ETV Bharat / state

ಕನಕಪುರದಲ್ಲಿ ಮೆಡಿಕಲ್​​​​​ ಕಾಲೇಜು ರದ್ದು ಆದೇಶ ಹಿಂಪಡೆಯಿರಿ: ಡಿಕೆಶಿ ನೇತೃತ್ವದ ನಿಯೋಗದಿಂದ ಸಿಎಂಗೆ ಮನವಿ - Construction of Medical College in Kanakapura

ರಾಮನಗರ ಜಿಲ್ಲೆಯ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದುಪಡಿಸಿರುವ ಅದೇಶವನ್ನು ಹಿಂತೆಗೆದುಕೊಂಡು ಕನಕಪುರದಲ್ಲೇ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮರು ಆದೇಶ ಹೊರಡಿಸುವಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸಿದೆ.

Construction of Medical College in Kanakapura
ಕನಕಪುರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ: ಡಿಕೆಶಿ ನೇತೃತ್ವದ ನಿಯೋಗದಿಂದ ಸಿಎಂಗೆ ಒತ್ತಾಯ!
author img

By

Published : Feb 18, 2020, 10:47 PM IST

ಬೆಂಗಳೂರು: ರಾಮನಗರ ಜಿಲ್ಲೆಯ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದುಪಡಿಸಿರುವ ಅದೇಶವನ್ನು ಹಿಂತೆಗೆದುಕೊಂಡು ಕನಕಪುರದಲ್ಲೇ ಮೆಡಿಕಲ್ ಕಾಲೇಜು ಸ್ಥಾಪನೆಗೆ ಮರು ಆದೇಶ ಹೊರಡಿಸುವಂತೆ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಒತ್ತಾಯಿಸಿದೆ.

ಕನಕಪುರದಿಂದ ವೈದ್ಯಕೀಯ ಕಾಲೇಜು ಸ್ಥಳಾಂತರ ರದ್ದು ಮತ್ತು ರಾಮನಗರ, ಕುಣಿಗಲ್, ಮಾಗಡಿ ಸೇರಿದಂತೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಸಂಬಂಧ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನೇತೃತ್ವದ ಸ್ಥಳೀಯ ಜನಪ್ರತಿನಿಧಿಗಳ ನಿಯೋಗ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ವಿಧಾನಸೌಧದ ಸಿಎಂ ಕಚೇರಿಯಲ್ಲಿ ಭೇಟಿ ಮಾಡಿ ಸುಮಾರು 20 ನಿಮಿಷಗಳ ಕಾಲ ಚರ್ಚಿಸಿತು. ಈ ಸಂದರ್ಭದಲ್ಲಿ ಕೆಲ ಸಚಿವರು ಸೇರಿ ಶಾಸಕರೂ ಹಾಜರಿದ್ದರು.

Construction of Medical College in Kanakapura
ಕನಕಪುರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣ: ಡಿಕೆಶಿ ನೇತೃತ್ವದ ನಿಯೋಗದಿಂದ ಸಿಎಂಗೆ ಒತ್ತಾಯ

ಈ ವೇಳೆ ಮೆಡಿಕಲ್ ಕಾಲೇಜಿಗೆ ಒತ್ತಾಯಿಸಿ ಪತ್ರವನ್ನು ನೀಡಲಾಗಿದ್ದು, ಇದರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಅಧಿಕಾರಕ್ಕೆ ಬಂದಾಗ ತಾವು ದ್ವೇಷದ ರಾಜಕಾರಣ ಮಾಡುವುದಿಲ್ಲ, ಜನರ ಹಿತದೃಷ್ಟಿ ಹಾಗೂ ಅಭಿವೃದ್ಧಿ ವಿಚಾರವಾಗಿ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದರು. ಬಸವ ತತ್ವಗಳನ್ನು ಪಾಲಿಸುವುದಾಗಿ ಹೇಳಿಕೊಳ್ಳುವ ಅವರು, ಈ ಹಿಂದೆ ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಭಾವಿಸಿದ್ದೆ. ಆದರೆ ನಂತರದ ದಿನಗಳಲ್ಲಿ ಅವರು ತಮ್ಮ ಮಾತಿಗೆ ತದ್ವಿರುದ್ಧವಾಗಿ ನಡೆದುಕೊಂಡಿದ್ದಾರೆಂದು ಹೇಳಿದ್ದಾರೆ.

