ETV Bharat / state

ಬೆಸ್ಕಾಂ ವ್ಯಾಪ್ತಿಯಲ್ಲಿ ಭೂಗತ ಪರಿವರ್ತಕ ಕೇಂದ್ರಗಳ ನಿರ್ಮಾಣ: ಇಂಧನ ಸಚಿವ ಕೆ ಜೆ ಜಾರ್ಜ್‌

ಬೆಂಗಳೂರಿನಲ್ಲಿ ಸ್ಥಾಪಿಸಲಾಗಿರುವ ದೇಶದ ಮೊದಲ ಭೂಗತ ವಿದ್ಯುತ್‌ ಪರಿವರ್ತಕ ಕೇಂದ್ರವನ್ನು ಉದ್ಘಾಟಿಸಿದ ಇಂಧನ ಸಚಿವ ಕೆ ಜೆ ಜಾರ್ಜ್‌ ಅವರು ಬೆಸ್ಕಾಂ ವ್ಯಾಪ್ತಿಯಲ್ಲಿ ಮತ್ತಷ್ಟು ಭೂಗತ ಟ್ರಾನ್ಸ್‌ ಫಾರ್ಮರ್‌ಗಳ ನಿರ್ಮಾಣಕ್ಕೆ ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದರು.

Electricity
ವಿದ್ಯುತ್​
author img

By ETV Bharat Karnataka Team

Published : Sep 6, 2023, 7:07 AM IST

ಬೆಂಗಳೂರು : ಪಾದಚಾರಿ ಮಾರ್ಗಗಳಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಟಿಸಿಗಳ ಸ್ಥಳಾಂತರದ ಜೊತೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ ಭೂಗತ ಟ್ರಾನ್ಸ್‌ ಫಾರ್ಮರ್‌ಗಳ (ಪರಿವರ್ತಕ ಕೇಂದ್ರಗಳ) ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ ಎಂದು ಇಂಧನ ಸಚಿವ ಕೆ ಜೆ ಜಾರ್ಜ್‌ ತಿಳಿಸಿದರು.

ಮಲ್ಲೇಶ್ವರಂದಲ್ಲಿ ಬೆಸ್ಕಾಂ ಮತ್ತು ಬಿಬಿಎಂಪಿ ಸಹಯೋಗದಲ್ಲಿ ನಿರ್ಮಿಸಿರುವ 500 ಕೆವಿಎ ಭೂಗತ ವಿದ್ಯುತ್ ಪರಿವರ್ತಕ ಕೇಂದ್ರವನ್ನು ಮಂಗಳವಾರ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, "ಇದು ದೇಶದ ಮೊದಲ ಭೂಗತ ಪರಿವರ್ತಕ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಂದಿನ ದಿನಗಳಲ್ಲಿ ಬೆಸ್ಕಾಂ ವ್ಯಾಪ್ತಿಯಲ್ಲಿ ಭೂಗತ ಪರಿವರ್ತಕ ಕೇಂದ್ರಗಳನ್ನು ನಿರ್ಮಿಸುವ ಕುರಿತು ಈಗಾಗಲೇ ಯೋಜನೆಯನ್ನು ರೂಪಿಸಿಕೊಂಡಿದ್ದು, ಪ್ರತಿ ಭೂಗತ ಟ್ರಾನ್ಸ್​​ಫಾರ್ಮರ್​ಗಳ ನಿರ್ಮಾಣಕ್ಕೆ ಸುಮಾರು 2 ಕೋಟಿ ರೂ. ವ್ಯಯವಾಗುತ್ತದೆ" ಎಂದು ಸಚಿವರು ತಿಳಿಸಿದರು.

