತಿಳಿದು ಬಂದಿದೆ.
ನಂದಿನಿ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ‌. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹಂತಕರ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಜಾತ್ರೆಯಲ್ಲಿ ಏರ್​ ಬಲೂನ್​ ಜಂಪಿಂಗ್​ ಆಡುತ್ತಿದ್ದ ಬಾಲಕ ಹೃದಯಾಘಾತದಿಂದ ಸಾವು!

Last Updated : May 25, 2023, 12:10 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.