ನಂಜುಂಡಪ್ಪ ಸಮಿತಿಯು ಕನಕಪುರವನ್ನು ಹಿಂದುಳಿದ ತಾಲೂಕು ಎಂದು ಪರಿಗಣಿಸಿದ ಹಿನ್ನೆಲೆಯಲ್ಲಿ ಅಭಿವೃದ್ಧಿ ಹಾಗೂ ಈ ಭಾಗದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಮೂಲ ಸೌಕರ್ಯ ಹೆಚ್ಚಿಸಲು ಹಾಗೂ ಈ ಭಾಗದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ತಲುಪುವಂತೆ ಮಾಡಲು ಕಳೆದ ಸರ್ಕಾರ 2018-19ನೇ ಸಾಲಿನ ಬಜೆಟ್​ನಲ್ಲಿ ಕನಕಪುರ ವೈದ್ಯಕೀಯ ಕಾಲೇಜಿಗೆ ಅನುಮೋದನೆ ನೀಡಿತ್ತು ಎಂದು ತಿಳಿಸಲಾಗಿದೆ.

ಈ ವಿಚಾರವಾಗಿ ವಿಧಾನಸಭೆಯಲ್ಲಿ ನಡೆದ ಚರ್ಚೆಯಲ್ಲಿ ಆಗಿನ ವಿರೋಧ ಪಕ್ಷದ ನಾಯಕರಾಗಿದ್ದ ನೀವು ನಿಮ್ಮ ಅಭಿಪ್ರಾಯ ಹಾಗೂ ಒಪ್ಪಿಗೆಯನ್ನೂ ಸೂಚಿಸಿದ್ದಿರಿ. ನಂತರ ಯೋಜನಾ ಇಲಾಖೆ, ಆರ್ಥಿಕ ಇಲಾಖೆ, ಕಾನೂನು ಮತ್ತು ಸಂಸದೀಯ ಇಲಾಖೆ ಈ ಪ್ರಸ್ತಾವನೆ ಪರಿಶೀಲಿಸಿ 2018ರ ಡಿ. 13ರಂದು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿತ್ತು. ಇದಾದ ನಂತರ ಮೆಡಿಕಲ್ ಕಾಲೇಜಿನ ಕಟ್ಟಡ ನಿರ್ಮಾಣಕ್ಕೆ ಕನಕಪುರದ ರಾಯಸಂದ್ರ ಹಳ್ಳಿಯಲ್ಲಿ 25 ಎಕರೆ ಜಮೀನು ನಿಗದಿ ಮಾಡಲಾಗಿತ್ತು. ನಂತರ ಟೆಂಡರ್ ಕರೆದು ಗುದ್ದಲಿ ಪೂಜೆ ಮಾತ್ರ ಬಾಕಿ ಉಳಿದಿತ್ತು.