ಸುರಕ್ಷತೆ ಹಾಗೂ ಗುಣಮಟ್ಟದ ವಿದ್ಯುತ್‌ ಪೂರೈಕೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ ಭೂಗತ ಉಪ ಕೇಂದ್ರಗಳ ನಿರ್ಮಾಣಕ್ಕೂ ಯೋಜನೆ ರೂಪಿಸಲಾಗಿದೆ. ಬೆಂಗಳೂರಿನಲ್ಲಿ ಮೇಲ್ಮಾರ್ಗದ ಹೆಚ್.ಟಿ ವಿದ್ಯುತ್ ತಂತಿಗಳನ್ನು ಭೂಗತವಾಗಿ ಪರಿವರ್ತಿಸುವ ಯೋಜನೆಯನ್ನು ಬೆಸ್ಕಾಂ ಈಗಾಗಲೇ ಕಾರ್ಯಗತಗೊಳಿಸಿದೆ. ನೆಲದಡಿಯಲ್ಲಿ ಕೇಬಲ್ ಹಾಗೂ ವಿದ್ಯುತ್ ಪರಿವರ್ತಕ ವ್ಯವಸ್ಥೆಯು ಸುರಕ್ಷತೆ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಸಹಕಾರಿಯಾಗಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಸಿ ಎನ್ ಅಶ್ವತ್ಥ ನಾರಾಯಣ್ ಮಾತನಾಡಿ, "ಸಾರ್ವಜನಿಕರ ಸುರಕ್ಷತೆಯನ್ನು ಕೇಂದ್ರೀಕರಿಸಿ ಈ ಕಾಮಗಾರಿಯ ಕುರಿತು 2022 ರಲ್ಲೇ ಇಂಧನ ಇಲಾಖೆಯೊಂದಿಗೆ ಚರ್ಚಿಸಲಾಗಿತ್ತು. ಅನುದಾನದ ಕೊರತೆ ಹಾಗೂ ನಾನಾ ಕಾರಣಗಳಿಂದ ಅನುಷ್ಠಾನಗೊಳಿಸಲು ಸಾಧ್ಯವಾಗಿರಲಿಲ್ಲ. ಆದರೆ, ಇದೀಗ ಮಲ್ಲೇಶ್ವರಂನಲ್ಲಿ ಲೋಕಾರ್ಪಣೆಗೊಂಡಿರುವುದು ಸಂತಸ ತಂದಿದೆ" ಎಂದರು.

ಭೂಗತ ಟಿಸಿ ವಿವರ : ಬೆಸ್ಕಾಂ ಹಾಗೂ ಬಿಬಿಎಂಪಿ ಸಹಭಾಗಿತ್ವದಲ್ಲಿ ಒಟ್ಟು 1.97 ಕೋಟಿ ವೆಚ್ಚದಲ್ಲಿ ಈ ಪರಿವರ್ತಕ ಕೇಂದ್ರವನ್ನು (ಟಿಸಿ) ಮಲ್ಲೇಶ್ವರಂನ 15ನೇ ಅಡ್ಡರಸ್ತೆಯ ಪಾದಚಾರಿ ಮಾರ್ಗದಡಿಯಲ್ಲಿ ನಿರ್ಮಿಸಲಾಗಿದ್ದು, ಈ ಕೇಂದ್ರದ ಉದ್ದ 14 ಮೀಟರ್, ಅಗಲ 5 ಮೀಟರ್ ಹಾಗೂ ಆಳ 4 ಮೀಟರ್‌ಗಳಿಷ್ಟಿದೆ. ಬೆಸ್ಕಾಂ 1.33 ಕೋಟಿ ರೂ. ವೆಚ್ಚದಲ್ಲಿ 500 ಕೆವಿಎ ತೈಲರಹಿತ ಪರಿವರ್ತಕ, 8 ವೇ ಸಾಲಿಡ್ ಸ್ಟೇಟ್ ರಿಂಗ್ ಮೈನ್ ಯುನಿಟ್, 5 ವೇ ಎಲ್.ಟಿ ವಿತರಣಾ ಪೆಟ್ಟಿಗೆ, 2 ಕೆವಿಎ ಯುಪಿಎಸ್, 1 ಹೆಚ್.ಪಿ ವಾಟರ್ ಪಂಪ್ (ಸ್ವಯಂಚಾಲಿತ), ಹವಾನಿಯಂತ್ರಣ ವ್ಯವಸ್ಥೆ (ಸ್ವಯಾಂಚಾಲಿತ), ವಿದ್ಯುತ್ ದೀಪಗಳು, ಅಗ್ನಿಶಾಮಕ ಉಪಕರಣಗಳು ಸೇರಿದಂತೆ ಭೂಗತ ಪರಿವರ್ತಕ ಕೇಂದ್ರಕ್ಕೆ ಅವಶ್ಯವಿರುವ ಎಲ್ಲಾ ವಿದ್ಯುತ್ ಉಪಕರಣಗಳನ್ನು ಅಳವಡಿಸಿದೆ. ಈ ಯೋಜನೆಯ ಸಿವಿಲ್‌ ಕಾಮಗಾರಿಗೆ ಬಿಬಿಎಂಪಿ 64 ಲಕ್ಷ ರೂ. ಗಳ ಅನುದಾನವನ್ನು ಒದಗಿಸಿದೆ.

