ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಅವರ ಆಪ್ತ ಸಹಾಯಕನಿಗೂ ಕೊರೊನಾ ಸೋಂಕು ತಗುಲಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಂಟೈನ್ಮೆಂಟ್ ಝೋನ್ಗಳ ಪರಿಶೀಲನೆ, ಹಲವು ಸಭೆಗಳಲ್ಲಿ ಪಾಲ್ಗೊಂಡ ಹಿನ್ನೆಲೆ ಸೋಂಕು ತಗುಲಿರುವ ಸಾಧ್ಯತೆ ಇದೆ.
ಇತ್ತೀಚೆಗೆ ಪಾಲಿಕೆಯ ಹಲವು ಸಿಬ್ಬಂದಿ, ನೌಕರರು, ಅಧಿಕಾರಿಗಳಿಗೆ ಕೊರೊನಾ ಸೋಂಕು ತಗುಲಿತ್ತು. ಇದೀಗ ಆಯುಕ್ತರ ಪಿಎಗೆ ಕೊರೊನಾ ಬಂದಿರುವುದರಿಂದ ಆಯುಕ್ತರು ಸಹ ಕ್ವಾರಂಟೈನ್ಗೆ ಒಳಗಾಗುವ ಸಾಧ್ಯತೆ ಇದೆ.