ETV Bharat / state

ಬಿಜೆಪಿಯೊಳಗೆ ಲಿಂಗಾಯತ ನಾಯಕರನ್ನು ಮುಗಿಸುವ ವ್ಯವಸ್ಥಿತ ಸಂಚು: ಸಿದ್ದರಾಮಯ್ಯ - ಕಾಂಗ್ರೆಸ್ ಪಕ್ಷ ಲಿಂಗಾಯತ ವಿರೋಧಿ ಎಂಬ ಸುಳ್ಳು ಆರೋಪ

ಆರ್​ಎಸ್​ಎಸ್​ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಇದೀಗ ಬಿಜೆಪಿಯೊಳಗೆ ಲಿಂಗಾಯತ ನಾಯಕರನ್ನು ಮುಗಿಸುವ ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

Leader of Opposition Siddaramaiah
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Apr 23, 2023, 8:03 PM IST

ಬೆಂಗಳೂರು: ಬಿಜೆಪಿ ಪಕ್ಷದೊಳಗೆ ಲಿಂಗಾಯತ ನಾಯಕರನ್ನ ಮುಗಿಸುವ ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ರಾಜ್ಯ ಬಿಜೆಪಿಯಲ್ಲಿರುವ ಲಿಂಗಾಯತ ಸಮುದಾಯದ ನಾಯಕರನ್ನು ನೋಡಿದಾಗ ‘ ಹಾವಿನ ಹೆಡೆಯ ಮೇಲಿನ ಕಪ್ಪೆ ಹಾರುವ ನೊಣಕ್ಕೆ ಆಶಿಸಿದಂತೆ ಎಂಬ ಬಸವಣ್ಣನವರ ವಚನ ನೆನಪಾಗುತ್ತಿದೆ. ರಾಜಕೀಯವಾಗಿ ತಮ್ಮನ್ನು ಮುಗಿಸಲು ಆರ್ ಎಸ್ ಎಸ್ ವಿಘ್ನ ಸಂತೋಷಿಗಳು ಮಾಡುತ್ತಿರುವ ಸಂಚನ್ನು ಅರಿಯದ ಬಿಜೆಪಿಯ ಲಿಂಗಾಯತ ನಾಯಕರು, ಕಾಂಗ್ರೆಸ್ ಪಕ್ಷ ಲಿಂಗಾಯತ ವಿರೋಧಿ ಎಂಬ ಸುಳ್ಳು ಆರೋಪ ಮಾಡುತ್ತಾ ಕಾಲ ಕಳೆಯುತ್ತಿರುವುದು ವಿಷಾದನೀಯ ಎಂದಿದ್ದಾರೆ.

ರಾಜ್ಯದಲ್ಲಿ ನೆಲೆಯೇ ಇಲ್ಲದಿದ್ದ ಬಿಜೆಪಿಯನ್ನು ಅಧಿಕಾರದ ಪೀಠದಲ್ಲಿ ತಂದು ಕೂರಿಸಿದ ಲಿಂಗಾಯತ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಜೈಲಿಗೆ ಕಳಿಸಿದ್ದು, ಆರ್ ಎಸ್ ಎಸ್ ನ ವಿಘ್ನ ಸಂತೋಷಿಗಳೇ ಹೊರತು, ಕಾಂಗ್ರೆಸ್ ಪಕ್ಷ ಅಲ್ಲ ಎಂದು ಆರೋಪ ಮಾಡಿದ್ದಾರೆ.

ಜಗದೀಶ್ ಶೆಟ್ಟರ್ ರಾಜಕೀಯ ಜೀವನವನ್ನು ಮುಗಿಸುವ ಹುನ್ನಾರದ ರೂವಾರಿಗಳು ಕೂಡಾ ಇದೇ ವಿಘ್ನ ಸಂತೋಷಿಗಳು, ಆದ್ರೆ ಕಾಂಗ್ರೆಸ್ ಅಲ್ಲ. ಗೆಲ್ಲುವ ಅವಕಾಶವೇ ಇಲ್ಲದ ವರುಣಾ ಕ್ಷೇತ್ರದಲ್ಲಿ ಒಲ್ಲೆನೆಂದರೂ ಬಲಾತ್ಕಾರವಾಗಿ ಸಚಿವ ವಿ ಸೋಮಣ್ಣ ಎಂಬ ಲಿಂಗಾಯತ ನಾಯಕನನ್ನು ಅಭ್ಯರ್ಥಿ ಮಾಡಿದ್ದು ಕೂಡಾ ಇದೇ ಆರ್ ಎಸ್ ಎಸ್ ವಿಘ್ನ ಸಂತೋಷಿಗಳು.