ಇದನ್ನೂ ಓದಿ : ಬರದ ಬರೆಗೆ ವಿದ್ಯುತ್ ಕೊರತೆ: ಬೇಡಿಕೆ ನೀಗಿಸಲು ಗಣನೀಯ ಏರಿಕೆ ಕಂಡ ಎಸ್ಕಾಂಗಳ ವಿದ್ಯುತ್ ಖರೀದಿ- ಹೇಗಿದೆ ಸ್ಥಿತಿಗತಿ?

ವಿತರಣ ಪರಿವರ್ತಕಗಳು, ರಿಂಗ್ ಮೇನ್ ಯೂನಿಟ್​ಗಳು, ಫೀಡರ್ ಪಿಲ್ಲರ್ ಬಾಕ್ಸ್ ಗಳು ಸೇರಿದಂತೆ ಸಂಪೂರ್ಣ ವ್ಯವಸ್ಥೆಯನ್ನು ಭೂಗತವಾಗಿ ಪರಿವರ್ತಿಸಲಾಗುತ್ತಿದ್ದು, ಇದರಿಂದ ವಿದ್ಯುತ್ ಅವಘಡಗಳನ್ನು ತಪ್ಪಿಸುವುದರ ಜೊತೆಗೆ ವಿದ್ಯುತ್‌ ಪೂರೈಕೆ ನಷ್ಟವನ್ನು ತಗ್ಗಿಸಬಹುದಾಗಿದೆ. ಜತೆಗೆ, ಗುಣಮಟ್ಟದ ವಿದ್ಯುತ್ ಪೂರೈಸಲು ಸಾಧ್ಯವಾಗುತ್ತದೆ.

ಸಮಾರಂಭದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರು ಭೂಗತ ಪರಿವರ್ತಕ ಕೇಂದ್ರದ ಕುರಿತು ಮಾಹಿತಿ ನೀಡಿದರು. ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ ಯೋಜನೆಯ ವೆಚ್ಚದ ಕುರಿತು ವಿವರಿಸಿದರು. ಈ ವೇಳೆ ಬೆಸ್ಕಾಂ ನಿರ್ದೇಶಕರು ( ಹಣಕಾಸು) ದರ್ಶನ್.ಜೆ, ನಿರ್ದೇಶಕರು (ತಾಂತ್ರಿಕ) ರಮೇಶ್‌ ಹೆಚ್‌ ಜೆ, ಬಿಬಿಎಂಪಿಯ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್, ಬಿಬಿಎಂಪಿ ವಲಯ ಆಯುಕ್ತರಾದ ಡಾ. ದೀಪಕ್, ಬೆವಿಕಂ ಹಾಗೂ ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ : ರಾಜ್ಯದಲ್ಲಿ ಪವರ್ ಕಟ್ ಜಾರಿ ಮಾಡಿಲ್ಲ: ಸಚಿವ ಕೆ ಜೆ ಜಾರ್ಜ್ ಸ್ಪಷ್ಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.