ದೇವನಹಳ್ಳಿ: ಪಟ್ಟಣದ ತಾಲೂಕು ಕಚೇರಿಯ ಎಡಿಎಲ್ಆರ್ ಸರ್ವೇ ಅಧಿಕಾರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಕಚೇರಿಯನ್ನ ಒಂದು ದಿನದ ಮಟ್ಟಿಗೆ ಸೀಲ್ ಡೌನ್ ಮಾಡಲಾಗಿದೆ.
ತಾಲೂಕು ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಎಡಿಎಲ್ಆರ್ಗೆ ಕೊರೊನಾ ಪಾಸಿಟಿವ್ ಬಂದಿದ್ದು, ಒಂದು ದಿನದ ಮಟ್ಟಿಗೆ ಕಚೇರಿಯನ್ನ ಸೀಲ್ ಡೌನ್ ಮಾಡಲಾಗಿದೆ. ಅಲ್ಲದೇ ಕಚೇರಿಯನ್ನ ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ ಎಂದು ತಹಶೀಲ್ದಾರ್ ಅಜಿತ್ ಕುಮಾರ್ ರೈ ತಿಳಿಸಿದ್ದಾರೆ.
ತಾಲೂಕು ಕಚೇರಿಗೆ ಕೆಲಸದ ನಿಮಿತ್ತ ಆಗಮಿಸುತ್ತಿರುವ ಸಾರ್ವಜನಿಕರು ಸೀಲ್ ಡೌನ್ ಆಗಿರುವ ಕಚೇರಿಯನ್ನು ನೋಡಿ ವಾಪಸ್ ತೆರಳುತ್ತಿದ್ದಾರೆ.