ಈ ಹಂತದಲ್ಲಿರುವ ಯೋಜನೆಯನ್ನು ನಿಮ್ಮ ಏಕವ್ಯಕ್ತಿ ಸಂಪುಟ ಹಿಂಪಡೆದು ಹಿಂದಿನ ಸರ್ಕಾರದ ಆದೇಶ ರದ್ದುಗೊಳಿಸಿ ಯೋಜನೆಯನ್ನು ರಾತ್ರೋರಾತ್ರಿ ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆ ಮಾಡಿರುವುದು ಅಚ್ಚರಿ ತಂದಿದೆ. ಇಂತಹ ನಿರ್ಧಾರ ಕೈಗೊಂಡಿರುವುದು ಮನಸ್ಸಿಗೆ ನೋವು ತಂದಿದೆ. ಯಾವುದೇ ಬೇರೆ ಕ್ಷೇತ್ರಕ್ಕೆ ನೀಡಿದ್ದ ಕಾಲೇಜನ್ನು ರದ್ದುಗೊಳಿಸಿ ಕನಕಪುರಕ್ಕೆ ಕಾಲೇಜು ಅನುಮೋದನೆ ನೀಡಿರಲಿಲ್ಲ ಎಂದು ನಿಮಗೆ ನೆನಪಿಸಲು ಇಚ್ಛಿಸುತ್ತೇನೆ ಎಂದಿದ್ದಾರೆ.

ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ನೀಡಿರುವ ಬಗ್ಗೆ ನಾನು ಯಾವುದೇ ಪ್ರಶ್ನೆ ಮಾಡುವುದಿಲ್ಲ. ಸರ್ಕಾರ ತನಗೆ ಇಚ್ಛೆ ಬಂದ ಪ್ರದೇಶಗಳಿಗೆ ಎಷ್ಟು ಕಾಲೇಜುಗಳನ್ನು ಬೇಕಾದರೂ ನೀಡಲಿ. ಆದರೆ ಕನಕಪುರಕ್ಕೆ ನೀಡಲಾಗಿದ್ದ ಕಾಲೇಜನ್ನು ರದ್ದುಗೊಳಿಸಿರುವುದು ಸರಿಯಲ್ಲ ಎಂಬುದು ನಮ್ಮ ವಾದ. ಇತ್ತೀಚೆಗೆ ನೀವು ಮಾಗಡಿಯಲ್ಲಿ ಕನಕಪುರಕ್ಕೆ ವೈದ್ಯಕೀಯ ಕಾಲೇಜು ನೀಡುವುದಾಗಿ ಕೊಟ್ಟಿರುವ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಹೀಗಾಗಿ ಸರ್ಕಾರ ಕೂಡಲೇ ಕನಕಪುರಕ್ಕೆ ನೀಡಲಾಗಿದ್ದ ಕಾಲೇಜನ್ನು ಮರು ಮಂಜೂರು ಮಾಡಬೇಕು. ಅಲ್ಲದೆ ಕಾಲೇಜು ಕಟ್ಟಡ ನಿರ್ಮಾಣದ ಭೂಮಿಪೂಜೆಗೆ ದಿನಾಂಕ ನಿಗದಿಪಡಿಸಬೇಕು.

ಒಂದು ವೇಳೆ ನಿಮ್ಮ ಸರ್ಕಾರ ಈ ವಿಚಾರದಲ್ಲಿ ದ್ವೇಷದ ರಾಜಕಾರಣ ಮುಂದುವರಿಸಿದರೆ ಇದರ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು. ಕನಕಪುರ ಜನರಿಗೆ ನ್ಯಾಯ ದೊರಕಿಸಿಕೊಡಲು ನನ್ನದೇ ಮಾರ್ಗ ಅನುಸರಿಸಬೇಕಾಗುತ್ತದೆ. ಇದಕ್ಕೆ ನೀವು ಅವಕಾಶ ನೀಡುವುದಿಲ್ಲ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ. ಇದೇ ವೇಳೆ ಕಾಗಿನೆಲೆ, ಕನಕಪೀಠ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ಸಭೆ ವಿಚಾರವಾಗಿ ಹೆಚ್​.ಎಂ.ರೇವಣ್ಣ ಅವರ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಮುಖ್ಯಮಂತ್ರಿಗಳು, ಶೀಘ್ರದಲ್ಲೇ ಸಭೆ ಕರೆಯುವುದಾಗಿ ಭರವಸೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.