ಬೆಂಗಳೂರು: ನಿರಂತರವಾಗಿ ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನೆಲೆ ಪ್ರತಿಪಕ್ಷ ಕಾಂಗ್ರೆಸ್ ಸೈಕಲ್ ಜಾಥಾ ನಡೆಸಿ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆ ನಡೆಸಿತು.
ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಿಂದ ವಿಧಾನಸೌಧಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಸೈಕಲ್ನಲ್ಲಿ ಆಗಮಿಸಿದ್ದಾರೆ.
ಇದನ್ನೂ ಓದಿ: ಪ್ರಾರ್ಥನಾ ಮಂದಿರಗಳ ಸಂರಕ್ಷಣೆ ತಿದ್ದುಪಡಿ ವಿಧೇಯಕ ಮಂಡನೆಗೆ ಸಂಪುಟ ಸಭೆ ನಿರ್ಧಾರ
ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಬಿಸಿ ಮುಟ್ಟಿಸಲು ಕಾಂಗ್ರೆಸ್ ಈ ಜಾಥಾ ನಡೆಸಿದೆ. ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಈ ಹೊತ್ತಲ್ಲಿ, ಸೈಕಲ್ ಜಾಥಾ ಮಾಡುವ ಮೂಲಕ ಆಡಳಿತ ಪಕ್ಷಕ್ಕೆ ಬಿಸಿ ಮುಟ್ಟಿಸಲು ವಿಪಕ್ಷ ನಾಯಕರು ಮುಂದಾಗಿದ್ದಾರೆ.