ETV Bharat / state

ಕೈಗಾರಿಕಾ ಪ್ರದೇಶ ಮೂಲಸೌಕರ್ಯ ಅಭಿವೃದ್ಧಿಗೆ ಚಿಂತನೆ.. ರಾಯಚೂರಲ್ಲಿ ಟೆಕ್ಸ್‌ಟೈಲ್‌ ಪಾರ್ಕ್‌ ಸ್ಥಾಪಿಸುವಂತೆ ಕೇಂದ್ರಕ್ಕೆ ಮನವಿ : ಎಂ ಬಿ ಪಾಟೀಲ್

ಕೈಗಾರಿಕೆ ಪ್ರದೇಶದ ಮೂಲ ಸೌಕರ್ಯ ಒಂದು ಬಾರಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಮೂಲಸೌಕರ್ಯ ಅಭಿವೃದ್ಧಿ, ವಿವಿಧ ಸಮಸ್ಯೆ ನಿವಾರಣೆ ನಂತರ ಕೈಗಾರಿಕಾ ಪ್ರದೇಶಗಳನ್ನು ಕೈಗಾರಿಕೆ ಸಂಘಗಳಿಗೆ ವಹಿಸಲಾಗುವುದು. ರಾಯಚೂರಿನಲ್ಲಿ ಇನ್ನೊಂದು ಟೆಕ್ಸ್‌ಟೈಲ್‌ ಪಾರ್ಕ್‌ ನಿರ್ಮಾಣಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.

Industry and Infrastructure Development Minister MB Patil spoke.
ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್ ಮಾತನಾಡಿದರು.
author img

By

Published : Aug 8, 2023, 8:00 PM IST

ಬೆಂಗಳೂರು: ರಾಜ್ಯದ ಎಲ್ಲಾ ಹಳೆ ಕೈಗಾರಿಕಾ ಪ್ರದೇಶಗಳಲ್ಲಿ ಒಂದು ಬಾರಿ ಪೂರ್ಣ ಪ್ರಮಾಣದಲ್ಲಿ ಮೂಲ ಸೌಕರ್ಯ ಅಭಿವೃದ್ಧಿಪಡಿಸಿದ ನಂತರ ಆಯಾ ಕೈಗಾರಿಕಾ ಸಂಘಗಳ ಸುಪರ್ದಿಗೆ ಅವುಗಳ‌ ನಿರ್ವಹಣೆಯನ್ನು ಒಪ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಮಾಹಿತಿ ನೀಡಿದ್ದಾರೆ.

ನಗರದ ಉದ್ಯೋಗ ಮಿತ್ರ ಸಭಾಂಗಣದಲ್ಲಿ ರಾಯಚೂರು ಜಿಲ್ಲೆಯ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಆಯೋಜಿಸಿದ್ದ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದ ಕೈಗಾರಿಕೆ ಪ್ರದೇಶಗಳಲ್ಲಿ ಮೂಲ ಸೌಕರ್ಯಗಳ ಕೊರತೆಯಿರುವುದು ನಮ್ಮ ಗಮನಕ್ಕೆ ಬಂದಿದೆ. ಇದನ್ನು ಸರಿಪಡಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕೈಗಾರಿಕೆ ಪ್ರದೇಶದ ಸಮಸ್ಯೆಗಳನ್ನು ಒಂದು ಬಾರಿ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಮೂಲ ಸೌಕರ್ಯಗಳ ಅಭಿವೃದ್ಧಿ ಮತ್ತು ಸಮಸ್ಯೆಗಳ ನಿವಾರಣೆ ನಂತರ ಕೈಗಾರಿಕಾ ಪ್ರದೇಶಗಳನ್ನು ಕೈಗಾರಿಕಾ ಸಂಘಗಳಿಗೆ ವಹಿಸಿಕೊಡಲಾಗುವುದು. ಕೈಗಾರಿಕೆ ಪ್ರದೇಶದಿಂದ ಸಂಗ್ರಹವಾಗುವ ಕರದಲ್ಲಿ ಶೇಕಡಾ 70 ರಷ್ಟು ಕೈಗಾರಿಕಾ ಸಂಘಕ್ಕೆ ಮತ್ತು ಶೇಕಡಾ 30 ರಷ್ಟು ಆಯಾ ನಗರಸಭೆಗಳಿಗೆ ನೀಡಲಾಗುವುದು. ಇದರಿಂದ ಬಹಳಷ್ಟು ಸಮಸ್ಯೆಗಳು ನಿವಾರಣೆಯಾಗಲಿವೆ ಎಂದು ಹೇಳಿದರು.

