ಬೆಂಗಳೂರು: ರಾಜ್ಯದಲ್ಲಿಂದು 1,53,740 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಇದರಲ್ಲಿ 2,290 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 28,67,158 ಕ್ಕೆ ಏರಿಕೆಯಾಗಿದೆ.
ಈ ಮೂಲಕ ಪಾಸಿಟಿವಿಟಿ ದರ ಶೇ 1.48ರಷ್ಟಿದೆ. ಇನ್ನು 3,045 ಸೋಂಕಿತರು ಗುಣಮುಖರಾಗಿದ್ದಾರೆ. ಈ ತನಕ 27,93,498 ಜನರು ಡಿಸ್ಚಾರ್ಜ್ ಆಗಿದ್ದಾರೆ.
ಇತ್ತ ಸಕ್ರಿಯ ಪ್ರಕರಣಗಳು 37,906 ರಷ್ಟಿವೆ. ಇಂದು 68 ಸೋಂಕಿತರು ಮೃತರಾಗಿದ್ದು ಸಾವಿನ ಸಂಖ್ಯೆ 35,731 ಕ್ಕೆ ಏರಿದೆ. ಸಾವಿನ ಪ್ರಮಾಣ ಶೇ 2.96ರಷ್ಟು ಇದೆ. ಯುಕೆಯಿಂದ 137 ಪ್ರಯಾಣಿಕರು ಆಗಮಿಸಿದ್ದಾರೆ.