ಬೆಂಗಳೂರು: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯಲಿದೆ. ಸಿಲಿಕಾನ್ ಸಿಟಿಯಲ್ಲಿ ಹಗುರ ಮಳೆಯಾಗಬಹುದು ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕರಾದ ಸಿ.ಎಸ್.ಪಾಟೀಲ್ ತಿಳಿಸಿದರು.
ನಿನ್ನೆ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಇಂದಿನಿಂದ 24 ಗಂಟೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳ ಹಲವೆಡೆ ಚದುರಿದ ಮಳೆಯಾಗಬಹುದು. ವಾಡಿಕೆಯ ಮುಂಗಾರು ಮಳೆಯಾಗಲಿದೆ ಎಂದು ಸಿ.ಎಸ್.ಪಾಟೀಲ್ ತಿಳಿಸಿದರು.