ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಮಾಣ ಸ್ಥಿರವಾಗಿದ್ದು, ಇಂದು 1,240 ಜನರು ಸೋಂಕಿಗೆ ತುತ್ತಾಗಿದ್ದಾರೆ. 22 ಜನರು ಮೃತರಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 29,51,844ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 37,361ಕ್ಕೆ ತಲುಪಿದೆ.
1,252 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಬಿಡುಗಡೆಯಾದವರ ಸಂಖ್ಯೆ 28,96,079ಕ್ಕೆ ಏರಿಕೆಯಾಗಿದೆ. ಪ್ರಸ್ತುತ 18,378 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ.0.74ರಷ್ಟಿದ್ದರೆ, ಸಾವಿನ ಪ್ರಮಾಣ ಶೇ 1.77ರಷ್ಟಿದೆ.
![ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಮಾಣ ಸ್ಥಿರ](https://etvbharatimages.akamaized.net/etvbharat/prod-images/12952103_dfgh.jpg)
ಬೆಂಗಳೂರು ನಗರದಲ್ಲಿ 319, ದಕ್ಷಿಣ ಕನ್ನಡ 264, ಉಡುಪಿ ಜಿಲ್ಲೆಯಲ್ಲಿ 111 ಜನರು ಹೊಸದಾಗಿ ಸೋಂಕಿಗೆ ತುತ್ತಾಗಿದ್ದಾರೆ. ಹಾವೇರಿ ಮತ್ತು ಬೀದರ್‌ನಲ್ಲಿ ಯಾವುದೇ ಸೋಂಕಿನ ಪ್ರಕಣಗಳು ವರದಿಯಾಗಿಲ್ಲ.
ಸೆಪ್ಟೆಂಬರ್ 2 ರಂದು 19 ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾದ ಬಗ್ಗೆ ಯಾವುದೇ ವರದಿಯಾಗಿಲ್ಲ. ಇನ್ನುಳಿದ ಜಿಲ್ಲೆಗಳಲ್ಲಿ ಸಾವಿನ ಸಂಖ್ಯೆ ಒಂದಂಕಿ ದಾಟಿಲ್ಲ. ಇಂದು ರಾಜ್ಯದಲ್ಲಿ 1,65,386 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 30,567 ಜನರಿಗೆ ರ್ಯಾಪಿಡ್ ಹಾಗೂ 1,34,819 ಜನರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಲಾಗಿದೆ.