ಬೆಂಗಳೂರು: ಕೋವಿಡ್ ಓಡಿಸಲು ವ್ಯಾಕ್ಸಿನ್ ಅಸ್ತ್ರದ ಪ್ರಯೋಗಕ್ಕೆ ಸರ್ಕಾರ ಮುಂದಾಗಿದೆ. ಇಂದಿನಿಂದ ಕೋವಿಡ್ ವ್ಯಾಕ್ಸಿನ್ ಡ್ರೈ ರನ್ ಆರಂಭವಾಗ್ತಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸಕಲ ತಯಾರಿ ಮಾಡಿಕೊಂಡಿದ್ದು, ಲಕ್ಷಾಂತರ ಮಂದಿ ಈ ವ್ಯಾಕ್ಸಿನ್ಗಾಗಿ ನೋಂದಣಿ ಮಾಡಿಕೊಂಡಿದ್ದಾರೆ.
ಮೊದಲ ಹಂತದಲ್ಲಿ ಅಸ್ಸೋಂ ಸೇರಿದಂತೆ 4 ರಾಜ್ಯಗಳಲ್ಲಿ ಕೋವಿಡ್ ವ್ಯಾಕ್ಸಿನ್ ಡ್ರೈ ರನ್ ಮಾಡಲಾಗಿತ್ತು. ಇದು ಯಶಸ್ವಿಯಾದ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿ 2ನೇ ಹಂತದಲ್ಲಿ ಡ್ರೈ ರನ್ಗೆ ಕೌಂಟ್ಡೌನ್ ಶುರುವಾಗಿದೆ. ಇದಕ್ಕಾಗಿ ರಾಜ್ಯದ 5 ಜಿಲ್ಲೆಗಳಾದ ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ: ರಾಷ್ಟ್ರಾದ್ಯಂತ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಡ್ರೈ ರನ್
ಒಟ್ಟು 6.22 ಲಕ್ಷ ಜನರು ವ್ಯಾಕ್ಸಿನೇಷನ್ಗೆ ನೋಂದಣಿ ಮಾಡಿಕೊಂಡಿದ್ದಾರೆ. ಡ್ರೈ ರನ್ ತಾಲೂಕು, ಜಿಲ್ಲಾಸ್ಪತ್ರೆಗಳಲ್ಲಿ ನಡೆಯಲಿದೆ. ಈ ಮೂಲಕ ಕೊರೊನಾ ವ್ಯಾಕ್ಸಿನೇಷನ್ ಮಾಡುವಾಗ ಎದುರಾಗುವ ಸಮಸ್ಯೆಗಳ ಬಗ್ಗೆಯೂ ಗಮನಹರಿಸಲಾಗುತ್ತದೆ.
ಆರೋಗ್ಯ ಸಿಬ್ಬಂದಿಯಿಂದ ಪ್ರತಿ ಹಂತದಲ್ಲಿ 25 ಜನರಿಗೆ ಕೊರೊನಾ ವ್ಯಾಕ್ಸಿನ್ ನೀಡಲಾಗುತ್ತದೆ. ಇದಕ್ಕಾಗಿ ಎಲ್ಲಾ ಸಿದ್ಧತೆಗಳು ರಾಜ್ಯ ಸರ್ಕಾರ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ.