ದೊಡ್ಡಬಳ್ಳಾಪುರ: ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪನವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಕೋಲಾರದ ಆರ್ ಜಾಲಪ್ಪ ಆಸ್ಪತ್ರೆಯ ಐಸಿಯು ಘಟಕದಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯವರಾದ ಆರ್ ಎಲ್ ಜಾಲಪ್ಪ ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಮಂತ್ರಿಗಳಾಗಿ ಸೇವೆ ಸಲ್ಲಿಸಿದರು. 97 ವಯಸ್ಸಿನ ಜಾಲಪ್ಪನವರು ಶ್ವಾಸಕೋಶ ಮತ್ತು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಕೋಲಾರದ ಆಸ್ಪತ್ರೆಯ ತೀರ್ವ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಫೆಬ್ರವರಿ ತಿಂಗಳಲ್ಲಿ ಪಾರ್ಶುವಾಯುಗೆ ತುತ್ತಾಗಿ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಆ ವೇಳೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು ನಂತರ ಚೇತರಿಸಿ ಕೊಂಡಿದ್ದರು. ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.