ETV Bharat / state

ಕೊರೊನಾ ಭೀತಿ : ಹೈಕೋರ್ಟ್‌ಗೆ ಏಪ್ರಿಲ್ 6ವರೆಗೆ ರಜೆ - ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ

ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ಅವರ ಸೂಚನೆ ಮೇರೆಗೆ ಹೈಕೋರ್ಟ್‌ ರಿಜಿಸ್ಟ್ರಾರ್​​ ಜನರಲ್ ಇಂದು ಸಂಜೆ ಅಧಿಸೂಚನೆ ಹೊರಡಿಸಿದ್ದು, ನಾಳೆಯಿಂದ ಏ.6ರವರೆಗೆ ಬೆಂಗಳೂರಿನ ಪ್ರಧಾನ ಪೀಠ, ಕಲಬುರಗಿ ಮತ್ತು ಧಾರವಾಡ ಸಂಚಾರಿ ಪೀಠಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ.

ಹೈಕೋರ್ಟ್‌
ಹೈಕೋರ್ಟ್‌
author img

By

Published : Mar 23, 2020, 10:32 PM IST

ಬೆಂಗಳೂರು: ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಾರ್ಚ್‌ 24ರಿಂದ ಏಪ್ರಿಲ್ 6ರವರೆಗೆ ಹೈಕೋರ್ಟ್​ ರಜೆಯಲ್ಲಿರಲಿದೆ.

ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ಅವರ ಸೂಚನೆ ಮೇರೆಗೆ ಹೈಕೋರ್ಟ್‌ ರಿಜಿಸ್ಟ್ರಾರ್​​​​ ಜನರಲ್ ಇಂದು ಸಂಜೆ ಅಧಿಸೂಚನೆ ಹೊರಡಿಸಿದ್ದು, ನಾಳೆಯಿಂದ ಏ.6ರವರೆಗೆ ಬೆಂಗಳೂರಿನ ಪ್ರಧಾನ ಪೀಠ, ಕಲಬುರಗಿ ಮತ್ತು ಧಾರವಾಡ ಸಂಚಾರಿ ಪೀಠಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ.

ಇನ್ನು ಈ ಅವಧಿಯಲ್ಲಿ ಮಾ.24 ಮತ್ತು 26ರಂದು ಎರಡು ದಿನ ಬೆಂಗಳೂರಿನ ಪ್ರಧಾನ ಪೀಠ ಬೆಳಗ್ಗೆ 11 ರಿಂದ ಮಧ್ಯಾಹ್ನ 12-30ರವರೆಗೆ ಮಾತ್ರ ಕಾರ್ಯ ನಿರ್ವಹಿಸಲಿದೆ. ಈ ಎರಡು ದಿನಗಳು ಅತ್ಯಂತ ತುರ್ತು ಪ್ರಕರಣಗಳನ್ನು ಮಾತ್ರ ಪೀಠ ವಿಚಾರಣೆ ನಡೆಸಲಿದೆ. ಕಲಬುರಗಿ ಮತ್ತು ಧಾರವಾಡ ಸಂಚಾರಿ ಪೀಠಗಳು ಮಾ.24ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 12 - 30ರವರೆಗೆ ಮಾತ್ರ ಕಾರ್ಯನಿರ್ವಹಿಸಲಿವೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.