ETV Bharat / state

ಗುರುರಾಘವೇಂದ್ರ, ವಶಿಷ್ಟ ಸೌಹಾರ್ದ ಬ್ಯಾಂಕ್ ಹಗರಣ ಸಿಬಿಐಗೆ ವಹಿಸಲು ಶಿಫಾರಸು: ಸಚಿವ ಎಸ್.ಟಿ.ಸೋಮಶೇಖರ್ - ವಶಿಷ್ಟ ಸೌಹಾರ್ದ ಬ್ಯಾಂಕ್ ಹಗರಣ

ಗುರುರಾಘವೇಂದ್ರ, ವಶಿಷ್ಟ ಸೌಹಾರ್ದ ಬ್ಯಾಂಕ್ ಹಗರಣ ಸಿಬಿಐಗೆ ವಹಿಸಲು ಶಿಫಾರಸು ಮಾಡಲಾಗುವುದು ಎಂದು ಸಚಿವ ಎಸ್​ಟಿ ಸೋಮಶೇಖರ್ ಹೇಳಿದ್ದಾರೆ.

Cooperation Minister ST Somashekhar meeting
ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಸಭೆ
author img

By

Published : Jan 17, 2023, 9:21 PM IST

ಬೆಂಗಳೂರು : ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್, ವಶಿಷ್ಟ ಸೌಹಾರ್ದ ಸಹಕಾರಿ ಬ್ಯಾಂಕ್ ಗಳ ಅವ್ಯವಹಾರ ಪ್ರಕರಣವನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್​ಟಿ ಸೋಮಶೇಖರ್ ಅವರು ಹೇಳಿದ್ದಾರೆ. ವಿಕಾಸಸೌಧದಲ್ಲಿ ಇಂದು ಸಂಜೆ ನಡೆದ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್​ನ ಅವ್ಯವಹಾರಗಳು ಮತ್ತು ಪುನಃಶ್ಚೇತನ ಹಾಗೂ ವಶಿಷ್ಟ ಸೌಹಾರ್ದ ಸಹಕಾರಿ ಬ್ಯಾಂಕ್ ನ ಅವ್ಯವಹಾರಗಳ ಕುರಿತ ಪರಾಮರ್ಶೆ ಸಭೆಯಲ್ಲಿ ಮಾತನಾಡಿದ ಸಚಿವರು ಈ ಭರವಸೆ ನೀಡಿದ್ದಾರೆ.

ಗುರುರಾಘವೇಂದ್ರ, ವಶಿಷ್ಠ ಸೌಹಾರ್ದ ಸೇರಿದಂತೆ ಇತರೆ ಯಾವುದೇ ಬ್ಯಾಂಕ್​ಗಳಲ್ಲಿ ನಡೆದಿರುವ ಅವ್ಯವಹಾರಗಳಿದ್ದರೆ ಆ ಪ್ರಕರಣಗಳನ್ನು ಸಹ ಸಿಬಿಐಗೆ ವಹಿಸಲು ಶಿಫಾರಸು ಮಾಡಲಾಗುತ್ತದೆ. ಈ ಕುರಿತು ನಿರ್ಣಯ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸಹಕಾರ ಸಚಿವರು ಸೂಚಿಸಿದರು.

