ಬೆಂಗಳೂರು: ಶಾಲೆಗಳು ಆರಂಭವಾಗಿವೆ. ಆದರೆ, ಪಠ್ಯಪುಸ್ತಕ ವಿವಾದ ಚಕ್ರತೀರ್ಥದಲ್ಲಿ ಒದ್ದಾಡುತ್ತಾ ಸರ್ಕಾರವನ್ನು ಪೇಚಿಗೆ ಸಿಲುಕಿಸಿದೆ ಎಂದು ನಾಡೋಜ ಡಾ ಹಂಪ ನಾಗರಾಜಯ್ಯ ಅಭಿಪ್ರಾಯಪಟ್ಟಿದ್ದಾರೆ.
ವಿದ್ಯಾರ್ಥಿಗಳಲ್ಲಿ, ಪೋಷಕರಲ್ಲಿ ತಳಮಳವಾಗಿದೆ. ಹಾಗೇ ವ್ಯಕ್ತಿಗಳನ್ನು ಅನಗತ್ಯವಾಗಿ ನಿಂದಿಸುವ ಅಪಾಯಕಾರಿ ಪ್ರವೃತ್ತಿ ಹಬ್ಬುತ್ತಿದೆ. ಕುವೆಂಪು ಕುರಿತು ಅವಹೇಳನಕಾರಿ ಬರಹಗಳು ಹರಿದಾಡುತ್ತಿವೆ. ದಿನದಿಂದ ದಿನಕ್ಕೆ ಪರ-ವಿರೋಧದ ಚರ್ಚೆಗಳು ತೂಕ ತಪ್ಪಿ ಬಿಸಿ ಏರುತ್ತಿದೆ.
ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಅನಾರೋಗ್ಯಕರ ಬೆಳವಣಿಗೆ ತಟಸ್ಥವಾಗಿರಲು ಸರ್ಕಾರ ಕೂಡಲೇ ಕಾರ್ಯಪ್ರವೃತ್ತವಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಭಿನ್ನಾಭಿಪ್ರಾಯಗಳು ಒಂದು ತಾರ್ಕಿಕ ಅಂತ್ಯ ಕಾಣುವವರಿಗೆ ಪಠ್ಯಪುಸ್ತಕ ಸಮಿತಿ ಸಿದ್ಧಪಡಿಸಿರುವ ಹೊಸಪಠ್ಯ ತಡೆಹಿಡಿದು ಹಿಂದಿನ ಪಠ್ಯವನ್ನು ಮುಂದುವರಿಸುವಂತೆ ಸುತ್ತೋಲೆಯನ್ನು ಸರ್ಕಾರ ತಕ್ಷಣವೇ ಹೊರಡಿಸಿ, ಕಲುಷಿತ ವಾತಾವರಣವನ್ನು ತಿಳಿಗೊಳಿಸಿ ಎಂದು ವಿನಂತಿಸಿದ್ದಾರೆ.
ಇದನ್ನೂ ಓದಿ: ಮುಹೂರ್ತ ಸಮಯಕ್ಕೆ ಪ್ರಿಯಕರನ ಜೊತೆ ವಧು ಎಸ್ಕೇಪ್..