ರೈಸ್‌ ಮಿಲ್‌ಗಳಿಗೆ ನೀರಿನ ಪೈಪ್‌ಲೈನ್‌: ರಾಯಚೂರು ನಗರದಲ್ಲಿ 90 ಕ್ಕೂ ಹೆಚ್ಚು ರೈಸ್‌ಮಿಲ್​​ಗಳಿವೆ. ಈ ರೈಸ್‌ಮಿಲ್‌ಗಳ ನಿರ್ವಹಣೆಗಾಗಿ ನೀರಿನ ಅಗತ್ಯವಿದೆ. ಕೈಗಾರಿಕಾ ಪ್ರದೇಶಗಳಿಗೆ ಮೀಸಲಾದ ನೀರಿನ ಸಂಪರ್ಕ ಇಲ್ಲದಿರುವ ಕಾರಣ ರೈಸ್‌ ಮಿಲ್‌ಗಳು ತುಂಬ ಸಮಸ್ಯೆಗೆ ಸಿಲುಕಿವೆ. ಅಲ್ಲದೇ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರೈಸ್ ಮಿಲ್‌ಗಳನ್ನು ಸ್ಥಾಪಿಸಲು ನೀರಿನ ಅಗತ್ಯತೆ ಹೆಚ್ಚಾಗಿದೆ. ಈ ಸಮಸ್ಯೆಗೆ ಪರಿಹಾರ ಕಂಡು ಹಿಡಿಯುವ ನಿಟ್ಟಿನಲ್ಲಿ ರೈಸ್‌ ಮಿಲ್ ಗಳಿಗೆ ಮೀಸಲಾದ ಪೈಪ್​ಲೈನ್‌ ನಿರ್ಮಾಣದ ವರದಿಯನ್ನು ಸಲ್ಲಿಸುವಂತೆ ಸಚಿವ ಎಂ ಬಿ ಪಾಟೀಲ ಕೆಐಡಿಬಿ ಅಧಿಕಾರಿಗಳಿಗೆ ಸೂಚಿಸಿದರು.

ತ್ಯಾಜ್ಯ ವಿಲೇವಾರಿ ಸೌಲಭ್ಯ ನಿರ್ಮಾಣಕ್ಕೆ ಆದ್ಯತೆ: ಔಷಧ ಕಂಪನಿಗಳ ಹಬ್‌ ಆಗಿ ಹೊರಹೊಮ್ಮಿರುವ ರಾಯಚೂರು ಕೈಗಾರಿಕಾ ಪ್ರದೇಶದಲ್ಲಿ ಸಿಇಟಿಪಿಯ ಕೊರತೆಯಿದೆ. ಇದರಿಂದಾಗಿ ತ್ಯಾಜ್ಯವು ಅಂತರ್ಜಲ ಸೇರ್ಪಡೆಯಾಗುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ತ್ಯಾಜ್ಯ ವಿಲೇವಾರಿ ಸೌಲಭ್ಯವನ್ನು ಅಳವಡಿಸುವ ಕಾರ್ಯ ವಿಳಂಬವಾಗಿರುವುದನ್ನು ಕೈಗಾರಿಕೋದ್ಯಮಿಗಳು ಸಭೆಯ ಗಮನಕ್ಕೆ ತಂದರು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಸಚಿವರು, ಕೂಡಲೇ ತ್ಯಾಜ್ಯ ವಿಲೇವಾರಿ ಕೇಂದ್ರವನ್ನು ನಿರ್ಮಿಸಬೇಕು. ಇದಕ್ಕೆ ಈಗಾಗಲೇ ಅನುಮತಿ ನೀಡಿರುವ ಮದರ್‌ ಅರ್ಥ್‌ ಕಂಪನಿಯ ಜೊತೆಯಲ್ಲಿ ಚರ್ಚಿಸಿ ಕೈಗಾರಿಕೋದ್ಯಮಿಗಳೀಗೆ ಅನುಕೂಲ ಮಾಡಿಕೊಡಬೇಕು ಎಂದು ಸೂಚಿಸಿದರು.

ರಾಯಚೂರಲ್ಲಿ ಟೆಕ್ಸ್‌ಟೈಲ್‌ ಪಾರ್ಕ್‌ ನಿರ್ಮಾಣ ಕೇಂದ್ರಕ್ಕೆ ಪ್ರಸ್ತಾವನೆ: ರಾಯಚೂರು ಜಿಲ್ಲೆಯಲ್ಲಿ 120ಕ್ಕೂ ಹೆಚ್ಚು ಜಿನ್ನಿಂಗ್‌ ಘಟಕಗಳಿವೆ. ಏಷಿಯಾದ 2 ನೇ ಅತಿದೊಡ್ಡ ಕಾಟನ್‌ ಮಾರ್ಕೆಟ್‌ ಆಗಿರುವ ಈ ಜಿಲ್ಲೆಯಲ್ಲಿ ಟೆಕ್ಸ್‌ಟೈಲ್‌ ಪಾರ್ಕ್‌ ನಿರ್ಮಾಣದ ಅವಶ್ಯಕತೆಯಿದೆ. ಈಗಾಗಲೇ ಕೇಂದ್ರ ಸರಕಾರ ಯಾದಗಿರಿ ಜಿಲ್ಲೆಯಲ್ಲಿ ಟೆಕ್ಸ್‌ಟೈಲ್‌ ಪಾರ್ಕ್​ ನೀಡಲು ಅನುಮತಿ ನೀಡಿದೆ. ಈ ಹಿನ್ನೆಲೆ ರಾಯಚೂರಿನಲ್ಲೂ ಇನ್ನೊಂದು ಟೆಕ್ಸ್‌ಟೈಲ್‌ ಪಾರ್ಕ್‌ ನಿರ್ಮಾಣಕ್ಕೆ ಅನುಮತಿ ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಈ ನಿಟ್ಟಿನಲ್ಲಿ ಅಗತ್ಯ ಮಾಹಿತಿ ಸಂಗ್ರಹಿಸಿ ವರದಿ ತಯಾರಿಸುವಂತೆ ಕೈಗಾರಿಕಾ ಆಯುಕ್ತರಿಗೆ ಸಚಿವರು ಸೂಚಿಸಿದರು.