ಹಗರಣದ ತನಿಖೆ ಆರಂಭವಾಗಿ ಮೂರು ವರ್ಷವಾದರೂ ಸಾಲ ವಸೂಲಾತಿ ಆಗುತ್ತಿಲ್ಲ. ಸಭೆಗಳು ಮಾತ್ರ ನಡೆಯುತ್ತಿವೆಯೇ ಹೊರತು ಯಾವುದೇ ಫಲಿತಾಂಶ ಬರುತ್ತಿಲ್ಲ. ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಸಮಸ್ಯೆ ಏನು ಎಂದು ಗುರುರಾಘವೇಂದ್ರ ಬ್ಯಾಂಕ್​ನ ಆಡಳಿತಾಧಿಕಾರಿಯನ್ನು ಪ್ರಶ್ನಿಸಿದರು. ಸರ್ಕಾರದ ಮೇಲೆ ಠೇವಣಿದಾರರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಹೀಗಾಗಿ ಠೇವಣಿದಾರರ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ಪ್ರಕರಣವನ್ನು ಸಿಬಿಐಗೆ ವಹಿಸಲಾಗುವುದು. ಸಂಪುಟದಲ್ಲಿ ಈ ಕುರಿತು ಪ್ರಸ್ತಾವನೆ ಮಂಡಿಸಲಾಗುವುದು ಎಂದು ಸಚಿವರು ಹೇಳಿದರು.

ರಕ್ಷಿಸುವ ಪ್ರಶ್ನೆ ಇಲ್ಲ : ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಅಧಿಕಾರಿಗಳು ಸಮರ್ಥರಿದ್ದು ತನಿಖೆ ನಡೆಸುತ್ತಿದ್ದಾರೆ. ಆದರೆ, ಸಾಲ ವಸೂಲಾತಿಯಲ್ಲಿ ವಿಳಂಬವಾಗುತ್ತಿದೆ. ಹೀಗಾಗಿ ಸಿಬಿಐಗೆ ವಹಿಸಿದರೆ ಠೇವಣಿದಾರರಲ್ಲೂ ವಿಶ್ವಾಸ ಮೂಡಲಿದೆ ಎಂದರು. ಸಚಿವರ ಈ ಮಾತಿಗೆ ಶಾಸಕರಾದ ರವಿಸುಬ್ರಮಣ್ಯ, ಸೌಮ್ಯರೆಡ್ಡಿ, ವಿಧಾನಪರಿಷತ್ ಸದಸ್ಯ ಯುಬಿ ವೆಂಕಟೇಶ್ ಅವರು ಸಹಮತ ವ್ಯಕ್ತಪಡಿಸಿದರು. ಸಭೆಯಲ್ಲಿ ಬ್ಯಾಂಕ್​ನ ಪುನಶ್ಚೇತನ, ಸಾಲ ವಸೂಲಾತಿಯಲ್ಲಿ ಆಗಿರುವ ಪ್ರಗತಿ ಕುರಿತು ಪರಾಮರ್ಶಿಸಲಾಯಿತು. ಈ ರೀತಿ ವಂಚನೆ ತಡೆಗೆ ಕಾನೂನಿನಲ್ಲಿ ತಿದ್ದುಪಡಿ ತರುವ ಕುರಿತಂತೆ ಚರ್ಚಿಸಲಾಯಿತು.

ಹಿನ್ನೆಲೆ ಏನು? : ಹೆಚ್ಚಿನ ಬಡ್ಡಿ ಆಸೆ ತೋರಿಸಿ ಗ್ರಾಹಕರಿಂದ ಸಾವಿರಾರು ಕೋಟಿ ರೂಪಾಯಿ ವಂಚಿಸಿದ ಆರೋಪ ಹಿನ್ನೆಲೆ ಶ್ರೀಗುರುರಾಘವೇಂದ್ರ ಕೋ ಆಪರೇಟಿವ್ ಹಾಗೂ ವಸಿಷ್ಠ ಕೋಆಪರೇಟಿವ್ ಬ್ಯಾಂಕ್​ಗಳು ಮೇಲೆ ಹಲವು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಸಿಐಡಿ ಹೆಗಲಿಗೆ ಗುರುರಾಘವೇಂದ್ತ ಬ್ಯಾಂಕ್ ವಂಚನೆ ಪ್ರಕರಣ ಹಸ್ತಾಂತರವಾಗುತ್ತಿದ್ದಂತೆ ಕಳೆದ ವರ್ಷ ಬ್ಯಾಂಕ್ ಮಾಜಿ ಅಧ್ಯಕ್ಷ ಕೆ.ರಾಮಕೃಷ್ಣ ಆತ್ಮಹತ್ಯೆ ಮಾಡಿಕೊಂಡಿದ್ದರು.