ಲಕ್ಷ್ಮಣ ಸವದಿ, ಸೊಗಡು ಶಿವಣ್ಣ ಸೇರಿ ಮತ್ತಿತರ ಲಿಂಗಾಯತ ನಾಯಕರಿಗೆ ಟಿಕೆಟ್ ನಿರಾಕರಿಸಿ ಅವರನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸಿದ್ದು ಕೂಡಾ ಇದೇ ಆರ್ ಎಸ್.ಎಸ್ ‘ವಿಘ್ನ ಸಂತೋಷಿ’ಗಳು ಎಂದಿದ್ದಾರೆ.

ಈಗ ಜಗದೀಶ್ ಶೆಟ್ಟರ್ ಅವರನ್ನು ಸೋಲಿಸುವ ಹೊಣೆಯನ್ನು ಕೂಡಾ ಬಿ ಎಸ್ ಯಡಿಯೂರಪ್ಪನವರ ಮೇಲೆ ಹೊರಿಸಲಾಗಿದೆ. ಅವರಲ್ಲಿ ಯಾರೂ ಸೋತರೂ ಒಬ್ಬ ಲಿಂಗಾಯತ ನಾಯಕರು ಸೋತ ಹಾಗೆ ಅಲ್ಲವೇ? ಆದರೆ ಬಿಜೆಪಿಯಲ್ಲಿರುವ ಲಿಂಗಾಯತ ನಾಯಕರು ತಮ್ಮ ನಿಜವಾದ ಶತ್ರುಗಳು ಯಾರೆಂದು ಅರ್ಥಮಾಡಿಕೊಳ್ಳದೆ, ವೃಥಾ ಕಾಂಗ್ರೆಸ್ ನಾಯಕರ ಮೇಲೆ ಆರೋಪ ಮಾಡುವುದರಲ್ಲಿ ತಲ್ಲೀನರಾಗಿದ್ದಾರೆ. ಇದು ಕೂಡಾ ಆರ್ ಎಸ್ ಎಸ್ ನ ವಿಘ್ನ ಸಂತೋಷಿಗಳ ಹುನ್ನಾರವೇ ಆಗಿದೆ ಎಂದು ಅಪಾದಿಸಿದರು.

ಬದಲಾವಣೆಯ ಹೆಸರಲ್ಲಿ ಬಿಜೆಪಿಯೊಳಗಿನ ಆರ್ ಎಸ್ ಎಸ್ ವಿಘ್ನ ಸಂತೋಷಿಗಳು ಮಾಡುತ್ತಿರುವ ಈ ಎಲ್ಲ ಪ್ರಯೋಗಗಳು ಅಂತಿಮವಾಗಿ ಪಕ್ಷದೊಳಗಿನ ಹಿರಿಯ ಮತ್ತು ಪ್ರಭಾವಿ ಲಿಂಗಾಯತ ನಾಯಕರ ತಲೆದಂಡ ತೆಗೆದುಕೊಳ್ಳುವ ರಾಜಕೀಯ ಕುತಂತ್ರವೇ ಆಗಿದೆ ಎನ್ನುವುದನ್ನು ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಮತ್ತು ಒಟ್ಟು ಲಿಂಗಾಯತ ಸಮುದಾಯ ಅರಿತುಕೊಳ್ಳಬೇಕಾಗಿದೆ.

ಈಗಲೂ ಕಾಲ ಮಿಂಚಿಲ್ಲ, ಬಿಜೆಪಿಯೊಳಗಿನ ಲಿಂಗಾಯತ ನಾಯಕರು ಕಲ್ಪಿತ ಶತ್ರುವಿನ ಮೇಲೆ ಆರೋಪ ಮಾಡುವುದನ್ನು ನಿಲ್ಲಿಸಿ ತಮ್ಮ ನಿಜವಾದ ಶತ್ರುಗಳನ್ನು ಗುರುತಿಸಿ ಹೋರಾಟ ನಡೆಸಬೇಕೆಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಯೂತ್​ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿವಿ ವಿರುದ್ಧ ಎಫ್‌ಐಆರ್: ಕರ್ನಾಟಕದತ್ತ ಅಸ್ಸೋಂ ಪೊಲೀಸರ ತಂಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.