ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಈಗಾಗಲೇ ಬೆಂಗಳೂರಿನಲ್ಲಿ 68 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಹೀಗಾಗಿ, ನಗರ ಪ್ರದೇಶಗಳಲ್ಲಿ ಹೆಚ್ಚು ಫೀವರ್ ಕ್ಲಿನಿಕ್ ಸ್ಥಾಪಿಸುವಂತೆ ಆರೋಗ್ಯ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ.
ಫೀವರ್ ಕ್ಲಿನಿಕ್ ಸ್ಥಾಪನೆ ಬಗ್ಗೆ ಸರ್ಕಾರದ ಸುತ್ತೋಲೆ ಕೋವಿಡ್-19 ರೋಗವು ಜ್ವರ, ಕೆಮ್ಮು, ಉಸಿರಾಟದ ತೊಂದರೆ, ಅತಿಸಾರ, ಬೇಧಿ ಮುಖಾಂತರ ಕಾಣಿಸಿಕೊಳ್ಳುತ್ತಿದ್ದು, ಇದರಲ್ಲಿ ಹೆಚ್ಚಾಗಿ ಜ್ವರ ಪ್ರಕರಣಗಳು ದಾಖಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಜ್ವರ ಪ್ರಕರಣಗಳನ್ನು ಶೀಘ್ರ ಪತ್ತೆ ಹಚ್ಚುವುದು ಅನಿವಾರ್ಯ. ಹೀಗಾಗಿ ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ ನಗರ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿದ್ದು ಅವುಗಳನ್ನ ಫೀವರ್ ಕ್ಲಿನಿಕ್ ಗಳನ್ನಾಗಿ ಮಾರ್ಪಡಿಸಲು ಆದೇಶಿಸಲಾಗಿದೆ.ಈಗಾಗಲೇ ಪಾಲಿಕೆ ವ್ಯಾಪ್ತಿಯಲ್ಲಿ 31 ಫೀವರ್ ಕ್ಲಿನಿಕ್ ಗಳು ಸ್ಥಾಪನೆಯಾಗಿದ್ದು, ನಗರ ಪ್ರದೇಶಗಳಲ್ಲಿ ನಾಳೆಯೊಳಗೆ 50 ಫೀವರ್ ಕ್ಲಿನಿಕ್ಗಳ ಸ್ಥಾಪನೆಗೆ ಆದೇಶ ಹೊರಡಿಸಲಾಗಿದೆ.