ETV Bharat / state

ಸಂತೋಷ್​ ಪಾಟೀಲ ಆತ್ಮಹತ್ಯೆ ಪ್ರಕರಣ : ಬಿ ರಿಪೋರ್ಟ್ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ ಕುಟುಂಬಸ್ಥರು

ಸಂತೋಷ್​ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ಉಡುಪಿ ಪೊಲೀಸರು ಈಶ್ವರಪ್ಪ ಅವರಿಗೆ ಬಿ ರಿಪೋರ್ಟ್​ ನೀಡಿದ್ದರು. ಸಂತೋಷ್​ ಕುಟುಂಬ ಬಿ ರಿಪೋರ್ಟ್​ ಪ್ರಶ್ನಿಸಿ ಕೋರ್ಟ್​ ಮೆಟ್ಟಿಲೇರಿದೆ.

author img

By

Published : Aug 23, 2022, 3:15 PM IST

Updated : Aug 23, 2022, 6:16 PM IST

contractor-santosh-patil-family
ಸಂತೋಷ್​ ಪಾಟೀಲ ಆತ್ಮಹತ್ಯೆ ಪ್ರಕರಣ

ಬೆಂಗಳೂರು : ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್​ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸಿ ಉಡುಪಿ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಬಿ ರಿಪೋರ್ಟ್ ಮೂಲಕ ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ ಅವರನ್ನು ಖುಲಾಸೆಗೊಳಿಸಿರುವುದನ್ನು​ ಪ್ರಶ್ನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಂತೋಷ್ ಪಾಟೀಲ ಕುಟುಂಬಸ್ಥರು ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಉಡುಪಿ ಪೊಲೀಸರು ನಡೆಸಿದ ತನಿಖೆ ನ್ಯಾಯಯುತವಾಗಿಲ್ಲ. ಪೂರ್ವಾಗ್ರಹ ಪೀಡಿತರಾಗಿ ತನಿಖೆ ನಡೆಸಿದ್ದಾರೆ. ಪಾರದರ್ಶಕ ತನಿಖೆಗಾಗಿ ಸಿಬಿಐಗೆ ಕೇಸನ್ನು ಒಪ್ಪಿಸಬೇಕೆಂದು‌ ಕೋರಿ ನ್ಯಾಯಾಲಯಕ್ಕೆ ಮೃತ ಸಂತೋಷ್ ಸಹೋದರ ಪ್ರಶಾಂತ್ ಅವರು ತಕರಾರು ಅರ್ಜಿ ಸಲ್ಲಿಸಿದ್ದಾರೆ.‌‌‌ ಈ ಬೆಳವಣಿಗೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಮತ್ತೆ ಸಂಕಷ್ಟ ತಂದಿದೆ.

ಈ ಕುರಿತು ಮಾಧ್ಯಮಗಳೊಂದಿಗೆ‌ ಮಾತನಾಡಿದ ಪ್ರಶಾಂತ್ ಅವರು, ಸಂತೋಷ್ ಆತ್ಮಹತ್ಯೆ ಹಿಂದೆ ಹಲವರ ಕೈವಾಡವಿದೆ‌. ಉಡುಪಿ ಪೊಲೀಸರು ಸರಿಯಾದ ಮಾರ್ಗದಲ್ಲಿ ತನಿಖೆ ನಡೆಸದೆ ಹಾದಿ ತಪ್ಪಿಸಿದ್ದಾರೆ. ತನಿಖೆ ವೇಳೆ ಹಲವು ರೀತಿಯ ಪ್ರಭಾವ ಬೀರಲಾಗಿದೆ. ಹೀಗಾಗಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಕಾನೂನು ಹೋರಾಟ ನಡೆಸುವೆ ಎಂದಿದ್ದಾರೆ.

ಇದನ್ನೂ ಓದಿ : ಸಂತೋಷ್​ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಬಿ ರಿಪೋರ್ಟ್​ ಸಲ್ಲಿಕೆ : ಆರೋಪದಿಂದ ಮುಕ್ತನಾಗಿದ್ದೇನೆ ಎಂದ ಈಶ್ವರಪ್ಪ

ಕಾಮಗಾರಿ ನಡೆಸಿದ ಸಂಬಂಧ ಸರ್ಕಾರದಿಂದ ಬಿಲ್ ಮಂಜೂರು ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ಅವರು ಶೇ.40ರಷ್ಟು ಕಮೀಷನ್ ಕೇಳಿದ್ದರು ಎಂದು ಮೃತ ಸಂತೋಷ್ ಪಾಟೀಲ ಆರೋಪಿಸಿದ್ದರು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ರಾಜ್ಯಪಾಲರಿಗೂ ದೂರು ನೀಡಿದ್ದರು. ಈ ವಿಚಾರ ರಾಷ್ಟ್ರ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿತ್ತು.

ಕಳೆದ‌ ಏಪ್ರಿಲ್​ನಲ್ಲಿ ಉಡುಪಿ ಲಾಡ್ಜ್ ಒಂದರಲ್ಲಿ ಈಶ್ವರಪ್ಪ ಹೆಸರು ಬರೆದು ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದ‌ರು. ಈ ಸಂಬಂಧ ಎಸ್​ಪಿ ವಿಷ್ಣುವರ್ಧನ್ ನೇತೃತ್ವದಲ್ಲಿ ತನಿಖೆ ನಡೆಸಿದ ಬಳಿಕ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಬಿ ರಿಪೋರ್ಟ್ ಪ್ರಶ್ನಿಸಿ ಇದೀಗ ಸಂತೋಷ್ ಪಾಟೀಲ ಕುಟುಂಬಸ್ಥರು ಕೋರ್ಟ್ ಮೆಟ್ಟಿಲೇರಿದ್ದಾರೆ.

ಬಿ ರಿಪೋರ್ಟ್​ ಪ್ರಶ್ನಿಸಿ ಕೋರ್ಟ್​ಗೆ ಮನವಿ ಸಲ್ಲಿಸುತ್ತೇವೆ. ಕಾರಣ ತನಿಖೆ ಹಾದಿಯನ್ನು ಪ್ರಭಾವದಿಂದ ತಪ್ಪಿಸಿದ್ದಾರೆ ಎಂಬ ಅನುಮಾನ ಇದೆ. ಹಾಗೇ ಸಾಕ್ಷಿ ಇಲ್ಲದ ಕಾರಣ ಬಿ ರಿಪೋರ್ಟ್​ ನೀಡಲಾಗಿತ್ತು, ನಮ್ಮ ಬಳಿ ಸಾಕ್ಷಿ ಇದೆ ಅದನ್ನೂ ನಾವು ಕೊಡುತ್ತೇವೆ ಎಂದು ಸಂತೋಷ್​ ಪಾಟೀಲ ಸಹೋದರ ತಿಳಿಸಿದ್ದಾರೆ.

ಇದನ್ನೂ ಓದಿ : ನಾನು ಬೇಗ ಆರೋಪ ಮುಕ್ತ ಆಗಿ ಬರ್ತೇನೆ ಎಂದು ಮೊದಲೇ ಹೇಳಿದ್ದೆ: ಕೆ.ಎಸ್. ಈಶ್ವರಪ್ಪ

Last Updated : Aug 23, 2022, 6:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.