ETV Bharat / state

ಫೆ.24-25ರಂದು ಅರಮನೆ ಮೈದಾನದಲ್ಲಿ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ - ಸಂವಿಧಾನ ಜಾಗೃತಿ ಜಾಥಾ

ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ ಆಯೋಜನೆಯ ಹಿನ್ನೆಲೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

Meeting under presidentship of CM Siddaramaiah
ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ
author img

By ETV Bharat Karnataka Team

Published : Jan 8, 2024, 2:10 PM IST

ಬೆಂಗಳೂರು: ಫೆಬ್ರವರಿ 24 ಹಾಗೂ 25ರಂದು ನಗರದ ಅರಮನೆ ಮೈದಾನದಲ್ಲಿ ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ಆಯೋಜಿಸಿ ಸಮಾಲೋಚನೆ ನಡೆಸಲಾಯಿತು.

ಸಂವಿಧಾನ ಜಾರಿಗೆ ಬಂದು 75 ವರ್ಷಾಚರಣೆಯ ಅಂಗವಾಗಿ "ಸಂವಿಧಾನ ಮತ್ತು ರಾಷ್ಟ್ರೀಯ ಏಕತೆಯ ಸಮಾವೇಶ" Institute of Social and Economic Change (ISEC), National Law School of India University, Bengaluru ಇವರ ಸಹಯೋಗದೊಂದಿಗೆ ಆಯೋಜಿಸಲಾಗುತ್ತಿದೆ. ಸಂವಿಧಾನದ ಮಹತ್ವ ಹಾಗೂ ಮೌಲ್ಯದ ಕುರಿತು ಅರಿವು ಮೂಡಿಸುವುದು ಹಾಗೂ ರಾಷ್ಟ್ರೀಯ ಏಕತೆಯನ್ನು ಎತ್ತಿಹಿಡಿಯುವ ಉದ್ದೇಶದಿಂದ ಈ ಸಮಾವೇಶವನ್ನು ಆಯೋಜಿಸಲಾಗುತ್ತಿದೆ.

ಸಮಾವೇಶಕ್ಕೆ ಪೂರ್ವಭಾವಿಯಾಗಿ ಜನವರಿ 26ರಿಂದ "ಸಂವಿಧಾನ ಜಾಗೃತಿ ಜಾಥಾ' ಆಯೋಜಿಸಲಾಗುವುದು. ಈ ಜಾಥಾವು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಸಂವಿಧಾನದ ಮಹತ್ವ, ರಾಷ್ಟ್ರೀಯ ಭಾವೈಕ್ಯತೆ ಕುರಿತಂತೆ ಅರಿವು ಮೂಡಿಸುವ ಕಿರುಚಿತ್ರಗಳು, ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲು ತೀರ್ಮಾನಿಸಲಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಈ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಫೆಬ್ರುವರಿ 24 ಹಾಗೂ 25ರಂದು ಅರಮನೆ ಮೈದಾನದಲ್ಲಿ ಸಮಾವೇಶ ನಡೆಯಲಿದ್ದು, ವಿಚಾರ ಸಂಕಿರಣ ಹಾಗೂ KREIS ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ಆಯೋಜಿಸಲಾಗುವುದು.

ಸಮಾರೋಪ ಸಮಾರಂಭದಲ್ಲಿ ಒಂದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ವಿವಿಧ ವಿಷಯಗಳ ಕುರಿತ ಪರಿಣತರ ಚರ್ಚೆಯನ್ನು ಆಧರಿಸಿ, ನಿರ್ಣಯಗಳನ್ನು ಕೈಗೊಳ್ಳಲಾಗುವುದು. ಇಂದಿನ ಸಮಾಜ ಎದುರಿಸುತ್ತಿರುವ ಎಲ್ಲ ಸಮಸ್ಯೆ, ಸವಾಲುಗಳಿಗೆ ಸಂವಿಧಾನದಲ್ಲಿ ಉತ್ತರವಿದೆ. ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಸಮಾವೇಶದಲ್ಲಿ ಅತ್ಯುತ್ತಮ ಸಂಪನ್ಮೂಲ ವ್ಯಕ್ತಿಗಳು ಹಾಗೂ ಅತಿಥಿಗಳನ್ನು ಆಹ್ವಾನಿಸಿ, ಅತ್ಯುತ್ತಮ ಚರ್ಚಾಗೋಷ್ಠಿಗಳನ್ನು ಆಯೋಜಿಸುವಂತೆ ಸೂಚಿಸಲಾಯಿತು.

ಇದನ್ನೂ ಓದಿ: 2023-24ರ ಬಜೆಟ್ ವರ್ಷದ 9 ತಿಂಗಳಲ್ಲಿ ರಾಜ್ಯದ ಇಲಾಖಾವಾರು ಆರ್ಥಿಕ ಪ್ರಗತಿ ಹೀಗಿದೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.