ETV Bharat / state

ಬಿಜೆಪಿ ಕಾರ್ಯಾಲಯ ಕಟ್ಟಡ ನಿರ್ಮಾಣ ಹಲವು ದಿನಗಳ ಪ್ರಯತ್ನದ ಫಲ: ಸಚಿವ ಆರ್.ಅಶೋಕ್​​ - ಬಿಜೆಪಿ ಕಾರ್ಯಾಲಯ ಕಟ್ಟಡ ನಿರ್ಮಾಣ

ಕೊರೊನಾ ಲಾಕ್​ಡೌನ್​​ ಸಂದರ್ಭದಲ್ಲಿ ಹೂ ಬೆಳೆಗಾರರು, ನೇಕಾರರು ಸವಿತಾ ಸಮಾಜದವರು, ಆಟೋ ಚಾಲಕರು ಸೇರಿದಂತೆ ಹಲವರ ನೆರವಿಗೆ ಧಾವಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಷ್ಟ್ರೀಯ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

R. Ashok, Minister of Revenue
ಸಚಿವ ಆರ್.ಅಶೋಕ್
author img

By

Published : Aug 14, 2020, 3:31 PM IST

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಿಗೆ ಶಾಶ್ವತ ಬಿಜೆಪಿ ಕಾರ್ಯಾಲಯದ ಕಟ್ಟಡಗಳನ್ನು ಮಾಡಬೇಕೆಂಬ ಹಲವು ದಿನಗಳ ಪ್ರಯತ್ನ ಇವತ್ತು ನೆರವೇರಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಇಂದು ಬಿಜೆಪಿ ಕಾರ್ಯಾಲಯದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೀಗ ಗುದ್ದಲಿ ಪೂಜೆ ನೆರವೇರಿದ್ದು, ಶೀಘ್ರವೇ ಕಟ್ಟಡಗಳು ಪೂರ್ಣಗೊಳ್ಳಲಿವೆ ಎಂದರು.

ಈ ಕಟ್ಟಡಗಳು ಕಾರ್ಯಕರ್ತರ ಶಕ್ತಿಕೇಂದ್ರ ಆಗಬೇಕು ಅನ್ನುವುದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬಯಕೆಯಾಗಿದೆ. ಪರಿಪೂರ್ಣ ಕಟ್ಟಡದ ವ್ಯವಸ್ಥೆ ಮಾಡಲಾಗುತ್ತದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕಟ್ಟಡಗಳ ನಿರ್ಮಾಣವಾಗಲಿದೆ ಎಂದು ಹೇಳಿದರು.

ಕಂದಾಯ ಸಚಿವ ಆರ್.ಅಶೋಕ್

ಕೊರೊನಾ ಲಾಕ್​ಡೌನ್​​ ಸಂದರ್ಭದಲ್ಲಿ ಹೂ ಬೆಳೆಗಾರರು, ನೇಕಾರರು ಸವಿತಾ ಸಮಾಜದವರು, ಆಟೋ ಚಾಲಕರು ಸೇರಿದಂತೆ ಹಲವರ ನೆರವಿಗೆ ಧಾವಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಷ್ಟ್ರೀಯ ಅಧ್ಯಕ್ಷರು ಅಭಿನಂದನೆ ಸಲ್ಲಿಸಿದ್ದಾರೆ. ಹಾಗೆಯೇ ಕೇಂದ್ರ ಸರ್ಕಾರದ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿರುವುದಕ್ಕೆ ಅಧ್ಯಕ್ಷರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.