ETV Bharat / state

ಸಂವಿಧಾನಬದ್ಧ ಆಡಳಿತ ನಡೆಸುವುದು ನಮ್ಮ ಆಶಯ: ಸಿಎಂ ಬೊಮ್ಮಾಯಿ

ಸಂವಿಧಾನದ ಸ್ಫೂರ್ತಿ ಗ್ರಾಮೀಣ ಮಟ್ಟದಲ್ಲಿ ಆಗಬೇಕು ಎನ್ನುವುದು ನಮ್ಮ ಉದ್ದೇಶ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂವಿಧಾನ ನನಗೆ ಧರ್ಮಗ್ರಂಥ ಎಂದು ಹೇಳಿದ್ದರು. ಅದನ್ನು ಅಕ್ಷರಶಃ ನಾವೆಲ್ಲರೂ ಪಾಲನೆ ಮಾಡುತ್ತಿದ್ದೇವೆ ಎಂದರು.

Constitutional governance is our wish: CM Bommai
ಗ್ರಾಮ ಪಂಚಾಯತ್ ಗಳಿಗೆ ಸಂವಿಧಾನದ ಪ್ರತಿ ಹಂಚಿಕೆ: ಸಿಎಂ ಬೊಮ್ಮಾಯಿ
author img

By

Published : Nov 26, 2022, 3:31 PM IST

Updated : Nov 26, 2022, 3:53 PM IST

ಬೆಂಗಳೂರು: ಎಲ್ಲಾ ಗ್ರಾಮ ಪಂಚಾಯಿತಿಗಳ ಗ್ರಂಥಾಲಯಗಳಿಗೆ ಸಂವಿಧಾನ, ಗ್ರಾಮ ಪಂಚಾಯಿತಿಯ 73 ಮತ್ತು 74 ನೇ ತಿದ್ದುಪಡಿ ಮತ್ತು ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆಗಳ ಪ್ರತಿಗಳನ್ನು ಹಂಚುವ ಮೂಲಕ ಸಂವಿಧಾನಬದ್ಧ ಆಡಳಿತ ನಡೆಸುವುದು ನಮ್ಮ ಆಶಯ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಂವಿಧಾನಬದ್ಧ ಆಡಳಿತ ನಡೆಸುವುದು ನಮ್ಮ ಆಶಯ: ಸಿಎಂ ಬೊಮ್ಮಾಯಿ

ಸಂವಿಧಾನ ದಿನದ ನಿಮಿತ್ತ ವಿಧಾನಸೌಧದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂವಿಧಾನದ ಸ್ಫೂರ್ತಿ ಗ್ರಾಮೀಣ ಮಟ್ಟದಲ್ಲಿ ಆಗಬೇಕು ಎನ್ನುವುದು ನಮ್ಮ ಉದ್ದೇಶ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸಂವಿಧಾನ ನನಗೆ ಧರ್ಮಗ್ರಂಥ ಎಂದು ಹೇಳಿದ್ದರು. ಅದನ್ನು ಅಕ್ಷರಶಃ ನಾವೆಲ್ಲರೂ ಪಾಲನೆ ಮಾಡುತ್ತಿದ್ದೇವೆ ಎಂದರು.

ಸಂವಿಧಾನ ಶಾಶ್ವತ ಕೊಡುಗೆ: ಭಾರತದ ಸಂವಿಧಾನ ದಿನಾಚರಣೆಯನ್ನು ಎಲ್ಲೆಡೆ ಆಚರಿಸಲಾಗುತ್ತಿದೆ. ಸಂವಿಧಾನ ರಚನೆಯಾಗಿ ಭಾರತ ಸರ್ವ ಸ್ವತಂತ್ರ ಒಕ್ಕೂಟ ರಾಷ್ಟ್ರವಾಗಿ, ಸಂವಿಧಾನಬದ್ಧವಾದ ಗಣತಂತ್ರವಾಗಿ ಕೆಲಸ ಮಾಡಲು ಪ್ರಾರಂಭಿಸಿತು. ಈ ದಿನದಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅತ್ಯಂತ ಆದರ ಗೌರವಗಳಿಂದ ನೆನಪು ಮಾಡಿಕೊಳ್ಳುತ್ತೇವೆ. ಅವರ ಅಧ್ಯಕ್ಷತೆಯಲ್ಲಿ ರಚನೆಯಾದ ಸಂವಿಧಾನ ರಚನಾ ಸಮಿತಿ, ಪ್ರಜಾಪ್ರಭುತ್ವಕ್ಕೆ ಸಂವಿಧಾನವನ್ನು ಶಾಶ್ವತ ಕೊಡುಗೆಯಾಗಿ ನೀಡಿದ್ದಾರೆ ಎಂದರು.

ಸಂವಿಧಾನದಂತೆ ನಡೆದುಕೊಳ್ಳಬೇಕು: ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ,ಪತ್ರಿಕಾ ರಂಗಗಳು ಸಂವಿಧಾನಬದ್ಧವಾಗಿ ನಡೆದುಕೊಳ್ಳಬೇಕಿದೆ. ಭಾರತದ ಸಂವಿಧಾನ ಜೀವಂತಿಕೆ ಇರುವ ಸಂವಿಧಾನವಾಗಿದೆ. ಕಾಲ ಕಾಲಕ್ಕೆ ಬದಲಾಗುತ್ತಿರುವ ಸಾಮಾಜಿಕ, ಆರ್ಥಿಕ ಪರಿಸ್ಥಿತಿಗಳಿಗೆ ಅನುಗುಣವಾಗಿ ಸಂವಿಧಾನವನ್ನು ತಿದ್ದುಪಡಿ ಮಾಡುವ ಹಾಗೂ ಹೊಸ ಹೊಸ ಸಂಶೋಧನೆಗಳ ಮೂಲಕ ಸಂವಿಧಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವ ಅವಕಾಶವನ್ನು ಅಂಬೇಡ್ಕರ್ ಅವರು ಮಾಡಿಕೊಟ್ಟಿದ್ದಾರೆ.

ಹೀಗಾಗಿ ಕಾಲಕಾಲಕ್ಕೆ ಸಂವಿಧಾನಕ್ಕೆ ತಿದ್ದುಪಡಿ ತರಲಾಗಿದೆ. ಪರಿಪೂರ್ಣತೆಯಿಂದ ಕೂಡಿರುವ ಸಂವಿಧಾನ, ಮಾನವ ಹಕ್ಕುಗಳ ರಕ್ಷಣೆ ಮಾಡುವ, ವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸುವ, ಸಮಾನತೆಯನ್ನು ಸಾರುವ ಸಂವಿಧಾನವನ್ನು ನಾವೆಲ್ಲರೂ ಗೌರವಿಸಿ, ಅದರಂತೆ ನಡೆಯಬೇಕು ಎಂದು ತಿಳಿಸಿದರು.

ಮುಂದುವರೆದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂವಿಧಾನ ದಿನಾಚರಣೆ ನಿಮಿತ್ತ ವಿಧಾನಸೌಧ ಸಮ್ಮೇಳನದ ಸಭಾಂಗಣದಲ್ಲಿ ಸರ್ಕಾರಿ ನೌಕರರಿಗೆ ಸಂವಿಧಾನ ಪೀಠಿಕೆಯ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ಸಂದರ್ಭದಲ್ಲಿ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಎನ್.ಮಹೇಶ್, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ಮೊದಲಾದವರು ಹಾಜರಿದ್ದರು.

ಇದನ್ನೂ ಓದಿ: ಬಿಜೆಪಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

Last Updated : Nov 26, 2022, 3:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.