ಪ್ರಕರಣದಲ್ಲಿ ಬ್ಯಾಂಕ್​ನ ಮಾಜಿ ಆಡಳಿತ ಮಂಡಳಿ ಸದಸ್ಯರು, ಬ್ಯಾಂಕ್ ಸಿಬ್ಬಂದಿ ಹಾಗೂ ಏಜೆಂಟರನ್ನು ಸಿಐಡಿ ಬಂಧಿಸಿತ್ತು. ಅಲ್ಲದೇ ಸಂಬಂಧಪಟ್ಟ ಬ್ಯಾಂಕ್​ನ ಅಧಿಕಾರಿ ಮನೆಗಳ ಮೇಲೆ ಎಸಿಬಿ ದಾಳಿ ನಡೆಸಿತ್ತು. ಜಾರಿ ನಿರ್ದೇಶಾನಾಲಯ ತನಿಖೆ ನಡೆಸಿ 45.32 ಕೋಟಿ ಮೌಲ್ಯದ ಚರಾಸ್ಥಿ ಹಾಗೂ ಸ್ಥಿರಾಸ್ಥಿ ಜಪ್ತಿ ಮಾಡಿತ್ತು.

ವಂಚನೆ ಸಂಬಂಧ ಕಳೆದ ತಿಂಗಳು ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಹಗರಣದ ಬಗ್ಗೆ ಪ್ರತಿಕ್ರಿಯಿಸಿದ್ದ ಸಹಕಾರ ಸಚಿವ ಎಸ್​ಟಿ ಸೋಮಶೇಖರ್ 5 ಲಕ್ಷದಂತೆ 22,244 ಜನಕ್ಕೆ 712.35 ಕೋಟಿ ಹಣ ವಾಪಸ್ ಮಾಡಿದ್ದೇವೆ. 1-2 ಲಕ್ಷದಂತೆ 233 ಕೋಟಿ ಹಣವನ್ನು ಮರಳಿಸಿದ್ದೇವೆ. 192 ಕೋಟಿ ಹಣ ಈವರೆಗೂ ರಿಕವರಿ ಆಗಿದೆ. ಈಗ ಪ್ರಕರಣ ಅಂತಿಮ ಘಟ್ಟಕ್ಕೆ ಬಂದಿದೆ. ಆಸ್ತಿ ಮುಟ್ಟುಗೋಲು ಹಾಕಿ ಹರಾಜು ಮಾಡಲು ಮುಂದಾಗಿದ್ದೇವೆ. 1,294 ಕೋಟಿ ಹಣವೇನಿದೆ ಅದನ್ನು ಆಸ್ತಿ ಹರಾಜು ಹಾಕಿ ವಾಪಸ್ ಕೊಟ್ಟರೆ ನ್ಯಾಯ ಸಿಗಲಿದೆ ಎಂದಿದ್ದರು. ಇನ್ನೂ ವಸಿಷ್ಠ ಸಹಕಾರಿ ಸೌಹಾರ್ದ ಬ್ಯಾಂಕ್ ವಂಚನೆ ಪ್ರಕರಣ ಸಂಬಂಧ 85 ಕೋಟಿ ಅವ್ಯವಹಾರ ನಡೆದ ಆರೋಪ ಹಿನ್ನೆಲೆ ಈ ಪ್ರಕರಣದ ತನಿಖೆ ಸಿಐಡಿ ನಡೆಸುತ್ತಿದೆ.

ಓದಿ: ಕೋಳಿ ಕಾಳಗದ ಜೂಜುಕೋರರು ಸಿಗದಿದ್ದಕ್ಕೆ ಮೂರು ಹುಂಜು ಬಂಧಿಸಿಟ್ಟ ಕಾರಟಗಿ ಪೊಲೀಸರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.