ಬೆಂಗಳೂರು: ವಿವಿಧ ಬೇಡಿಕೆ ಈಡೇರಿಗಾಗಿ ಸರ್ಕಾರಕ್ಕೆ ಸಾಕಷ್ಟು ಸಲ ವಿನಂತಿ ಮಾಡಿದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘದವರು ಮುಷ್ಕರಕ್ಕೆ ಕರೆ ನೀಡುತ್ತಿದ್ದಾರೆ.
ಈ ಹಿಂದೆ ಸಮಿತಿ ರಚಿಸಲಾಗಿತ್ತು. ಆದರೆ ಯಾವುದೇ ನಿರ್ಧಿಷ್ಟ ಪ್ರತಿಕ್ರಿಯೆ ಇಲ್ಲಿಯವರೆಗೆ ಬಾರದ ಕಾರಣ ಇಲಾಖೆ ಹಾಗೂ ಸರ್ಕಾರದ ವಿಳಂಬ ಧೋರಣೆಯನ್ನು ಖಂಡಿಸಿಸಲಾಗುತ್ತಿದೆ.
ಈ ಬಗ್ಗೆ ಸರ್ಕಾರ ಮತ್ತು ಇಲಾಖೆಯ ಮೇಲೆ ಒತ್ತಡ ಹೇರಲು ಸೇವೆಯನ್ನು ಬಹಿಷ್ಕರಿಸಿ ಉಗ್ರ ಹೋರಾಟ ಮಾಡಲು ಜಿಲ್ಲಾ ಮಟ್ಟದ ಎಲ್ಲಾ ಪದಾಧಿಕಾರಿಗಳು ಸಭೆ ನಡೆಸಿದ್ದು, ಅಧಿವೇಶನದ ಸಮಯದಲ್ಲಿ ಹೋರಾಟ ಮಾಡಲು ನಿರ್ಧರಿಸಿದ್ದಾರೆ.
ಸಂಘದಿಂದ ಅಧಿಕೃತವಾಗಿ ಮುಷ್ಕರದ ನೋಟಿಸ್ ಅನ್ನು ಸರ್ಕಾರಕ್ಕೆ ಈಗಾಗಲೇ ಸಂಘದಿಂದ ನೀಡಲಾಗಿದೆ. ಸಮಿತಿ ರಚನೆ ಆಗಿದ್ದು, ಒಂದು ಹಂತದಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸಲು ವೇದಿಕೆಯನ್ನು ರೂಪಿಸಿದ್ದು, ಅದರಂತೆ ನಮ್ಮ ಎಲ್ಲಾ 14 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲಾಗುತ್ತಿದೆ.