ಬೆಂಗಳೂರು: ಜೀವನ್ ಭೀಮಾ ನಗರ ಠಾಣೆಯ ಮೂವರು ಆರೋಪಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಠಾಣೆಯನ್ನು ತಾತ್ಕಾಲಿಕವಾಗಿ ಇಂದಿರಾ ನಗರ ಪೊಲೀಸ್ ಸ್ಟೇಷನ್ಗೆ ಸ್ಥಳಾಂತರಿಸಲಾಗಿದೆ.
ಜೀವನ್ ಭೀಮಾ ನಗರ ಠಾಣೆಯ 24 ಪೊಲೀಸರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಗೇಶ್ ಪಾಳ್ಯದ ಮೂವರು ಆರೋಪಿಗಳನ್ನು ಬಂಧಿಸಿ, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ಮೂವರು ಆರೋಪಿಗಳಿಗೂ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.
ಕೂಡಲೇ ಆರೋಪಿಗಳನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಆರೋಪಿಗಳ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ, 24 ಪೊಲೀಸ್ ಸಿಬ್ಬಂದಿಯನ್ನು ಕ್ವಾರಂಟೈನ್ಗೆ ಒಳಪಡಿಸಿ ಠಾಣೆಯನ್ನೇ ಶಿಫ್ಟ್ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.