ETV Bharat / state

ದೊಡ್ಡಬಳ್ಳಾಪುರದ ಚಿಕ್ಕಪೇಟೆಯಲ್ಲಿ ಕೊರೊನಾ ಪ್ರಕರಣ ಪತ್ತೆ: ಎಸ್​​ಎಸ್​​ಎಲ್​​ಸಿ ಪರೀಕ್ಷಾ ಕೇಂದ್ರ ಬದಲಾವಣೆ

ಇಂದು ದೊಡ್ಡಬಳ್ಳಾಪುರದ ಚಿಕ್ಕಪೇಟೆಯ ವ್ಯಾಪಾರಿಗೂ ಕೊರೊನಾ ಸೋಂಕು ತಗುಲಿದ್ದು, ಚಿಕ್ಕಪೇಟೆಯನ್ನು ಸೀಲ್​​ಡೌನ್ ಮಾಡಲಾಗಿದೆ. ಇನ್ನು ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ.

author img

By

Published : Jun 28, 2020, 6:21 PM IST

Corona case detected in Chikkapet
ಚಿಕ್ಕಪೇಟೆ ಸೀಲ್​​ಡೌನ್

ದೊಡ್ಡಬಳ್ಳಾಪುರ: ಬೆಂಗಳೂರಿನೊಂದಿಗೆ ನಿಕಟ ಸಂಪರ್ಕ ಹೊಂದಿರುವ ನಗರದಲ್ಲಿ ಮೂರು ಕೊರೊನಾ ಪ್ರಕರಣ ಪತ್ತೆಯಾಗಿದೆ. ಜೂ. 26 ರಂದು ದೊಡ್ಡಬಳ್ಳಾಪುರದ ಚೈತನ್ಯ ನಗರದಲ್ಲಿ ಪ್ರಕರಣ ಪತ್ತೆಯಾಗಿದ್ದು ಎರಡೂ ಕೊರೊನಾ ಪ್ರಕರಣಕ್ಕೂ ಬೆಂಗಳೂರಿನ ನಂಟಿದೆ.

ದೊಡ್ಡಬಳ್ಳಾಪುರದ ಚಿಕ್ಕಪೇಟೆಯಲ್ಲಿ ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಎಸ್​​ಎಸ್​​ಎಲ್​​ಸಿ ಪರೀಕ್ಷಾ ಕೇಂದ್ರ ಬದಲಾವಣೆ ಮಾಡಲಾಗಿದೆ.

ಇಂದು ಚಿಕ್ಕಪೇಟೆಯ ವ್ಯಾಪಾರಿಗೂ ಕೊರೊನಾ ಸೋಂಕು ತಗುಲಿದ್ದು ಇವರು ಸಹ ವ್ಯಾಪಾರಕ್ಕೆಂದು ಬೆಂಗಳೂರಿಗೆ ಹೋಗಿ ಬರುತ್ತಿದ್ದರು. ಇನ್ನು ಚಿಕ್ಕಪೇಟೆಯನ್ನು ಸೀಲ್​​ಡೌನ್ ಮಾಡಲಾಗಿದ್ದು, ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಮಾಡಲಾಗಿದೆ.

ಚಿಕ್ಕಪೇಟೆಯಲ್ಲಿ ಎಂಎಬಿಎಲ್ ಪ್ರೌಢಶಾಲೆ ಇದ್ದು, ಈ ಶಾಲೆಯಲ್ಲಿ ಎಸ್​​ಎಸ್​​ಎಲ್​ಸಿ ಪರೀಕ್ಷಾ ಕೇಂದ್ರವನ್ನಾಗಿ ಮಾಡಲಾಗಿತ್ತು. 308 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದರು. ವೈದ್ಯರ ಸಲಹೆ ಮತ್ತು ಅಧಿಕಾರಿಗಳ ತೀರ್ಮಾನದಂತೆ ಎಂಎಬಿಎಲ್ ಪರೀಕ್ಷಾ ಕೇಂದ್ರವನ್ನು ಕಾರ್ಮಲ್ ಜ್ಯೋತಿ ಪ್ರೌಢಶಾಲೆ ಶಾಲೆಗೆ ಬದಲಾವಣೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬೈಯಪ್ಪ ರೆಡ್ಡಿ ಈಟಿವಿ ಭಾರತರಕ್ಕೆ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.