ಬೆಂಗಳೂರು: ಕೋವಿಡ್ ಕಾರಣ ವಿಧಿಸಿದ ಲಾಕ್‌ಡೌನ್ ಹಿನ್ನೆಲೆ ಪರೀಕ್ಷಾ ಫಲಿತಾಂಶ ವಿಳಂಬವಾದ ಪ್ರಕರಣಗಳಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿದಾರರ ವಿದ್ಯಾರ್ಹತೆ ಪರಿಗಣಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ.
ನೇಮಕಾತಿ ನಿಯಮಗಳ ಪ್ರಕಾರ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿದ್ದಲ್ಲಿ ಅಥವಾ ಹೊಂದದೇ ಇದ್ದಲ್ಲಿಯೂ ಸಹ ಗ್ರೂಪ್ 'ಡಿ' ಹುದ್ದೆಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಪದವಿಪೂರ್ವ ಅಥವಾ ಸಾಮಾನ ವಿದ್ಯಾರ್ಹತೆ ಹೊಂದಿದ್ದಲ್ಲಿ ಗ್ರೂಪ್ 'ಸಿ' ವೃಂದದ ದ್ವಿತೀಯ ದರ್ಜೆಯ/ಕಿರಿಯ ಸಹಾಯಕ ಹುದ್ದಗೆ ನೇಮಕ ಮಾಡಬಹುದಾಗಿದೆ.
ಕೋವಿಡ್-19 ಹಿನ್ನೆಲೆ ಲಾಕ್‌ಡೌನ್ ಮಾಡಿದ ಕಾರಣ 2019-2020ನೇ ಸಾಲಿನಲ್ಲಿ ಪದವಿಪೂರ್ವ (ಪಿಯುಸಿ) ಪರೀಕ್ಷಾ ಫಲಿತಾಂಶ ಪ್ರಕಟಣೆಯಲ್ಲಿ ವಿಳಂಬವಾಗಿದೆ. ಸರ್ಕಾರಿ ನೌಕರರು ಸೇವೆಯಲ್ಲಿರುವಾಗಲೇ ಮೃತಪಟ್ಟಿದ್ದು, ನಿಯಮದನ್ವಯ ಆತನ ಅವಲಂಬಿತರಲ್ಲಿ ಒಬ್ಬರು ನಿಗದಿತ ಕಾಲಾವಧಿಯಲ್ಲಿ ಅರ್ಜಿ ಸಲ್ಲಿಸಿದ್ದರೆ ಹಾಗೂ ಅಂತಹ ಅವಲಂಬಿತ ವ್ಯಕ್ತಿಯ 2019-20ನೇ ಸಾಲಿನ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಣೆ ವಿಳಂಬವಾಗಿದ್ದಲ್ಲಿ ಅಂತಹ ಪ್ರಕರಣಗಳನ್ನು ವಿಶೇಷ ಪ್ರಕರಣಗಳೆಂದು ಪರಿಗಣಿಸಲು ಸೂಚಿಸಲಾಗಿದೆ.
2019-20ನೇ ಸಾಲಿನಲ್ಲಿ ವಿಳಂಬವಾಗಿ ಪ್ರಕಟಗೊಂಡ, ಪಿ.ಯು.ಸಿ ಪರೀಕ್ಷಾ ಫಲಿತಾಂಶವನ್ನು ಗಣನೆಗೆ ತೆಗೆದುಕೊಂಡು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡುವಂತೆ ಎಲ್ಲಾ ಪ್ರಾಧಿಕಾರ/ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ.
ಇದನ್ನು ಓದಿ:ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರ ಆತ್ಮಹತ್ಯೆ: 5 ದಿನದಿಂದ ಶವಗಳ ಮಧ್ಯೆಯೇ ಅನ್ನ-ನೀರಿಲ್ಲದೆ ಬದುಕಿದ ಕಂದಮ್ಮ