ಬೆಂಗಳೂರು: ನಗರದ ಹೋಟೆಲ್ವೊಂದರಲ್ಲಿ ಕುಕ್ಕಿಂಗ್ ಸ್ಟೀಮರ್ ಸ್ಫೋಟಗೊಂಡು ಓರ್ವ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿವೆ.
ನಗರದ ರಿಚ್ಮಂಡ್ ಸರ್ಕಲ್ನ ಉಡುಪಿ ಉಪಹಾರ ಹೋಟೆಲ್ನಲ್ಲಿ ಈ ಅವಘಡ ಸಂಭವಿಸಿದೆ. ಹಲವು ವರ್ಷಗಳಿಂದ ಅಡುಗೆ ಕೆಲಸಗಾರನಾಗಿ ಕೆಲಸ ಮಾಡುತ್ತಿದ್ದ ಅಸ್ಸೋಂ ಮೂಲದ ಮನೋಜ್ ಸಾವನ್ನಪ್ಪಿದ್ದಾರೆ. ಮತ್ತೊಬ್ಬ ನೌಕರ ಪ್ರದೀಪ್ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಫೋಟ ನಡೆದ ಹಿನ್ನೆಲೆಯಲ್ಲಿ ಮಾಹಿತಿ ಆಧರಿಸಿ ಅಗ್ನಿಶಾಮಕ ತಂಡ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿತು.