ETV Bharat / state

ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರತಿ ಜಿಲ್ಲೆಗಳ ಮಾಹಿತಿ ಪಡೆದ ಸಿಎಂ - ಸಿಎಂ ವೀಡಿಯೋ ಕಾನ್ಫರೆನ್ಸ್

ಕೊರೊನಾ ಸೋಂಕು‌ ತಡೆಗೆ‌ ಈಗಾಗಲೇ ಸರ್ಕಾರ ಸಾಕಷ್ಟು ಮುನ್ನೆಚ್ಚರಿಕೆ ವಹಿಸಿದ್ದು, ಪ್ರತಿ ಜಿಲ್ಲೆಯಲ್ಲೂ ಪರಿಸ್ಥಿತಿ ಹೇಗಿದೆ ಎಂದು ತಿಳಿದುಕೊಳ್ಳಲು ಸಿಎಂ ಯಡಿಯೂರಪ್ಪ ಆಯಾ ಜಿಲ್ಲೆಗಳ ಡಿಸಿ, ಸಿಇಒ, ಎಸ್ಪಿ ಜಿಲ್ಲಾ ಆರೋಗ್ಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

CM Video Conversation with DC
ಕೊರೊನಾ ನಿಯಂತ್ರಣ: ಡಿಸಿಗಳ ಜೊತೆ ಸಿಎಂ ವೀಡಿಯೋ ಸಂವಾದ
author img

By

Published : Mar 16, 2020, 4:56 PM IST

ಬೆಂಗಳೂರು: ಕೊರೊನಾ ಸೋಂಕು‌ ತಡೆಗೆ‌ ಏನೇನು‌ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಎಲ್ಲಾ ಜಿಲ್ಲೆಗಳ ಜಿಲ್ಲಾಡಳಿತಗಳಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಸಂವಾದದ ಮೂಲಕ‌ ಸಮಗ್ರ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿರವ ಸಿಎಂ, ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ‌ ಆರೋಗ್ಯಾಧಿಕಾರಿಗಳ ಜೊತೆ ಮಾತುಕತೆ ನಡೆಸಿದರು. ಕೊರೊನಾ ನಿಯಂತ್ರಣಕ್ಕಾಗಿ ಮಾರ್ಚ್ 15ರಂದು ಸರ್ಕಾರ ಹೊರಡಿಸಿರುವ ಅಧಿಸೂಚನೆ ಕಟ್ಟುನಿಟ್ಟಾಗಿ ಜಾರಿ‌ಗೆ ತಂದಿರವ ಬಗ್ಗೆ ಸೂಕ್ತ ಮೇಲ್ವಿಚಾರಣೆ ನಡೆಸಬೇಕು. ಜನರಲ್ಲಿ ಆತಂಕವಿರುತ್ತದೆ. ಹಾಗಾಗಿ ಅವರ ವಿಶ್ವಾಸದಿಂದ ಆದೇಶವನ್ನು ಜಾರಿಗೆ ತರಬೇಕು. ವಿಮಾನ ನಿಲ್ದಾಣ, ಗಡಿ‌ ಪ್ರದೇಶ, ಜಿಲ್ಲೆ‌ ಪ್ರವೇಶ ಮಾಡುವ ಪ್ರಯಾಣಿಕರ ತಪಾಸಣೆ ಮಾಡಬೇಕು. ಎಲ್ಲರೂ ಸೇರಿ‌ ಪರಿಸ್ಥಿತಿ ನಿಭಾಯಿಸೋಣ. ಇದರಲ್ಲಿ ನಿಮಗೆ ಏನಾದರೂ ತೊಡಕಿದ್ದರೆ ಅದನ್ನು ನಿವಾರಿಸಲು ಸರ್ಕಾರ ಸಿದ್ಧವಿದೆ ಎಂದು ಅಭಯ ನೀಡಿದರು.

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು‌ ಜಾಸ್ತಿಯಾಗುತ್ತಿದೆ. ಹಾಗಾಗಿ ಆ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಕಲಬುರಗಿ, ಯಾದಗಿರಿ, ಬೀದರ್, ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚು ಗಮನ ಕೊಡಿ. ಹೈದರಾಬಾದ್, ಮುಂಬೈ ಕಡೆಯಿಂದ ಬರುವ ಜನರ ಬಗ್ಗೆ ನಿಗಾ ಇಡಿ ಎಂದು ಸಲಹೆ ನೀಡಿದರು. ನಂತರ ಮಂಡ್ಯ ಜಿಲ್ಲೆಯಿಂದ ಆರಂಭಗೊಂಡು ಎಲ್ಲಾ ಜಿಲ್ಲೆಗಳ ಜಿಲ್ಲಾಡಳಿತದಿಂದ ಆಯಾ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪರೀಕ್ಷೆ, ನಿಗಾ ಇರಿಸಿರುವವರ ಮಾಹಿತಿ, ಕೊರೊನಾ ನಿಯಂತ್ರಣಕ್ಕೆ ಕೈಗೊಂಡಿರುವ ಮುನ್ನೆಚ್ಚರಿಕಾ ಕ್ರಮಗಳು, ಆಸ್ಪತ್ರೆಯಲ್ಲಿ ಮಾಡಿರುವ ವ್ಯವಸ್ಥೆ ಸೇರಿದಂತೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.