ETV Bharat / state

ರಾಜಧಾನಿಯ ನಾಲ್ಕು ದಿಕ್ಕಿನಲ್ಲಿ ತಾಯಿ-ಮಗುವಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ : ಡಾ.ಕೆ. ಸುಧಾಕರ್ - ಕೆ.ಸಿ.ಜನರಲ್ ಆಸ್ಪತ್ರೆ

ಖಾಸಗಿ ಸಂಸ್ಥೆಗಳು ಕೆ.ಸಿ.ಜನರಲ್​ನಲ್ಲಿ 10 ಹಾಸಿಗೆಗಳ ಐಸಿಯು ವ್ಯವಸ್ಥೆಯನ್ನು ಮಾಡಿಕೊಟ್ಟಿವೆ. ಜೊತೆಗೆ ಅದಕ್ಕೆ ಬೇಕಿರುವ ಉಪರಕಣಗಳನ್ನೂ ನೀಡಲಾಗಿದೆ. 5 ವರ್ಷದೊಳಗಿನ ಮಕ್ಕಳು ನ್ಯುಮೋನಿಯಾದಿಂದ ಸಾವಿಗೀಡಾಗುವುದನ್ನು ತಪ್ಪಿಸಲು ರಾಜ್ಯಮಟ್ಟದ ಅರಿವು ಕಾರ್ಯಕ್ರಮ ಹಾಗೂ ಆಶಾ ಕಾರ್ಯಕರ್ತೆಯರು, ಇತರೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ನೀಡಲಾಗುತ್ತಿದೆ ಎಂದರು..

Construction of a 500-bed mother-child super specialty hospital in Bangalore
ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಐಸಿಯು ಉನ್ನತೀಕರಣ
author img

By

Published : Apr 20, 2022, 5:13 PM IST

ಬೆಂಗಳೂರು : ವಾಣಿ ವಿಲಾಸ ತಾಯಿ-ಶಿಶು ಆಸ್ಪತ್ರೆಯ ಮಾದರಿಯಲ್ಲೇ ಕೆ.ಸಿ.ಜನರಲ್ ಆಸ್ಪತ್ರೆಯಲ್ಲೂ ತಾಯಿ-ಶಿಶು ಆಸ್ಪತ್ರೆ ನಿರ್ಮಿಸಲಾಗುವುದು. ಬಜೆಟ್​ನಲ್ಲಿ ಘೋಷಿಸಿದಂತೆ ಬೆಂಗಳೂರಿನ ನಾಲ್ಕು ಮೂಲೆಯಲ್ಲಿ 500 ಹಾಸಿಗೆಯುಳ್ಳ ತಾಯಿ-ಮಗುವಿನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಶೀಘ್ರದಲ್ಲಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ನಿರ್ಮಾಣ್ ಹಾಗೂ ಓಪನ್ ಟೆಕ್ಸ್ಟ್ ನೆರವಿನಲ್ಲಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಐಸಿಯು ಉನ್ನತೀಕರಣ ಹಾಗೂ ಹೊಸ ವೈದ್ಯಕೀಯ ಉಪಕರಣಗಳ ಅಳವಡಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ 100 ಹಾಸಿಗೆಗಳ ತಾಯಿ-ಶಿಶು ಆಸ್ಪತ್ರೆ ನಿರ್ಮಿಸಲು ಉದ್ದೇಶಿಸಲಾಗಿದೆ.

ಇದನ್ನು ವಾಣಿ ವಿಲಾಸ ಮಾದರಿಯಲ್ಲಿ ನಿರ್ಮಿಸಲಾಗುವುದು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಾಗುತ್ತದೆ. ಈ ವರ್ಷದಲ್ಲೇ ಎಲ್ಲಾ ಪ್ರಸ್ತಾವಗಳು ಬರಲಿದ್ದು, ಜಾಗಗಳನ್ನು ಗುರುತಿಸಲಾಗುವುದು. ಶೀಘ್ರದಲ್ಲೇ ಶಿಲಾನ್ಯಾಸ ನೆರವೇರಲಿದೆ ಎಂದರು.

ಖಾಸಗಿ ಸಂಸ್ಥೆಗಳು ಕೆ.ಸಿ.ಜನರಲ್​ನಲ್ಲಿ 10 ಹಾಸಿಗೆಗಳ ಐಸಿಯು ವ್ಯವಸ್ಥೆಯನ್ನು ಮಾಡಿಕೊಟ್ಟಿವೆ. ಜೊತೆಗೆ ಅದಕ್ಕೆ ಬೇಕಿರುವ ಉಪರಕಣಗಳನ್ನೂ ನೀಡಲಾಗಿದೆ. 5 ವರ್ಷದೊಳಗಿನ ಮಕ್ಕಳು ನ್ಯುಮೋನಿಯಾದಿಂದ ಸಾವಿಗೀಡಾಗುವುದನ್ನು ತಪ್ಪಿಸಲು ರಾಜ್ಯಮಟ್ಟದ ಅರಿವು ಕಾರ್ಯಕ್ರಮ ಹಾಗೂ ಆಶಾ ಕಾರ್ಯಕರ್ತೆಯರು, ಇತರೆ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ನೀಡಲಾಗುತ್ತಿದೆ ಎಂದರು.

ಕೆ ಸಿ ಜನರಲ್​ಗೆ ಉತ್ತಮ ಬದಲಾವಣೆ ಬೇಕಿದೆ : ಕೆ.ಸಿ.ಜನರಲ್ ಆಸ್ಪತ್ರೆ ನಗರದ ಹೃದಯಭಾಗದಲ್ಲಿದ್ದು, ಉತ್ತಮ ಆಸ್ಪತ್ರೆಯಾಗಿದೆ. ಇಲ್ಲಿಗೆ ಬರುವ ರೋಗಿಗಳನ್ನು ಮನೆಯವರಂತೆ ಆರೈಕೆ ಮಾಡುವ ಅಗತ್ಯವಿದೆ. ಜಯದೇವ, ವಾಣಿ ವಿಲಾಸ ಮೊದಲಾದ ಆಸ್ಪತ್ರೆಗಳಲ್ಲಿ ಖಾಸಗಿಗಿಂತ ಹೆಚ್ಚು ಗುಣಮಟ್ಟದ ಸೇವೆ ದೊರೆಯುತ್ತಿದೆ. ಇದೇ ರೀತಿ ಕೆ.ಸಿ.ಜನರಲ್ ಆಸ್ಪತ್ರೆಯಲ್ಲೂ ಏಕೆ ಸೇವೆ ದೊರೆಯುತ್ತಿಲ್ಲ ಎಂದು ಸಚಿವರು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಗುತ್ತಿಗೆದಾರರಿಗೆ ಬಿಲ್ ಪಾವತಿ ವಿಳಂಬ ಆರೋಪ : ಮತ್ತೆಷ್ಟು ಜನ ಸಾಯಬೇಕೆಂದು ಪ್ರಶ್ನಿಸಿದ ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.