ವಂದೇ ಭಾರತ್‌ ರೈಲು ನಿಲುಗಡೆಗೆ ಮನವಿ: ಬೆಂಗಳೂರು- ಹೈದರಾಬಾದ್‌ ನಡುವೆ ಸಂಚರಿಸಲಿರುವ ವಂದೇ ಭಾರತ್‌ ರೈಲು ರಾಯಚೂರು ಮೂಲಕ ಸಂಚರಿಸುವ ಹಾಗೆ ಮಾಡಬೇಕು. ಹಾಗೆಯೇ ಅಲ್ಲಿ ನಿಲುಗಡೆಗೆ ಅವಕಾಶ ನೀಡುವಂತೆ ಕೇಂದ್ರ ರೈಲ್ವೆ ಇಲಾಖೆಗೆ ಪತ್ರ ಬರೆಯುವಂತೆ ಕೈಗಾರಿಕೋದ್ಯಮಿಗಳು ಸಚಿವರಿಗೆ ಮನವಿ ಮಾಡಿದರು. ಈ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಕೈಗಾರಿಕಾ ಸಂಘಗಳ ಮನವಿಯ ಆಧಾರದ ಮೇಲೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಭರವಸೆ ನೀಡಿದರು.

ಲಾಜಿಸ್ಟಿಕ್‌ ಪಾರ್ಕ್‌ ನಿರ್ಮಾಣ: ರಾಯಚೂರು ನಗರ ಲಾಜಿಸ್ಟಿಕ್‌ ಹಬ್‌ ಆಗುವ ಎಲ್ಲ ರೀತಿಯ ಸೌಲಭ್ಯಗಳನ್ನ ಹೊಂದಿದೆ. ಹತ್ತಿರದಲ್ಲೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ರೈಲು ಮತ್ತು ರಾಷ್ಟ್ರೀಯ ಹೆದ್ದಾರಿಗಳ ನೆಟ್​ವರ್ಕ್‌ ಇದ್ದು, ಈ ಬಗ್ಗೆಯೂ ಹೆಚ್ಚಿನ ಆಸಕ್ತಿ ವಹಿಸುವಂತೆ ಕೋರಿದ ಕೈಗಾರಿಕೋದ್ಯಮಿಗಳ ಮನವಿಗೆ ಸ್ಪಂದಿಸಿದ ಸಚಿವರು ಅಗತ್ಯ ಕ್ರಮದ ಭರವಸೆ ನೀಡಿದರು.

ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌ ಎಸ್‌ ಬೋಸರಾಜು ಮಾತನಾಡಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಲವಾರು ಅವಕಾಶಗಳಿವೆ. ಹಿಂದುಳಿದ ಪ್ರದೇಶವಾಗಿರುವ ಕಲ್ಯಾಣ ಕರ್ನಾಟಕದ ಪ್ರಮುಖ ವಾಣಿಜ್ಯ ಕೇಂದ್ರವಾಗಿ ರಾಯಚೂರು ಹೊರಹೊಮ್ಮುತ್ತಿದೆ. ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿತವಾಗುವಂತೆ ಮಾಡುವ ನಿಟ್ಟಿನಲ್ಲಿ ನಾವು ಅಗತ್ಯ ಮೂಲಭೂತ ಸೌಕರ್ಯ ಹೆಚ್ಚಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶರಣ ಪ್ರಕಾಶ್‌ ಪಾಟೀಲ್‌ ಸೇರಿದಂತೆ ಜಿಲ್ಲೆಯ ಶಾಸಕರು, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಕೈಗಾರಿಕಾ ಅಭಿವೃದ್ಧಿ ಆಯುಕ್ತ ಗುಂಜನ್‌ ಕೃಷ್ಣ, ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂಓದಿ:₹250 ಕೋಟಿ ವೆಚ್ಚದ ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಸತೀಶ ಜಾರಕಿಹೊಳಿ ಭೂಮಿಪೂಜೆ: ವೇದಿಕೆಯಲ್ಲೇ ಬಿಜೆಪಿ‌ ಶಾಸಕರ ಅಸಮಾಧಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.