ಬೆಂಗಳೂರು : ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಇಸ್ಕಾನ್ ದೇವಸ್ಥಾನದಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಆದರೆ, ಕೊರೊನಾ ಹಿನ್ನೆಲೆ ಈ ಬಾರಿ ಇಸ್ಕಾನ್ಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.
ಈ ಬಾರಿ ಆ.29 ಮತ್ತು 30ರಂದು ಇಸ್ಕಾನ್ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಿದೆ. ಆ ದಿನ ಲಕ್ಷಗಟ್ಟಲೇ ಭಕ್ತರು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಆದರೆ, ಕೊರೊನಾ ಹಿನ್ನೆಲೆ ಸಾರ್ವಜನಿಕರ ಸುರಕ್ಷತೆ ಮತ್ತು ಸರ್ಕಾರಿ ನಿಯಮಗಳನ್ನು ಪರಿಗಣಿಸಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಈ ಕುರಿತಂತೆ ಇಸ್ಕಾನ್ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.
ಶ್ರೀಕೃಷ್ಣ ಜನ್ಮಾಷ್ಟಮಿ ದಿನ ಕೇವಲ ದೇವಾಲಯದ ಆಡಳಿತ ಮಂಡಳಿಯವರು ಹಬ್ಬದ ವೇಳಾಪಟ್ಟಿಯ ಪ್ರಕಾರ ಎಲ್ಲಾ ಸೇವೆಗಳನ್ನು ದೇವರಿಗೆ ಅರ್ಪಿಸಲಿದ್ದಾರೆ. ಇದರ ಜೊತೆಗೆ ಆನ್‌ಲೈನ್ ಮೂಲಕ ಭಕ್ತರು ದೇವರ ದರ್ಶನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಇಸ್ಕಾನ್ ಬೆಂಗಳೂರಿನ ಯೂಟ್ಯೂಬ್ ಚಾನೆಲ್ ಮತ್ತು ಇತರ ಸಾಮಾಜಿಕ ಜಾಲತಾಣಗಳಲ್ಲಿ ವೀಕ್ಷಿಸಬಹುದು. www.iskconbangalore.org ಈ ಅಧಿಕೃತ ವೆಬ್ಸೈಟ್ನಲ್ಲಿ ಇಸ್ಕಾನ್ ಪೂಜಾ ಕಾರ್ಯಗಳನ್ನು ನೋಡಬಹುದಾಗಿದೆ.